Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:1 - ಕನ್ನಡ ಸಮಕಾಲಿಕ ಅನುವಾದ

1 ಮೊದಲನೆಯ ಒಡಂಬಡಿಕೆಯಲ್ಲಿ ದೈವಿಕ ಆರಾಧನೆಯ ಕ್ರಮಗಳಿದ್ದವು. ಮಾತ್ರವಲ್ಲದೆ ಮಾನವ ನಿರ್ಮಿತ ಪವಿತ್ರ ಸ್ಥಳವೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಳೆಯ ಒಡಂಬಡಿಕೆಯಲ್ಲಿ ದೇವಾರಾಧನೆಗೆ ವಿಧಿನಿಯಮಗಳಿದ್ದವು; ಮಾನವ ನಿರ್ಮಿತ ದೇವಾಲಯವೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೀಗಿದ್ದರೂ ಮೊದಲನೆಯ ಒಡಂಬಡಿಕೆಯಲ್ಲಿ ದೇವಾರಾಧನೆಯ ನಿಯಮಗಳಿದ್ದವು; ಮತ್ತು ದೇವಾಲಯವಿತ್ತು, ಅದು ಇಹಲೋಕ ಸಂಬಂಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೊದಲನೆ ಒಡಂಬಡಿಕೆಯಲ್ಲಿ ಆರಾಧನೆಯ ನಿಯಮಗಳಿದ್ದವು. ಅದರಲ್ಲಿ ಮಾನವನಿರ್ಮಿತವಾದ ಆರಾಧನಾ ಸ್ಥಳವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅದ್ದಿಚ್ಯಾ ಕರಾರಾತ್ ಆರಾಧನ್ಯಾಕ್ ನೆಮಾ ಹೊತ್ತಿ, ಅನಿ ಆರಾಧನ್ಯಾಕ್ ಮನುನ್ ಮಾನ್ಸಾನ್ ಕರಲೆ ಜಾಗೆಬಿ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:1
14 ತಿಳಿವುಗಳ ಹೋಲಿಕೆ  

“ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.


ಕ್ರಿಸ್ತ ಯೇಸು ಆಗಿರುವ ಇವರು ಪವಿತ್ರ ಸ್ಥಾನದಲ್ಲಿ ಅಂದರೆ, ಮನುಷ್ಯರಿಂದಲ್ಲ ದೇವರೇ ನಿರ್ಮಿಸಿದ ಪವಿತ್ರ ಸ್ಥಾನದ ನಿಜ ಗುಡಾರದಲ್ಲಿ ಸೇವೆಮಾಡುವವರಾಗಿದ್ದಾರೆ.


ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


“ ‘ಯಾಜಕರು ಅದನ್ನು ಅಪವಿತ್ರ ಪಡಿಸಿದರೆ, ಅದರ ನಿಮಿತ್ತ ಅಪರಾಧಿಯಾಗಿ ಸಾಯದಂತೆ ನನ್ನ ವಿಧಿಗಳನ್ನು ಕೈಗೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.


ಆ ಮೊದಲನೆಯ ಒಡಂಬಡಿಕೆಯು ತಪ್ಪಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ.


ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ ಅನುಸರಿಸುವವರಾಗಿದ್ದಾರೆ.


ಅವರು ಮಾಡಿದ ಎಲ್ಲದಕ್ಕಾಗಿ ನಾಚಿಕೆಪಟ್ಟರೆ, ದೇವಾಲಯದ ರೂಪವನ್ನೂ, ಅದರ ಆಕಾರವನ್ನೂ, ಅದರ ಆಗಮನ ನಿರ್ಗಮನಗಳನ್ನೂ, ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ಕಟ್ಟಳೆಗಳನ್ನೂ ಅವರಿಗೆ ವಿವರಿಸು. ಅವರು ಅದರ ರಚನಾವಿಧಾನಗಳಿಗೆ ನಂಬಿಗಸ್ತರಾಗಿರುವಂತೆಯೂ ಅವರು ಅದರ ಎಲ್ಲಾ ಕಟ್ಟಳೆಗಳನ್ನೂ ಅನುಸರಿಸುವಂತೆಯೂ ಅವರ ಮುಂದೆಯೇ ಇವುಗಳನ್ನು ಬರೆ.


ಅವರು ಅದರಿಂದ ಮರುದಿವಸಕ್ಕೆ ಏನನ್ನೂ ಉಳಿಸಬಾರದು. ಅದರಲ್ಲಿ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು, ಪಸ್ಕದ ಸಮಸ್ತ ಕಟ್ಟಳೆಗಳ ಪ್ರಕಾರವಾಗಿ ಅದನ್ನು ಆಚರಿಸಬೇಕು.


ಇಲ್ಲಿ ದೇವರು “ಹೊಸ ಒಡಂಬಡಿಕೆ” ಎಂದು ಹೇಳಿರುವಾಗ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿದ್ದಾರೆ. ಅದು ಹಳೆಯದಾಗುತ್ತಾ ಕ್ಷೀಣವಾಗಿ ಅಳಿದು ಹೋಗಲಿದೆ.


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.


ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು