Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:16 - ಕನ್ನಡ ಸಮಕಾಲಿಕ ಅನುವಾದ

16 ಮರಣ ಶಾಸನವು ಎಲ್ಲಿದೆಯೋ ಅಲ್ಲಿ ಅದನ್ನು ಮಾಡಿಕೊಂಡಾತನ ಮರಣ ಅವಶ್ಯ ಎಂಬುದನ್ನು ರುಜುಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಒಂದು ಮರಣ ಶಾಸನವು ಪರಿಣಾಮಕಾರಿಯಾಗಬೇಕಾದರೆ, ಅದನ್ನು ಬರೆದಾತನು ಸತ್ತಿದ್ದಾನೆಂಬುದು ಖಚಿತವಾಗಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವು ಪ್ರಸಿದ್ಧವಾಗಿರಬೇಕಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಒಬ್ಬನು ಸಾಯುವ ಮೊದಲೇ ಉಯಿಲನ್ನು ಬರೆದಿಡುತ್ತಾನೆ. ಆದರೆ ಸತ್ತಿರುವಾತನೇ ಆ ಉಯಿಲನ್ನು ಬರೆದವನೆಂದು ಜನರು ಸಾಧಿಸಿ ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಎಕ್ಲೊ ಮರುಚ್ಯಾ ಪೈಲೆಚ್ ಅಪ್ಲಿ ಆಸ್ತಿ ಕೊನಾಕ್ ಜಾತಾ ಮನುನ್ ಲಿವ್ನ್ ಥವ್ತಾ, ಖರೆ ಮರಲ್ಲ್ಯಾ ಮಾನ್ಸಾನುಚ್ ತೆ ಲಿವಲ್ಲೆ ಮನುನ್ ಹುರಲ್ಯಾ ಲೊಕಾನಿ ಖರೆ ಕರುನ್ ದಾಕ್ವುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:16
8 ತಿಳಿವುಗಳ ಹೋಲಿಕೆ  

ಏಕೆಂದರೆ ಯಾವನಾದರೂ ಇಡೀ ಮೋಶೆಯ ನಿಯಮದಲ್ಲಿ ಒಂದೇ ಒಂದನ್ನು ಕೈಕೊಂಡು ನಡೆಯದೇ ಹೋದರೆ, ಅವನು ಇಡೀ ನಿಯಮವನ್ನೇ ಕೈಕೊಳ್ಳದ ಅಪರಾಧಿಯಾಗುತ್ತಾನೆ.


ಏಕೆಂದರೆ, ಆದಾಮನಲ್ಲಿ ಎಲ್ಲರೂ ಸತ್ತಂತೆಯೇ, ಕ್ರಿಸ್ತನಲ್ಲಿ ಎಲ್ಲರೂ ಜೀವಂತರಾಗುವರು.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಆದ್ದರಿಂದ, ಒಬ್ಬ ಮನುಷ್ಯನ ಮೂಲಕ ಪಾಪವೂ ಪಾಪದ ಮೂಲಕ ಮರಣವೂ ಲೋಕದೊಳಗೆ ಪ್ರವೇಶಿಸಿದ ಹಾಗೆಯೇ ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಲ್ಲಿಯೂ ವ್ಯಾಪಿಸಿತು.


ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ಮರಣ ಶಾಸನವು ಬರೆದವನು ಜೀವದಿಂದಿರುವವರೆಗೂ ಅದು ಎಂದಿಗೂ ಜಾರಿಗೆ ಬರುವುದಿಲ್ಲ.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು