Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:5 - ಕನ್ನಡ ಸಮಕಾಲಿಕ ಅನುವಾದ

5 ಅವರು ಪರಲೋಕದಲ್ಲಿರುವವುಗಳ ನಿದರ್ಶನವೂ ಛಾಯೆಯೂ ಆಗಿರುವ ಆಲಯಗಳಲ್ಲಿ ಸೇವೆಯನ್ನು ನಡೆಸುವರು. ಇದರಂತೆಯೇ ಮೋಶೆಯು ಗುಡಾರವನ್ನು ಮಾಡುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು,” ಎಂದು ದೇವರಿಂದ ಎಚ್ಚರಿಕೆ ಕೊಡಲಾಗಿತ್ತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಪರಲೋಕದಲ್ಲಿರುವ ದೇವಾಲಯದ ಪ್ರತಿರೂಪವೂ ಛಾಯೆಯೂ ಆಗಿರುವ ಆಲಯದಲ್ಲಿ ಯಾಜಕತ್ವವನ್ನು ನಡಿಸುವವರು. ಮೋಶೆಯು ದೇವದರ್ಶನಗುಡಾರವನ್ನು ಮಾಡುವದಕ್ಕಿದ್ದಾಗ ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು ಎಂಬ ದೈವೋಕ್ತಿಯು ಅವನಿಗೆ ಉಂಟಾಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು” ಎಂದು ಹೇಳಿದ್ದು ಈ ಕಾರಣದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹಿ ಯಾಜಕ್ ಲೊಕಾ ಕರ್‍ತಲಿ ಕಾಮಾ ಸರ್ಗಾತ್ಲ್ಯಾ ಕಾಮಾಂಚ್ಯಾ ಅನಿ ಎಕ್ ರುಪ್ ಅನಿ ಸಾವ್ಳಿ ಸಾರ್ಕೆ ಹಾತ್ ಮೊಯ್ಜೆನ್ ದೆವಾಚ್ಯಾ ಖಾಯ್ದ್ಯಾಚ್ಯಾ ಘರ್ ತಯಾರ್ ಕರುಕ್ ಲಾಗಲ್ಲ್ಯಾ ತನ್ನಾ ದೆವಾನ್ ತೆಕಾ ತಿ ಮಿಯಾ ಮಡ್ಡಿರ್ ಡಂಗ್ಳಿತ್ ತುಕಾ ದಾಕ್ವುಲ್ಯಾನ್ ಸಾರ್ಕೆಚ್ ಸಗ್ಳೆ ಲೈ ಹುರ್ಶಾಕಿನ್ ತಯಾರ್ ಕರುಚೆ ಮನುನ್ ಸಾಂಗ್ತಲೆ ಕಾರನಾಕುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:5
18 ತಿಳಿವುಗಳ ಹೋಲಿಕೆ  

ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.


ಇವು ಬರಬೇಕಾಗಿದ್ದವುಗಳ ಛಾಯೆಯಾಗಿವೆ, ಆದರೆ ನಿಜಸ್ವರೂಪವು ಕ್ರಿಸ್ತ ಯೇಸುವೇ.


ಮೋಶೆಯ ನಿಯಮವು ಬರಬೇಕಾಗಿದ್ದ ವಸ್ತುಗಳ ಛಾಯೆಯಾಗಿದೆ ಹೊರತು ಅವುಗಳ ನಿಜಸ್ವರೂಪವಲ್ಲ. ಈ ಕಾರಣದಿಂದ ಅದು ಪ್ರತಿವರ್ಷ ಯಾವಾಗಲೂ ಯಜ್ಞಗಳನ್ನು ಅರ್ಪಿಸುವುದಕ್ಕೆ ಬರುವವರನ್ನು ಮೋಶೆಯ ನಿಯಮವು ಎಂದಿಗೂ ಪರಿಪೂರ್ಣತೆಗೆ ತರಲಾರದು.


“ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರವನ್ನು ನಿಲ್ಲಿಸಬೇಕು.


“ಯೆಹೋವ ದೇವರು ತಮ್ಮ ಕೈಯನ್ನು ನನ್ನ ಮೇಲೆ ಇರಿಸಿ, ಈ ಯೋಜನೆಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದರು,” ಎಂದರು.


ಬಲಿಪೀಠವನ್ನು ಚೌಕಟ್ಟುಗಳಿಂದ ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆ ಅದನ್ನು ಮಾಡಬೇಕು.


ಯೆಹೋವ ದೇವರ ಮನೆಯ ಅಂಗಳಗಳು, ಸುತ್ತಲಿರುವ ಕೊಠಡಿಗಳಾದ ಯೆಹೋವ ದೇವರ ಮನೆಯ ಉಗ್ರಾಣಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿಯನ್ನೂ ಕೊಟ್ಟನು.


ಈ ಗುಡಾರವು ಈ ಕಾಲವನ್ನು ಸೂಚಿಸುವ ಒಂದು ಮಾದರಿಯಾಗಿದೆ. ಆಗ ಆರಾಧಿಸುವವರ ಮನಸ್ಸಾಕ್ಷಿಯನ್ನು ಪರಿಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲಾಗುತ್ತಿದ್ದವು.


ದೀಪಸ್ತಂಭವೂ ಅದರ ಬುಡಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಹೊಡೆದು ಮಾಡಲಾಗಿತ್ತು. ಯೆಹೋವ ದೇವರು ಮೋಶೆಗೆ ತೋರಿಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿದನು.


ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


“ಅರಣ್ಯದಲ್ಲಿ ದೇವದರ್ಶನ ಗುಡಾರ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ದೇವರು ಮೋಶೆಗೆ ಆಜ್ಞಾಪಿಸಿದಂತೆ, ಅವನಿಗೆ ತೋರಿಸಿದ ಮಾದರಿಯಂತೆ ಅದನ್ನು ರೂಪಿಸಲಾಗಿತ್ತು.


ಗುಡಾರದ ಮಾದರಿಯನ್ನೂ, ಅದರ ಎಲ್ಲಾ ಸಲಕರಣೆಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.


ಅನಂತರ ಅವರು ಕನಸಿನಲ್ಲಿ ಹೆರೋದನ ಬಳಿಗೆ ಹಿಂತಿರುಗಬಾರದೆಂಬ ಎಚ್ಚರಿಕೆಯನ್ನು ಹೊಂದಿದ್ದರಿಂದ, ಬೇರೆ ದಾರಿಯಿಂದ ತಮ್ಮ ದೇಶಕ್ಕೆ ಹೊರಟು ಹೋದರು.


ನಮಗೊಂದು ಬಲಿಪೀಠ ಉಂಟು. ಅದರ ಪದಾರ್ಥವನ್ನು ತಿನ್ನುವುದಕ್ಕೆ ಗುಡಾರದ ಸೇವೆ ಮಾಡುವವರಿಗೆ ಹಕ್ಕಿಲ್ಲ.


ಇದಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿರುವ ಸಾಕ್ಷಿಯ ಗುಡಾರದ ದೇವಾಲಯವು ತೆರೆದಿರುವುದನ್ನು ಕಂಡೆನು.


“ಇದಲ್ಲದೆ ನಾವು, ‘ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತತಿಯವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ: ಯೆಹೋವ ದೇವರ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿರಿ, ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ. ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು