Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:21 - ಕನ್ನಡ ಸಮಕಾಲಿಕ ಅನುವಾದ

21 ಆದರೆ ಯೇಸು ದೇವರ ಆಣೆಯಿಂದಲೇ ಯಾಜಕರಾದರು. ಹೀಗೆ ದೇವರು ಹೇಳಿದ್ದೇನೆಂದರೆ: “ ಕರ್ತ ಆಗಿರುವ ನಾನು ಆಣೆಯಿಟ್ಟು ಹೇಳಿದ್ದೇನೆ. ನಾನು ಎಂದಿಗೂ ಮನಸ್ಸನ್ನು ಬದಲಾಯಿಸುವುದಿಲ್ಲ. ‘ನೀನು ಸದಾಕಾಲವೂ ಯಾಜಕನಾಗಿದ್ದೀ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ “‘ನೀನು ಸದಾಕಾಲವೂ ಯಾಜಕನಾಗಿದ್ದೀ’ ಎಂದು ನಾನು ಪ್ರಮಾಣಮಾಡಿ ನುಡಿದಿದ್ದೇನೆ ಮತ್ತು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ” ಎಂಬುದಾಗಿ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇವರಾದರೋ “ಎಂದೆಂದಿಗೂ ನೀ ಯಾಜಕನೆಂದು ಸರ್ವೇಶ್ವರನೇ ಪ್ರಮಾಣಿಸಿಹರು ಮನಸ್ಸನ್ನೆಂದೂ ಬದಲಾಯಿಸರವರು,” ಎಂಬ ಶಪಥ ಪಡೆದಿರುವ ಯಾಜಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕ್ರಿಸ್ತನು ದೇವರ ವಾಗ್ದಾನದಂತೆ ಯಾಜಕನಾದನು. ದೇವರು ಆತನಿಗೆ ಹೇಳಿದ್ದೇನೆಂದರೆ: “‘ನೀನು ಸದಾಕಾಲವೂ ಯಾಜಕನಾಗಿರುವೆ’ ಎಂದು ಪ್ರಭುವೆಂಬ ನಾನು ವಾಗ್ದಾನ ಮಾಡಿದೆನು. ಇದಕ್ಕಾಗಿ ನಾನೆಂದಿಗೂ ಪಶ್ಚಾತ್ತಾಪಪಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜು ಕ್ರಿಸ್ತ್ ದೆವಾಚ್ಯಾ ಗೊಸ್ಟಿ ಸಾರ್ಕೊಚ್ ಯಾಜಕ್ ಹೊಲೊ, ದೆವಾನ್ ತೆಕಾ ಸಾಂಗಲ್ಲೆ ಕಾಯ್ ಮಟ್ಲ್ಯಾರ್, ತಿಯಾ ಕನ್ನಾಬಿ ಯಾಜಕ್ ಹೊವ್ನ್ ರ್‍ಹಾತೆಯ್ ಮನುನ್ ದೆವ್ ಮನ್ತಲೊ ಮಿಯಾ ಆನ್ ಘಾಲುನ್ ಸಾಂಗ್ತಾ. ಹೆಚ್ಯಾಸಾಟ್ನಿ ಮಿಯಾ ಪರತ್ ಘೆಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:21
10 ತಿಳಿವುಗಳ ಹೋಲಿಕೆ  

“ನೀವು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಯಾಜಕರಾಗಿದ್ದೀರಿ,” ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. ಅವರು ತಮ್ಮ ಮನಸ್ಸನ್ನು ಬದಲಾಯಿಸರು.


ಕರ್ತ ಯೇಸುವಿನ ವಿಷಯದಲ್ಲಿ, “ನೀನು ಸದಾಕಾಲವೂ, ಮೆಲ್ಕಿಜೆದೇಕನ ಕ್ರಮದ ಯಾಜಕನಾಗಿದ್ದೀ,” ಎಂಬ ಸಾಕ್ಷಿಯಿದೆ.


ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.


ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ದೇವರು ಕೊಡುವ ವರಗಳನ್ನು, ಕರೆಗಳನ್ನು ಅವರು ಎಂದಿಗೂ ಹಿಂತೆಗೆದುಕೊಳ್ಳುವವರಲ್ಲ.


ದೇವರು ಇನ್ನೊಂದು ಸ್ಥಳದಲ್ಲಿ: “ನೀನು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಪ್ರಕಾರವಿರುವ ಯಾಜಕನು!” ಎಂದು ಹೇಳುತ್ತಾರೆ.


ಇದಂತೂ ಆಣೆಯಿಲ್ಲದೆ ಆಗಿರುವಂಥದ್ದಲ್ಲ! ಲೇವಿಯರು ಆಣೆಯಿಲ್ಲದೆಯೇ ಯಾಜಕರಾದರು,


ಒಂದು ಕಡೆ ಆ ಯಾಜಕರು ಮುಂದುವರಿಯದಂತೆ ಮರಣವು ಅಡ್ಡಿಯಾದದ್ದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು.


ಏಕೆಂದರೆ ಮೋಶೆಯ ನಿಯಮವು ಬಲಹೀನರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಿಸುತ್ತದೆ. ಆದರೆ ಮೋಶೆಯ ನಿಯಮದ ತರುವಾಯ ದೇವರ ಆಣೆಯೊಡನೆ ಬಂದ ವಾಕ್ಯವು ನಿತ್ಯವಾಗಿ ಪರಿಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು