Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:5 - ಕನ್ನಡ ಸಮಕಾಲಿಕ ಅನುವಾದ

5 ನಿಜವಾಗಿಯೂ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಮೋಶೆಯ ನಿಯಮದಲ್ಲಿ ಅಪ್ಪಣೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಜವಾಗಿಯೂ ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಲೇವಿಯ ಕುಲದವರಲ್ಲಿ ಯಾಜಕ ಪದವಿಯನ್ನು ಹೊಂದಿದವರು ಜನರಿಂದ, ಅಂದರೆ ಅಬ್ರಹಾಮನ ವಂಶಜರಾದ ತಮ್ಮ ಸ್ವಜನರಿಂದ, ದಶಮಾಂಶವನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮಭಾಗಗಳನ್ನು ತೆಗೆದುಕೊಳ್ಳುವದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಲೇವಿಯಕುಲದ ಜನರಲ್ಲಿ ಯಾಜಕರಾಗುವವರು ಯೆಹೂದ್ಯರಿಂದ ಹತ್ತನೆಯ ಒಂದು ಭಾಗವನ್ನು ಪಡೆಯಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ಯಾಜಕರು ತಮ್ಮ ಸ್ವಂತ ಜನರಿಂದಲೇ (ಯೆಹೂದ್ಯರು) ಅದನ್ನು ಸಂಗ್ರಹಿಸುತ್ತಾರೆ ಮತ್ತು ಅವರ ಜನರು ಅಬ್ರಹಾಮನ ಕುಟುಂಬಕ್ಕೆ ಸೇರಿದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಲೆವಿಚ್ಯಾ ಲೊಕಾಕ್ನಿ ಯಾಜಕ್ ಹೊತ್ತೊ ಇಸ್ರಾಯೆಲಾಚ್ಯಾಕ್ನಾ ಧಾತ್ಲೊ ಎಕ್ ಭಾಗ್ ಘೆವ್ಚೆ ಮನುನ್ ಮೊಯ್ಜೆಚೆ ಖಾಯ್ದೆ ಸಾಂಗ್ತಾ, ಯಾಜಕ್ ಅಪ್ಲ್ಯಾ ಸ್ವತಾಚ್ಯಾ ಲೊಕಾಂಚ್ಯಾಕ್ನಾಚ್ ತೆ ಗೊಳಾ ಕರುನ್ ಘೆತಾ ಅನಿ ತೆಂಚಿ ಲೊಕಾ ಅಬ್ರಾಹಾಮಾಚ್ಯಾ ಘರಾನಾಚೆ ಹೊವ್ನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:5
15 ತಿಳಿವುಗಳ ಹೋಲಿಕೆ  

ಹೇಗೆಂದರೆ, ಮೆಲ್ಕಿಜೆದೇಕನು ಅಬ್ರಹಾಮನನ್ನು ಸಂಧಿಸಿದಾಗ, ಲೇವಿಯು ತನ್ನ ಪಿತೃ ಆದ ಅಬ್ರಹಾಮನ ದೇಹದಲ್ಲಿ ಇದ್ದನು ಎಂದು ಪರಿಗಣಿಸಬಹುದು.


ಲೇವಿಯರ ಪಾಲನ್ನು ಅವರಿಗೆ ಕೊಡಲಿಲ್ಲವೆಂದು ನನಗೆ ತಿಳಿಯಿತು. ಸೇವೆಯನ್ನು ಮಾಡುವ ಲೇವಿಯರೂ, ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿ ಹೋಗುತ್ತಿದ್ದರು.


ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು.


ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.


ಆರೋನನಂತೆ ದೇವರಿಂದ ಕರೆ ಹೊಂದದ ಹೊರತು ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳಲಾರನು.


“ನನಗೆ ಯಾಜಕ ಸೇವೆ ಮಾಡುವುದಕ್ಕೆ ನೀನು ಇಸ್ರಾಯೇಲರಿಂದ ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಎಂಬುವರನ್ನು ನಿನ್ನ ಹತ್ತಿರ ಬರಮಾಡಬೇಕು.


ಯಾಕೋಬನ ಪುತ್ರರ ಹೆಂಡತಿಯರಲ್ಲದೆ, ಯಾಕೋಬನ ಸಂಗಡ ಈಜಿಪ್ಟಿಗೆ ಹೋದವರು ಒಟ್ಟು ಅರವತ್ತಾರು ಮಂದಿ.


ಯಾಕೋಬನ ವಂಶಜರು ಒಟ್ಟು ಎಪ್ಪತ್ತು ಮಂದಿ ಆದರೆ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.


ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು.


ಹತ್ತನೆಯ ಪಾಲನ್ನು ಕೊಡುವ ವರ್ಷವಾಗಿರುವ ಮೂರನೆಯ ವರ್ಷದಲ್ಲಿ ನೀವು ನಿಮ್ಮ ಎಲ್ಲಾ ಹುಟ್ಟುವಳಿಯ ಹತ್ತನೆಯ ಪಾಲನ್ನು ಪ್ರತ್ಯೇಕಿಸಿದಾಗ, ನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ದಿಕ್ಕಿಲ್ಲದವರೂ ವಿಧವೆಯರೂ ಉಂಡು ತೃಪ್ತರಾಗುವಂತೆ ಅದನ್ನು ಅವರಿಗೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು