Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:4 - ಕನ್ನಡ ಸಮಕಾಲಿಕ ಅನುವಾದ

4 ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗರ್ಭಗುಡಿಯಲ್ಲಿ ಚಿನ್ನದ ಧೂಪಾರತಿ ಮತ್ತು ಚಿನ್ನದ ತಗಡನ್ನು ಸುತ್ತಲೂ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇದ್ದವು. ಈ ಮಂಜೂಷದಲ್ಲಿ ಮನ್ನವನ್ನು ಇಟ್ಟಿದ್ದ ಚಿನ್ನದ ಪಾತ್ರೆ ಆರೋನನ ಚಿಗುರಿದ ಕೋಲು ಮತ್ತು ಒಡಂಬಡಿಕೆಯ ಶಿಲಾಶಾಸನಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದ ತಗಡನ್ನು ಮಡಾಯಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆ ಬರೆದಿದ್ದ ಕಲ್ಲಿನ ಹಲಿಗೆಗಳೂ ಇದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಆಗ್ದಿ ಪವಿತ್ರ್ ಜಾಗ್ಯಾರ್ ಧುಪ್ ಜಾಳ್ವುಕ್ ಸೊನ್ಯಾಚೆ ಅಲ್ತಾರ್ ಹೊತ್ತೆ, ತೆ ನಸ್ತಾನಾ ಪೈಲೆಚೆ ಕರಾರಾತ್ ಥವ್ತಲಿ ಕರಾರಾಚಿ ಪೆಟಿ ಹೊತ್ತಿ, ತೆಕಾ ಸೊನ್ಯಾಚಿ ತಗ್ಡಾ ಲಾವಲ್ಲಿ ಹೊತ್ತಿ, ತೆಚ್ಯಾ ಭುತ್ತುರ್ ಸೊನ್ಯಾಚ್ಯಾ ಆಯ್ದಾನಾತ್ ಥವಲ್ಲೊ ಮನ್ನಾ ಅನಿ ಎಕ್ನತ್ತ್ಯಾ ಎಕ್ ವೆಳಾರ್ ಪಾನಾ ಚಿಗ್ರುನ್ ಯೆಲ್ಲೊ ಆರೊನಾಚೊ ದಾಂಡೊ ಹೊತ್ತೊ, ಪೈಲೆಚಿ ಧಾ ಆಜ್ಞಾ ಲಿವಲ್ಲಿ ಹೊತ್ತಿ, ಗುಂಡ್ಯಾಂಚಿ ಫಳಿಯಾ ತ್ಯಾತುರ್ ಥವಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:4
26 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಮೋಶೆಗೆ, “ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಇಟ್ಟುಕೊಳ್ಳುವುದಕ್ಕೆ ಒಡಂಬಡಿಕೆಯ ಮಂಜೂಷದ ಮುಂದೆ ತಿರುಗಿ ಇಡು. ಗೊಣಗುಟ್ಟುವುದನ್ನು ನೀನು ಸಂಪೂರ್ಣವಾಗಿ ತೆಗೆದುಬಿಡಬೇಕು,” ಎಂದರು.


ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ, ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.


ಅವನು ಯೆಹೋವ ದೇವರ ಸನ್ನಿಧಿಯಲ್ಲಿರುವ ಬಲಿಪೀಠದಿಂದ ಬೆಂಕಿಯ ಕೆಂಡಗಳನ್ನು ಧೂಪ ಸುಡುವ ಪಾತ್ರೆಯಲ್ಲಿ ತುಂಬಿಸಿ, ತನ್ನ ಎರಡು ಕೈತುಂಬ ಪರಿಮಳ ಧೂಪದ್ರವ್ಯದ ಚೂರ್ಣವನ್ನು ತೆಗೆದುಕೊಂಡು, ತೆರೆಯನ್ನು ದಾಟಿ ತರಬೇಕು.


ಒಡಂಬಡಿಕೆಯ ಮಂಜೂಷವನ್ನು ಅದರಲ್ಲಿ ಇಟ್ಟು, ಅದನ್ನು ನೀನು ಪರದೆಯಿಂದ ಮುಚ್ಚಬೇಕು.


ಆ ಪರದೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ, ಪರದೆಯೊಳಗೆ ಒಡಂಬಡಿಕೆಯ ಮಂಜೂಷವನ್ನು ತರಬೇಕು. ಪರಿಶುದ್ಧ ಸ್ಥಳಕ್ಕೂ ಮಹಾಪರಿಶುದ್ಧ ಸ್ಥಳಕ್ಕೂ ಮಧ್ಯದಲ್ಲಿ ಆ ಪರದೆಯನ್ನು ವಿಂಗಡಿಸಬೇಕು.


ನಾನು ಯಾವನನ್ನು ಆಯ್ದುಕೊಳ್ಳುತ್ತೇನೋ, ಆ ಮನುಷ್ಯನ ಕೋಲು ಚಿಗುರುವುದು. ಹೀಗೆ ಇಸ್ರಾಯೇಲರು ನಿಮಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ನಿಲ್ಲಿಸಿಬಿಡುವೆನು,” ಎಂದರು.


ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ, ಅವನು ಯೆಹೋವ ದೇವರ ಸಂಗಡ ಬೆಟ್ಟದಲ್ಲಿ ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿಸುತ್ತದೆಂದು ಬೆಟ್ಟದಿಂದ ಇಳಿದಾಗ ಮೋಶೆಗೆ ತಿಳಿಯಲಿಲ್ಲ.


ಚಿನ್ನದ ಧೂಪಾರತಿಯಿದ್ದ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಸಿಂಹಾಸನದ ಮುಂದಿನ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳೊಂದಿಗೆ ಅರ್ಪಿಸಲು ಅವನಿಗೆ ಬಹಳ ಧೂಪವು ಕೊಡಲಾಗಿತ್ತು.


ಇದಲ್ಲದೆ ಯೆಹೋವ ದೇವರು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬರಮಾಡಿದಾಗ, ಅವರ ಸಂಗಡ ಮಾಡಿದ ಒಡಂಬಡಿಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇಟ್ಟೆನು,” ಎಂದನು.


ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ, ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.


ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳಿಗೂ, ಮಂದಿರದ ಮನೆಯ ಬಾಗಿಲುಗಳಿಗೂ ಬಂಗಾರದ ಕೀಲುಗಳನ್ನು ಮಾಡಿಸಿದನು.


ಮರುದಿವಸದಲ್ಲಿ, ಮೋಶೆಯು ಸಾಕ್ಷಿ ಗುಡಾರದೊಳಗೆ ಪ್ರವೇಶಿಸುವಾಗ, ಲೇವಿಯ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ, ಮೊಗ್ಗು ಬಿಟ್ಟು, ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.


ಒಡಂಬಡಿಕೆಯ ಮಂಜೂಷನ್ನು, ಅದರ ಕೋಲುಗಳನ್ನು, ಕರುಣಾಸನವನ್ನು,


ಯೆಹೋವ ದೇವರು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ, ಅವನಿಗೆ ಸಾಕ್ಷಿಯ ಎರಡು ಹಲಗೆಗಳನ್ನೂ ದೇವರು ಬೆರಳಿನಿಂದ ಬರೆದ ಕಲ್ಲಿನ ಹಲಗೆಗಳನ್ನೂ ಕೊಟ್ಟನು.


ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಗೆಗಳ ಎರಡೂ ಬದಿಗಳಲ್ಲಿ ಅಂದರೆ ಈ ಕಡೆಯಲ್ಲಿಯೂ ಮತ್ತು ಆ ಕಡೆಯಲ್ಲಿಯೂ ಬರಹವಿತ್ತು.


ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಿದರು. ಅದರ ಉದ್ದ ಮತ್ತು ಅಗಲ ಸುಮಾರು ನಲವತ್ತೈದು ಸೆಂಟಿಮೀಟರ್, ಅದರ ಎತ್ತರ ಸುಮಾರು ತೊಂಬತ್ತು ಸೆಂಟಿಮೀಟರ್ ಇದ್ದು, ಅದು ಚಚ್ಚೌಕವಾಗಿತ್ತು. ಅದರ ಕೊಂಬುಗಳನ್ನು ಸಹ ಜಾಲಿ ಮರದಿಂದಲೇ ಮಾಡಲಾಗಿತ್ತು.


ಆ ಕಲ್ಲಿನ ಹಲಗೆಗಳು ಅಂದರೆ, ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ, ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿದ್ದೆನು. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ.


ನಲವತ್ತು ದಿವಸ ಹಗಲು ರಾತ್ರಿಗಳಾದ ಮೇಲೆ ಯೆಹೋವ ದೇವರು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟರು.


ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು