Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:6 - ಕನ್ನಡ ಸಮಕಾಲಿಕ ಅನುವಾದ

6 ಆದರೆ ವಂಶಾವಳಿಯಲ್ಲಿ ಸೇರದೆ ಇರುವ ಮೆಲ್ಕಿಜೆದೇಕನು ಅಬ್ರಹಾಮನಿಂದ ದಶಮಭಾಗವನ್ನು ತೆಗೆದುಕೊಂಡದ್ದಲ್ಲದೆ, ವಾಗ್ದಾನಗಳನ್ನು ಪಡೆದಿದ್ದ ಅಬ್ರಹಾಮನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಮೆಲ್ಕಿಜೆದೇಕನು ಲೇವಿಯ ವಂಶಾವಳಿಗೆ ಸೇರಿದವನಲ್ಲ, ಆದರೂ ಅಬ್ರಹಾಮನಿಂದ ದಶಮ ಭಾಗಗಳನ್ನು ತೆಗೆದುಕೊಂಡದ್ದಲ್ಲದೆ ದೇವರಿಂದ ವಾಗ್ದಾನಗಳನ್ನು ಹೊಂದಿದವನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಲೇವಿಯ ಕುಲದವನಲ್ಲದ ಮೆಲ್ಕಿಸದೇಕನು ಅಬ್ರಹಾಮನಿಂದಲೇ ದಶಮಾಂಶವನ್ನು ಪಡೆದನು; ಮಾತ್ರವಲ್ಲದೆ, ದೇವರ ವಾಗ್ದಾನವನ್ನು ಪಡೆದ ಅಬ್ರಹಾಮನನ್ನೇ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಅವರ ವಂಶಾವಳಿಗೆ ಸೇರದೆ ಇರುವ ಮೆಲ್ಕಿಜೆದೇಕನು ಅಬ್ರಹಾಮನಿಂದಲೇ ದಶಮಭಾಗಗಳನ್ನು ತಕ್ಕೊಂಡದ್ದಲ್ಲದೆ ದೇವರಿಂದ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮೆಲ್ಕಿಜೆದೇಕನು ಲೇವಿಯರ ಕುಲಕ್ಕೆ ಸೇರಿದವನಾಗಿರಲಿಲ್ಲ. ಆದರೆ ಅವನು ಹತ್ತನೆ ಒಂದು ಭಾಗವನ್ನು ಅಬ್ರಹಾಮನಿಂದ ಪಡೆದನು. ದೇವರ ವಾಗ್ದಾನಗಳನ್ನು ಹೊಂದಿದ್ದ ಅಬ್ರಹಾಮನನ್ನು ಅವನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮೆಲ್ಕಿಸೆದೆಕ್ ಲೆವಿಚ್ಯಾ ಘರಾನಾಚೊ ಹೊವ್ನ್ ನತ್ತೊ, ಹೊಲ್ಯಾರ್ಬಿ ತೆನಿ ಅಬ್ರಾಹಾಮಾಕ್ನಾ ಧಾತ್ಲೊ ಎಕ್ ವಾಟೊ ಘೆಟಲ್ಯಾನ್, ದೆವಾಕ್ನಾ ವಚನ್ ಘೆಟಲ್ಯಾ ಅಬ್ರಾಹಾಮಾಕ್ ತೆನಿ ಆಶಿರ್ವಾದ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:6
16 ತಿಳಿವುಗಳ ಹೋಲಿಕೆ  

ಅಬ್ರಹಾಮನು ಮತ್ತು ಅವನ ಸಂತತಿಯವರು ಜಗತ್ತಿಗೇ ಹಕ್ಕುದಾರರಾಗುವರೆಂಬ ವಾಗ್ದಾನವು ನಿಯಮದಿಂದ ಆದದ್ದಲ್ಲ. ನಂಬಿಕೆಯಿಂದುಂಟಾದ ನೀತಿಯ ಮೂಲಕವೇ ಬರುವಂಥದ್ದಾಗಿದೆ.


ಅಬ್ರಹಾಮನು ಪರೀಕ್ಷೆಗೆ ಒಳಗಾದಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.


ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು. ರಾಜರನ್ನು ಸೋಲಿಸಿ, ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಸಂಧಿಸಿ ಅವನನ್ನು ಆಶೀರ್ವದಿಸಿದನು.


ಹಾಗೆಯೇ ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳು ಮಾಡಲಾದವು. ಅದರಲ್ಲಿ, “ನಿನ್ನ ಸಂತತಿಗಳಿಗೆ,” ಎಂದು ಹೇಳಿ ಅನೇಕರನ್ನು ಸೂಚಿಸದೆ, “ನಿನ್ನ ಸಂತತಿಗೆ,” ಎಂದು ಹೇಳಿದ ಒಬ್ಬರನ್ನೇ ಸೂಚಿಸಿದೆ. ಆ ಒಬ್ಬ ವ್ಯಕ್ತಿ ಕ್ರಿಸ್ತ ಯೇಸುವೇ.


ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.


ನೀವು ಪ್ರವಾದಿಗಳ ಮತ್ತು ನಿಮ್ಮ ಪಿತೃಗಳೊಂದಿಗೆ ದೇವರು ಮಾಡಿಕೊಂಡ ಒಡಂಬಡಿಕೆಯ ಮಕ್ಕಳಾಗಿದ್ದೀರಿ. ಏಕೆಂದರೆ ದೇವರು, ‘ನಿನ್ನ ಸಂತತಿಯ ಮುಖಾಂತರವಾಗಿ ಭೂಲೋಕದ ಎಲ್ಲಾ ಕುಟುಂಬಗಳಿಗೆ ಆಶೀರ್ವಾದವುಂಟಾಗುವುದು,’ ಎಂದು ಅಬ್ರಹಾಮನಿಗೆ ಹೇಳಿದರು.


“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


ಈ ಎಲ್ಲಾ ಜನರು ಮರಣ ಹೊಂದುವಾಗಲೂ ವಿಶ್ವಾಸದಿಂದ ಜೀವಿಸುವವರಾಗಿದ್ದರು. ವಾಗ್ದಾನದ ಸಂಗತಿಗಳನ್ನು ಅವರು ಹೊಂದಲಿಲ್ಲ. ಅವುಗಳನ್ನು ಅವರು ದೂರದಿಂದಲೇ ನೋಡಿ ಸ್ವಾಗತಿಸಿದರು. ತಾವು ಭೂಮಿಯ ಮೇಲೆ ಪರದೇಶದವರೂ ಅಪರಿಚಿತರೂ ಆಗಿದ್ದೇವೆಂದು ಒಪ್ಪಿಕೊಂಡರು.


ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ, ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ದಯಮಾಡಿ ಹೇಳಬೇಕು,” ಎಂದು ಹೇಳಿದನು.


ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ದೊಡ್ಡವನು ಎಂಬುದರಲ್ಲಿ ವಿವಾದವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು