Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:3 - ಕನ್ನಡ ಸಮಕಾಲಿಕ ಅನುವಾದ

3 ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಯೇಸುವಿಗೆ ಸಹ ಏನಾದರೂ ಇರುವುದು ಅವಶ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪ್ರತಿಯೊಬ್ಬ ಪ್ರಧಾನಯಾಜಕನು ಕಾಣಿಕೆಗಳನ್ನೂ ಬಲಿಗಳನ್ನೂ ಅರ್ಪಿಸುವುದಕ್ಕಾಗಿಯೇ ನೇಮಕಗೊಂಡಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ನಮ್ಮ ಈ ಪ್ರಧಾನಯಾಜಕರಿಗೂ ಏನಾದರೂ ಇರಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರುತ್ತಾನಷ್ಟೆ ; ಆದದರಿಂದ ಸಮರ್ಪಿಸುವದಕ್ಕೆ ಈ ಮಹಾಯಾಜಕನಿಗೂ ಏನಾದರೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪ್ರತಿಯೊಬ್ಬ ಪ್ರಧಾನಯಾಜಕನೂ ದೇವರಿಗೆ ಯಜ್ಞಗಳನ್ನೂ ಕಾಣಿಕೆಗಳನ್ನೂ ಅರ್ಪಿಸಬೇಕು. ಆದ್ದರಿಂದ ನಮ್ಮ ಪ್ರಧಾನ ಯಾಜಕನೂ ದೇವರಿಗೆ ಏನನ್ನಾದರೂ ಅರ್ಪಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಹರ್ ಎಕ್ ಮೊಟ್ಯಾ ಯಾಜಕಾನ್ಬಿ ದೆವಾಕ್ ಬಲಿ ಭೆಟ್ವುಚೆ, ಅನಿ ಕಾನಿಕ್ ದಿವ್ಚೆ ತಸೆ ಮನುನ್ ಅಮ್ಚ್ಯಾ ಮೊಟೊ ಯಾಜಕಾನ್ಬಿ ದೆವಾಕ್ ಕಾಯ್‍ತರಿಬಿ ದಿವ್ಕುಚ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:3
14 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬ ಮಹಾಯಾಜಕ ಮನುಷ್ಯರೊಳಗಿಂದ ಆರಿಸಲಾಗಿ ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗಾಗಿ ಸಮರ್ಪಿಸಲು ಮನುಷ್ಯರ ಪರವಾಗಿ ದೇವರ ಕಾರ್ಯಗಳಿಗಾಗಿ ನೇಮಿಸಲಾಗುತ್ತಾನಲ್ಲಾ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು.


ನಮ್ಮ ಪಾಪಗಳ ನಿಮಿತ್ತವಾಗಿ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು ಮತ್ತು ನಮ್ಮನ್ನು ನೀತಿವಂತರನ್ನಾಗಿ ನಿರ್ಣಯಿಸಲು, ಜೀವದಿಂದ ಎಬ್ಬಿಸಲಾಯಿತು.


ನಾವು ಇನ್ನೂ ಬಲಹೀನರಾಗಿದ್ದಾಗಲೇ, ಸೂಕ್ತ ಸಮಯದಲ್ಲಿ ಕ್ರಿಸ್ತ ಯೇಸು ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟರು.


ಆದರೆ ಕ್ರಿಸ್ತ ಯೇಸು ನಾವು ಇನ್ನೂ ಪಾಪಿಗಳಾಗಿದ್ದಾಗಲೇ ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ಇಟ್ಟಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.


ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.


ಯೇಸು ಭೂಮಿಯ ಮೇಲೆ ಇರುವುದಾದರೆ ಯಾಜಕರೇ ಆಗುತ್ತಿರಲಿಲ್ಲ. ಏಕೆಂದರೆ ಮೋಶೆಯ ನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು