Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:26 - ಕನ್ನಡ ಸಮಕಾಲಿಕ ಅನುವಾದ

26 ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಟ್ಟು ಸಾಯಬೇಕಾಗಿತ್ತು. ಆದರೆ ಒಂದೇ ಸಾರಿ ಯುಗಗಳ ಸಮಾಪ್ತಿಯಲ್ಲೇ ಆತನು ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ತನ್ನನ್ನು ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕ್ರಿಸ್ತಾನ್ ಲೈಂದಾ ಅಪ್ನಾಕ್ ಒಪ್ಸುನ್ ಘೆಟಲ್ಲೆ ಹೊಲ್ಯಾರ್ ಹ್ಯೊ ಜಗ್ ತಯಾರ್ ಹೊಲ್ಲ್ಯಾಕ್ನಾ ತೊ ಲೈಂದಾ ತರಾಸ್ ಕರುನ್ ಘೆವ್ಚೊ ಹೊತ್ತೊ, ಖರೆ ಕ್ರಿಸ್ತಾನ್ ಜಗಾಚ್ಯಾ ಸರ್ತಲ್ಯಾ ದಿಸಾತ್ನಿ ಪಾಪ್ ನಾ ಕರುಚೆ ಮನುನ್ ಅಪ್ನಾಕ್ ಎಕುಚ್ ದಾ ಒಪ್ಸುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:26
36 ತಿಳಿವುಗಳ ಹೋಲಿಕೆ  

ಅವರು ಜಗದುತ್ಪತ್ತಿಗೆ ಮೊದಲೇ ನೇಮಕಗೊಂಡು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷರಾದರು.


ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು.


ಏಕೆಂದರೆ ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದುಹಾಕುವುದು ಅಸಾಧ್ಯ.


ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು.


ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾದರೆಂಬುದು ನಿಮಗೆ ಗೊತ್ತಾಗಿದೆ. ಕ್ರಿಸ್ತ ಯೇಸುವಿನಲ್ಲಿ ಪಾಪವಿಲ್ಲ.


ಕ್ರಿಸ್ತ ಯೇಸುವು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡರು.


ಹೀಗೆ ಒಂದೇ ಸಾರಿ ಎಲ್ಲಾ ಕಾಲಕ್ಕೂ ಕ್ರಿಸ್ತ ಯೇಸು ತಮ್ಮ ದೇಹವನ್ನು ಸಮರ್ಪಿಸಿದ್ದರ ಮೂಲಕ ದೇವರ ಚಿತ್ತವನ್ನು ನೆರವೇರಿಸಿ, ನಮ್ಮನ್ನು ಶುದ್ಧರನ್ನಾಗಿ ಮಾಡಿದ್ದಾರೆ.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.


ಈಗ ದೇವರು ಹೇಳಿದಂತೆಯೇ ವಿಶ್ವಾಸದಲ್ಲಿರುವ ನಾವು ಆ ವಿಶ್ರಾಂತಿಯಲ್ಲಿ ಪ್ರವೇಶಿಸಿದೆವು, “ ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ’ ಎಂದು ನಾನು ಕೋಪದಿಂದ ಪ್ರಮಾಣಮಾಡಿದೆನು,” ಆದರೂ ದೇವರ ಕೆಲಸವು ಜಗತ್ತಿನ ಸೃಷ್ಟಿಯ ಕಾರ್ಯದಿಂದಲೇ ಮುಗಿದಿದೆ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಆ ರಹಸ್ಯವೋ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕಾಲವು ಪರಿಪೂರ್ಣಗೊಂಡಾಗ ಕ್ರಿಸ್ತನಲ್ಲಿ ಒಂದುಗೂಡಿಸುವುದಾಗಿದೆ.


ಆ ಮನುಷ್ಯರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನಗಳಾಗಿವೆ, ಯುಗಾಂತ್ಯಕ್ಕೆ ಬಂದಿರುವ ನಮಗೆ ಎಚ್ಚರಿಕೆಯ ಮಾತುಗಳಾಗಿವೆ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಏಕೆಂದರೆ, ನಾವು ಸತ್ಯದ ಅರಿವನ್ನು ಹೊಂದಿದ ಮೇಲೆ ಬೇಕೆಂದು ಪಾಪ ಮಾಡುತ್ತಾ ಇದ್ದರೆ, ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.


ಆದರೆ ನಾನು ಹೇಳುವುದೇನೆಂದರೆ, ವಾರಸುದಾರನು ತಾನು ಇಡೀ ಆಸ್ತಿಗೆಲ್ಲಾ ಧಣಿಯಾಗಿದ್ದರೂ ಬಾಲಕನಾಗಿರುವ ತನಕ ಅವನಿಗೂ ದಾಸನಿಗೂ ವ್ಯತ್ಯಾಸವಿರುವುದಿಲ್ಲ.


“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು, ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಸಂಭವಿಸುವುದು ಎಂಬುದನ್ನು ತಿಳಿಸುವುದಕ್ಕೋಸ್ಕರ ನಾನೀಗ ಬಂದಿದ್ದೇನೆ. ಏಕೆಂದರೆ ದರ್ಶನವು ಮುಂದೆ ಬರಲಿಕ್ಕಿರುವ ಸಮಯವನ್ನು ಕುರಿತಾಗಿರುತ್ತದೆ,” ಎಂದನು.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ನೀವು ನನ್ನ ಅಪರಾಧವನ್ನು ಪರಿಹರಿಸಬಾರದೇ? ನನ್ನ ಪಾಪವನ್ನು ಕ್ಷಮಿಸಬಾರದೇ? ನಾನು ಬೇಗ ಮಣ್ಣಿಗೆ ಸೇರಿಬಿಡುವೆನು; ನೀವು ನನ್ನನ್ನು ಹುಡುಕಿದರೆ ನಾನು ಇರುವುದಿಲ್ಲ.”


ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.


ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ, ಅವರು ನಮ್ಮ ಅತಿಕ್ರಮಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾರೆ.


ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ.


“ಹೇಗೆ ಕಳೆಯನ್ನು ಕಿತ್ತು ಬೆಂಕಿಯಲ್ಲಿ ಸುಡುವರೋ, ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವುದು.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.


ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು