Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:27 - ಕನ್ನಡ ಸಮಕಾಲಿಕ ಅನುವಾದ

27 ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪಪರಿಹಾರಕ್ಕಾಗಿ ಸಮರ್ಪಣೆಮಾಡುವ ಲೇವಿಕ ಮಹಾಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸಬೇಕಾದ ಅವಶ್ಯವಿಲ್ಲ. ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆತನು ಬೇರೆ ಯಾಜಕರಂತಲ್ಲ. ಅವರಾದರೋ ಪ್ರತಿ ದಿನವೂ ಯಜ್ಞಗಳನ್ನು ಅರ್ಪಿಸಬೇಕು. ಅವರು ತಮ್ಮ ಸ್ವಂತ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಿದ ನಂತರ ಬೇರೆಯವರ ಪಾಪಗಳಿಗಾಗಿ ಅರ್ಪಿಸಬೇಕು. ಆದರೆ ಕ್ರಿಸ್ತನು ಹಾಗೆ ಮಾಡಬೇಕಾಗಿಲ್ಲ. ಆತನು ತನ್ನನ್ನೇ ಯಜ್ಞವಾಗಿ ಅರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಯಾಜಕ್ ಸದ್ದಿಬಿ ಬಲಿ ಭೆಟ್ವುಚೆ ಹೊಲ್ಲೆ ತೆನಿ ಅಪ್ಲ್ಯಾ ಸ್ವತಾಚ್ಯಾ ಪಾಪಾಕ್ನಿ ಬಲಿ ಭೆಟ್ವುನ್ ಮಾನಾ ಲೊಕಾಂಚ್ಯಾ ಪಾಪಾಕ್ನಿ ಬಲಿ ಭೆಟ್ವುಚೆ, ಹೊಲ್ಯಾರ್ ಜೆಜು ತೆಂಚ್ಯಾ ಸಾರ್ಕೊ ನ್ಹಯ್, ತೆನಿ ಅಪ್ನಾಕುಚ್ ಬಲಿ ಕರುನ್ ಕುರ್ಸಾರ್ ಒಪ್ಸುನ್ ದಿವ್ನ್ ಎಕುಚ್‍ದಾ ಬಲಿ ಕರ್‍ತಲೆ ಕಾಮಾ ಕರುನ್ ಸಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:27
23 ತಿಳಿವುಗಳ ಹೋಲಿಕೆ  

ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಆ ಬಲಹೀನತೆಯ ಕಾರಣದಿಂದ ಆತನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಬೇಕಾದವನಾಗಿದ್ದಾನೆ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಕ್ರಿಸ್ತ ಯೇಸು ಪಾಪದ ಪಾಲಿಗೆ ಸತ್ತದ್ದೂ ಒಂದೇ ಸಾರಿಯಾಗಿರುತ್ತದೆ. ಆದರೆ, ಅವರು ಜೀವಿಸುವ ಜೀವಿತವು ದೇವರಿಗಾಗಿಯೇ.


ಇದಲ್ಲದೆ ಮಹಾಯಾಜಕನು ಪ್ರತಿವರ್ಷವೂ ತನ್ನ ಸ್ವಂತದ್ದಾಗಿರದ ರಕ್ತವನ್ನು ತೆಗದುಕೊಂಡು ಅತಿ ಪವಿತ್ರ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಯೇಸು ತಮ್ಮನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಪ್ರವೇಶಿಸಲಿಲ್ಲ.


“ಇದಲ್ಲದೆ ಆರೋನನು ಪಾಪ ಪರಿಹಾರದ ಬಲಿಯಾಗಿರುವ ಹೋರಿಯನ್ನು ತಂದು, ತನಗೋಸ್ಕರ ಮತ್ತು ತನ್ನ ಮನೆತನದವರಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ತನಗೋಸ್ಕರ ದೋಷಪರಿಹಾರಕ ಬಲಿಯಾಗಿ ಆ ಹೋರಿಯನ್ನು ವಧಿಸಬೇಕು.


ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೆ ಒಂದೇ ಸಾರಿ ಪ್ರವೇಶಿಸುತ್ತಿದ್ದನು. ಅವನು ರಕ್ತವನ್ನು ತೆಗೆದುಕೊಳ್ಳದೆ ಎಂದಿಗೂ ಹೋಗುತ್ತಿರಲಿಲ್ಲ. ಬಲಿಯ ರಕ್ತವನ್ನು ತನಗೋಸ್ಕರವೂ ಜನರು ತಿಳಿಯದೆ ಮಾಡಿದ ಪಾಪಗಳಿಗೋಸ್ಕರವೂ ಸಮರ್ಪಿಸುತ್ತಿದ್ದನು.


ಪ್ರತಿಯೊಬ್ಬ ಮಹಾಯಾಜಕ ಮನುಷ್ಯರೊಳಗಿಂದ ಆರಿಸಲಾಗಿ ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗಾಗಿ ಸಮರ್ಪಿಸಲು ಮನುಷ್ಯರ ಪರವಾಗಿ ದೇವರ ಕಾರ್ಯಗಳಿಗಾಗಿ ನೇಮಿಸಲಾಗುತ್ತಾನಲ್ಲಾ.


“ತರುವಾಯ ಅವನು ಜನರಿಗೋಸ್ಕರ ಪಾಪ ಪರಿಹಾರದ ಬಲಿಯಾಗಿರುವ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯ ಒಳಗಡೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಕರುಣಾಸನದ ಮೇಲೆಯೂ, ಕರುಣಾಸನದ ಮುಂದೆಯೂ ಚಿಮುಕಿಸಬೇಕು.


“ಇದಲ್ಲದೆ ಆರೋನನು ತನಗೋಸ್ಕರ ಪಾಪ ಪರಿಹಾರದ ಬಲಿಗಾಗಿ ತನ್ನ ಹೋರಿಯನ್ನು ಸಮರ್ಪಿಸಿ, ತನ್ನ ಮನೆಯವರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.


ನೀವೂ ಸಹ ಆತ್ಮನ ಮೂಲಕ ಕ್ರಿಸ್ತನಲ್ಲಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ನಿರ್ಮಿತರಾಗುತ್ತಿದ್ದೀರಿ.


ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಸೇವೆ ಮಾಡುವುದಕ್ಕಾಗಿ ನನ್ನ ಬಳಿಗೆ ಸಮೀಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯರಿಗೂ ದೋಷಪರಿಹಾರ ಬಲಿಗಾಗಿ ಎಳೆಯ ಹೋರಿಯನ್ನು ಕೊಡಬೇಕು.


ಯೇಸು ಭೂಮಿಯ ಮೇಲೆ ಇರುವುದಾದರೆ ಯಾಜಕರೇ ಆಗುತ್ತಿರಲಿಲ್ಲ. ಏಕೆಂದರೆ ಮೋಶೆಯ ನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.


ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು