Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:28 - ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ ಮೋಶೆಯ ನಿಯಮವು ಬಲಹೀನರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಿಸುತ್ತದೆ. ಆದರೆ ಮೋಶೆಯ ನಿಯಮದ ತರುವಾಯ ದೇವರ ಆಣೆಯೊಡನೆ ಬಂದ ವಾಕ್ಯವು ನಿತ್ಯವಾಗಿ ಪರಿಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಧರ್ಮಶಾಸ್ತ್ರ ನೇಮಿಸುವ ಪ್ರಧಾನಯಾಜಕರು ಕುಂದುಕೊರತೆಯುಳ್ಳ ಮಾನವರು. ಆದರೆ, ಧರ್ಮಶಾಸ್ತ್ರದ ತರುವಾಯ ಬಂದ ಹಾಗೂ ಶಪಥದಿಂದ ಕೂಡಿದ ದೈವವಾಕ್ಯವು ಸದಾ ಸರ್ವಸಂಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಧರ್ಮಶಾಸ್ತ್ರವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇವಿುಸುತ್ತದೆ; ಆದರೆ ಧರ್ಮಶಾಸ್ತ್ರದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ನೇವಿುಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಧರ್ಮಶಾಸ್ತ್ರವು ಮನುಷ್ಯರೊಳಗಿಂದ ಪ್ರಧಾನ ಯಾಜಕರನ್ನು ಆರಿಸುತ್ತದೆ. ಆರಿಸಲ್ಪಟ್ಟ ಈ ಜನರು ಮಾನವ ದೌರ್ಬಲ್ಯಗಳನ್ನು ಹೊಂದಿದವರಾಗಿದ್ದಾರೆ. ಆದರೆ ದೇವರು ಧರ್ಮಶಾಸ್ತ್ರದ ನಂತರ ಮಾಡಿದ ವಾಗ್ದಾನ ದೇವರ ಮಗನನ್ನು ಪ್ರಧಾನ ಯಾಜಕನನ್ನಾಗಿ ಮಾಡಿತು. ಆ ಮಗನು ಎಂದೆಂದಿಗೂ ಸರ್ವಸಂಪೂರ್ಣನಾಗಿ ಮಾಡಲ್ಪಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಮೊಯ್ಜೆಚೆ ಖಾಯ್ದೆಚ್ ಮಾನ್ಸಾಂಚೊ ಮುಖ್ಯ್ ಯಾಜಕ್ ಹುಡಕ್ತಾ, ಹುಡ್ಕುನ್ ಕಾಡಲ್ಲ್ಯಾ ಹ್ಯಾ ಲೊಕಾತ್ನಿ ಮಾನ್ಸಾಂಚೆ ಬುರ್ಶೆ ಪಾನ್ ಹೊತ್ತಿ ಲೊಕಾಚ್ ಹಾತ್ ಖರೆ ದೆವಾನ್ ಖಾಯ್ದ್ಯಾಂಚ್ಯಾ ಮಾನಾ ದಿಲ್ಲಿ ಗೊಸ್ಟ್ ದೆವಾಚ್ಯಾ ಪೊರಾಕ್ ಮೊಟೊ ಯಾಜಕ್ ಕರ್‍ತಾ ತೊ ದೆವಾಚೊ ಪೊರ್ ಕನ್ನಾಬಿ ಸಗ್ಳೊ ಸಂಪುರ್ನ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:28
17 ತಿಳಿವುಗಳ ಹೋಲಿಕೆ  

ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.


ಆದರೆ ಯೇಸು ದೇವರ ಆಣೆಯಿಂದಲೇ ಯಾಜಕರಾದರು. ಹೀಗೆ ದೇವರು ಹೇಳಿದ್ದೇನೆಂದರೆ: “ ಕರ್ತ ಆಗಿರುವ ನಾನು ಆಣೆಯಿಟ್ಟು ಹೇಳಿದ್ದೇನೆ. ನಾನು ಎಂದಿಗೂ ಮನಸ್ಸನ್ನು ಬದಲಾಯಿಸುವುದಿಲ್ಲ. ‘ನೀನು ಸದಾಕಾಲವೂ ಯಾಜಕನಾಗಿದ್ದೀ.’ ”


ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು.


ಅದಕ್ಕೆ ಯೇಸು ಅವರಿಗೆ, “ಇಗೋ, ‘ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಓಡಿಸುತ್ತೇನೆ ಸ್ವಸ್ಥಮಾಡುತ್ತೇನೆ, ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ,’ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.


“ನೀವು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಯಾಜಕರಾಗಿದ್ದೀರಿ,” ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. ಅವರು ತಮ್ಮ ಮನಸ್ಸನ್ನು ಬದಲಾಯಿಸರು.


ಇನ್ನೊಂದು ಕಡೆ ಯೇಸುವಾದರೋ ಸದಾಕಾಲ ಇರುವುದರಿಂದ ನಿರಂತರವಾಗಿ ತಮ್ಮ ಯಾಜಕತ್ವವನ್ನು ಹೊಂದಿದವರಾಗಿದ್ದಾರೆ.


ಈ ಮೆಲ್ಕಿಜೆದೇಕನಿಗೆ ತಂದೆಯೂ, ತಾಯಿಯೂ, ವಂಶಾವಳಿಯೂ ಇಲ್ಲ. ಅವನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಅವನು ದೇವರ ಪುತ್ರ ಆಗಿರುವವರಿಗೆ ಹೋಲಿಕೆಯಾಗಿರುವ ನಿತ್ಯ ಯಾಜಕನಾಗಿ ಉಳಿಯುತ್ತಾನೆ.


ಅದೇ ರೀತಿಯಾಗಿ ಕ್ರಿಸ್ತ ಯೇಸು ಮಹಾಯಾಜಕರಾಗುವ ಮಹಿಮೆಯನ್ನು ತಮ್ಮ ಮೇಲೆ ತಾವೇ ತೆಗೆದುಕೊಳ್ಳಲಿಲ್ಲ. ಆದರೆ ದೇವರು, “ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ!” ಎಂದು ಹೇಳಿದರು.


ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.


“ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.


ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು