Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:7 - ಕನ್ನಡ ಸಮಕಾಲಿಕ ಅನುವಾದ

7 ಆ ಮೊದಲನೆಯ ಒಡಂಬಡಿಕೆಯು ತಪ್ಪಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೊದಲನೆಯ ಒಡಂಬಡಿಕೆ ದೋಷರಹಿತ ಆಗಿದ್ದಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ ಎರಡನೆಯ ಒಡಂಬಡಿಕೆಗೆ ಅವಕಾಶವು ಇರುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೊದಲನೆ ಒಡಂಬಡಿಕೆ ಏನೂ ದೋಷವಿಲ್ಲದ್ದಾಗಿದ್ದರೆ, ಎರಡನೆ ಒಡಂಬಡಿಕೆಯ ಅಗತ್ಯವೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅದ್ದಿಚ್ಯಾ ಕರಾರಾತ್ ಕಾಯ್ ಚುಕ್ ನಸಲಿ ಹೊಲ್ಯಾರ್, ದೊನ್ವೆಚ್ಯಾ ಚಿ ಗರಜ್ ರ್‍ಹಾಯ್ನಸಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:7
5 ತಿಳಿವುಗಳ ಹೋಲಿಕೆ  

ಲೇವಿಯರ ಯಾಜಕತ್ವದ ಆಧಾರದ ಮೇಲೆ ಜನರು ನಿಯಮವನ್ನು ಪಡೆದಿದ್ದರು. ಈ ಯಾಜಕತ್ವದ ಮೂಲಕವೇ ಪರಿಪೂರ್ಣತೆಯು ಉಂಟಾಗಿದ್ದರೆ, ಆರೋನನ ಕ್ರಮಾನುಸಾರವಾಗಿರದೆ ಮೆಲ್ಕಿಜೆದೇಕನ ಕ್ರಮದ ಪ್ರಕಾರ ಬೇರೊಬ್ಬ ಯಾಜಕನು ಎದ್ದೇಳುವ ಅವಶ್ಯವೇನಿತ್ತು?


ಏಕೆಂದರೆ ಮೊದಲಿದ್ದ ಆಜ್ಞೆಯು ನಿರ್ಬಲವೂ ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು.


ಹಾಗಾದರೆ ನಿಯಮವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಆಗಬಾರದು! ಕೊಡಲಾಗಿದ್ದ ನಿಯಮವು ಒಂದು ವೇಳೆ ಜೀವವನ್ನು ನೀಡುವುದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ, ನಿಶ್ಚಯವಾಗಿಯೂ ಮೋಶೆಯ ನಿಯಮದಿಂದ ನೀತಿವಂತರಾಗುತ್ತಿದ್ದೆವು.


ಯೇಸುವಾದರೋ ಈಗ ಅದಕ್ಕಿಂತ ಶ್ರೇಷ್ಠ ಸೇವೆಯನ್ನು ಹೊಂದಿದವರಾಗಿದ್ದಾರೆ. ಅಷ್ಟೇ ಅಲ್ಲದೆ ಇವರು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಒಡಂಬಡಿಕೆಗೆ ಸಹ ಮಧ್ಯಸ್ಥರಾಗಿದ್ದಾರೆ.


ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆಯನ್ನೂ, ಈ ಆಣೆಯನ್ನೂ ಮಾಡುವುದಲ್ಲದೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು