Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:2 - ಕನ್ನಡ ಸಮಕಾಲಿಕ ಅನುವಾದ

2 ಕ್ರಿಸ್ತ ಯೇಸು ಆಗಿರುವ ಇವರು ಪವಿತ್ರ ಸ್ಥಾನದಲ್ಲಿ ಅಂದರೆ, ಮನುಷ್ಯರಿಂದಲ್ಲ ದೇವರೇ ನಿರ್ಮಿಸಿದ ಪವಿತ್ರ ಸ್ಥಾನದ ನಿಜ ಗುಡಾರದಲ್ಲಿ ಸೇವೆಮಾಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ, ಆ ಪವಿತ್ರಸ್ಥಾನದಲ್ಲಿ ಮನುಷ್ಯರಿಂದಲ್ಲ, ದೇವರಿಂದಲೇ ನಿರ್ಮಿತವಾದ ನಿಜವಾದ ಗರ್ಭಗುಡಿಯಲ್ಲಿ, ಅವರು ಯಾಜಕ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಈತನು ಪವಿತ್ರಸ್ಥಾನದಲ್ಲಿ ಅಂದರೆ ಮನುಷ್ಯನು ಹಾಕದೆ ಕರ್ತನೇ ಹಾಕಿದ ನಿಜವಾದ ದೇವದರ್ಶನಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ಮಹಾ ಪವಿತ್ರಸ್ಥಳದಲ್ಲಿ ಅಂದರೆ ಜನರಿಂದ ನಿರ್ಮಿತವಾಗದೆ, ದೇವರಿಂದಲೇ ನಿರ್ಮಿಸಲ್ಪಟ್ಟಿರುವ ನಿಜವಾದ ದೇವದರ್ಶನ ಗುಡಾರದಲ್ಲಿ ಸೇವೆಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೆಜು ಕ್ರಿಸ್ತ್ ಲೈ ಪವಿತ್ರ್ ಜಾಗೊ ಮಟ್ಲ್ಯಾರ್, ಮಾನ್ಸಾಂಚ್ಯಾಕ್ನಾ ತಯಾರ್ ಹೊಯ್‍ನಸ್ತಾನಾ ದೆವಾನುಚ್ ತಯಾರ್ ಕರಲ್ಲ್ಯಾ ಬರೊ ದೆವ್ ದಿಸ್ತಲ್ಯಾ ಖರ್ಯಾ ಘರಾತ್ ಸೆವಾ ಕರುಕ್ ಲಾಗಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:2
15 ತಿಳಿವುಗಳ ಹೋಲಿಕೆ  

ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.


ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು.


ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ, ಅದಕ್ಕೆ “ದೇವದರ್ಶನದ ಗುಡಾರ” ಎಂದು ಹೆಸರಿಟ್ಟನು. ತರುವಾಯ ಯೆಹೋವ ದೇವರನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನದ ಗುಡಾರಕ್ಕೆ ಹೋದರು.


ಏಕೆಂದರೆ ದೇವರು ಯಾವುದನ್ನು ಕಟ್ಟುವವರೂ ಮಾಡುವವರೂ ಆಗಿದ್ದಾರೋ ಆ ಅಸ್ತಿವಾರಗಳುಳ್ಳ ಪಟ್ಟಣಕ್ಕೋಸ್ಕರ ಅವರು ಎದುರುನೋಡುತ್ತಿದ್ದರು.


ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವುದರಿಂದ


ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


ಇದು ಸೇವೆಗಾಗಿ ಆರೋನನ ಮೇಲೆ ಇರಬೇಕು. ಅವನು ಯೆಹೋವ ದೇವರ ಸಮ್ಮುಖದಲ್ಲಿ ಪರಿಶುದ್ಧ ಸ್ಥಳಕ್ಕೆ ಬರುತ್ತಾ ಹೋಗುತ್ತಾ ಇರುವ ಸಮಯದಲ್ಲಿ, ಅವನು ಸಾಯದಂತೆ ಅವನ ಶಬ್ದವು ಕೇಳಿಸಬೇಕು.


“ನನಗೆ ಯಾಜಕ ಸೇವೆ ಮಾಡುವುದಕ್ಕೆ ನೀನು ಇಸ್ರಾಯೇಲರಿಂದ ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಎಂಬುವರನ್ನು ನಿನ್ನ ಹತ್ತಿರ ಬರಮಾಡಬೇಕು.


ಗುಡಾರದ ಮಾದರಿಯನ್ನೂ, ಅದರ ಎಲ್ಲಾ ಸಲಕರಣೆಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.


ಮೊದಲನೆಯ ಒಡಂಬಡಿಕೆಯಲ್ಲಿ ದೈವಿಕ ಆರಾಧನೆಯ ಕ್ರಮಗಳಿದ್ದವು. ಮಾತ್ರವಲ್ಲದೆ ಮಾನವ ನಿರ್ಮಿತ ಪವಿತ್ರ ಸ್ಥಳವೂ ಇತ್ತು.


ಇದಲ್ಲದೆ ಪ್ರತಿ ಯಾಜಕನು ಅನುದಿನವೂ ಸೇವೆಮಾಡುತ್ತಾ ನಿಂತಿರುವನು. ಆದರೆ ಎಂದಿಗೂ ಪಾಪಗಳನ್ನು ತೆಗೆದುಹಾಕಲಾರದಂಥ ಯಜ್ಞಗಳನ್ನು ಪದೇಪದೇ ಅರ್ಪಿಸುತ್ತಿದ್ದನು.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು