Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:4 - ಕನ್ನಡ ಸಮಕಾಲಿಕ ಅನುವಾದ

4 ಯೇಸು ಭೂಮಿಯ ಮೇಲೆ ಇರುವುದಾದರೆ ಯಾಜಕರೇ ಆಗುತ್ತಿರಲಿಲ್ಲ. ಏಕೆಂದರೆ ಮೋಶೆಯ ನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇವರು ಧರೆಯಲ್ಲೇ ಇದ್ದಿದ್ದರೆ ಯಾಜಕರಾಗಿರುತ್ತಿರಲಿಲ್ಲ. ಏಕೆಂದರೆ ಧರ್ಮಶಾಸ್ತ್ರ ವಿಧಿಸುವ ಕಾಣಿಕೆಗಳನ್ನು ಸಮರ್ಪಿಸುವುದಕ್ಕೆ ಬೇರೆ ಯಾಜಕರು ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈತನು ಇನ್ನೂ ಭೂವಿುಯ ಮೇಲೆ ಇದ್ದದ್ದೇ ಆದರೆ ಯಾಜಕನಾಗಿರುತ್ತಿರಲಿಲ್ಲ; ಯಾಕಂದರೆ ಧರ್ಮನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದೇ ಇರುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆತನು ಇನ್ನೂ ಭೂಮಿಯ ಮೇಲೆ ವಾಸಮಾಡುತ್ತಿದ್ದರೆ ಯಾಜಕನಾಗಿರುತ್ತಿರಲಿಲ್ಲ. ಕಾರಣವೇನೆಂದರೆ, ಧರ್ಮಶಾಸ್ತ್ರದ ಪ್ರಕಾರ ದೇವರಿಗೆ ಕಾಣಿಕೆಗಳನ್ನು ಅರ್ಪಿಸುವ ಯಾಜಕರು ಈಗಾಗಲೇ ಇಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೊ ಹ್ಯಾ ಜಗಾತ್ ಜಿಮ್ನಿರ್ ಹೊತ್ತೊ ಹೊಲ್ಯಾರ್, ಅಜುನ್ ಪತರ್ ಯಾಜಕ್ ಹೊವ್ನ್ ರ್‍ಹಾಯ್ನಶಿ ಹೊತ್ತೊ, ಕಶ್ಯಾಕ್ ಮಟ್ಲ್ಯಾರ್, ಮೊಯ್ಜೆಚ್ಯಾ ಖಾಯ್ದ್ಯಾಚ್ಯಾ ಸಾಂಗ್ನಿ ಸಾರ್ಕೆ ದೆವಾಕ್ ಕಾನಿಕ್ ದಿತಲಿ ಯಾಜಕ್ ಲೊಕಾ ಅತ್ತಾಹಾಲಿ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:4
11 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬ ಮಹಾಯಾಜಕ ಮನುಷ್ಯರೊಳಗಿಂದ ಆರಿಸಲಾಗಿ ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗಾಗಿ ಸಮರ್ಪಿಸಲು ಮನುಷ್ಯರ ಪರವಾಗಿ ದೇವರ ಕಾರ್ಯಗಳಿಗಾಗಿ ನೇಮಿಸಲಾಗುತ್ತಾನಲ್ಲಾ.


“ಇಸ್ರಾಯೇಲರ ಮೇಲೆ ಇನ್ನು ಮುಂದೆ ಎಂದಿಗೂ ನನ್ನ ಕೋಪಾಗ್ನಿಯು ಬಾರದ ಹಾಗೆ ಪರಿಶುದ್ಧ ಸ್ಥಳವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು.


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಉತ್ತಮ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ಅವನು ನೀತಿವಂತನೆಂದು ಸಾಕ್ಷಿಹೊಂದಿದನು. ದೇವರು ಸಹ ಅವನ ಕಾಣಿಕೆಗಳನ್ನು ಸ್ವೀಕಾರಮಾಡಿದರು. ಅವನು ಸತ್ತು ಹೋಗಿದ್ದರೂ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.


ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು.


ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಯೇಸುವಿಗೆ ಸಹ ಏನಾದರೂ ಇರುವುದು ಅವಶ್ಯವಾಗಿದೆ.


ಈ ಗುಡಾರವು ಈ ಕಾಲವನ್ನು ಸೂಚಿಸುವ ಒಂದು ಮಾದರಿಯಾಗಿದೆ. ಆಗ ಆರಾಧಿಸುವವರ ಮನಸ್ಸಾಕ್ಷಿಯನ್ನು ಪರಿಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲಾಗುತ್ತಿದ್ದವು.


ಇದಲ್ಲದೆ ಪ್ರತಿ ಯಾಜಕನು ಅನುದಿನವೂ ಸೇವೆಮಾಡುತ್ತಾ ನಿಂತಿರುವನು. ಆದರೆ ಎಂದಿಗೂ ಪಾಪಗಳನ್ನು ತೆಗೆದುಹಾಕಲಾರದಂಥ ಯಜ್ಞಗಳನ್ನು ಪದೇಪದೇ ಅರ್ಪಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು