Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:7 - ಕನ್ನಡ ಸಮಕಾಲಿಕ ಅನುವಾದ

7 ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೆ ಒಂದೇ ಸಾರಿ ಪ್ರವೇಶಿಸುತ್ತಿದ್ದನು. ಅವನು ರಕ್ತವನ್ನು ತೆಗೆದುಕೊಳ್ಳದೆ ಎಂದಿಗೂ ಹೋಗುತ್ತಿರಲಿಲ್ಲ. ಬಲಿಯ ರಕ್ತವನ್ನು ತನಗೋಸ್ಕರವೂ ಜನರು ತಿಳಿಯದೆ ಮಾಡಿದ ಪಾಪಗಳಿಗೋಸ್ಕರವೂ ಸಮರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಎರಡನೆಯ ಭಾಗವಾದ ಗರ್ಭಗುಡಿಯನ್ನು ಪ್ರಧಾನ ಯಾಜಕನೊಬ್ಬನೇ ಪ್ರವೇಶಿಸುತ್ತಿದ್ದನು; ಅದೂ ವರ್ಷಕ್ಕೆ ಒಮ್ಮೆ ಮಾತ್ರ. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಅವನು ಅಲ್ಲಿಗೆ ಹೋಗುವಂತಿರಲಿಲ್ಲ. ಆ ರಕ್ತವನ್ನು ತನಗಾಗಿಯೂ ಜನರು ತಿಳಿಯದೆ ಮಾಡಿದ ಅಪರಾಧಗಳಿಗಾಗಿಯೂ ಅರ್ಪಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ, ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಪ್ರಧಾನಯಾಜಕನು ಮಾತ್ರ ಎರಡನೆ ಕೊಠಡಿಯ ಒಳಗೆ ಹೋಗಬಹುದಿತ್ತು. ಅವನು ವರ್ಷಕ್ಕೊಮ್ಮೆ ಮಾತ್ರ ಅದರೊಳಗೆ ಹೋಗುತ್ತಿದ್ದನು. ಅವನು ತನ್ನೊಂದಿಗೆ ರಕ್ತವನ್ನು ತೆಗೆದುಕೊಳ್ಳದೆ ಎಂದೂ ಅದರೊಳಗೆ ಪ್ರವೇಶಿಸುತ್ತಿರಲಿಲ್ಲ. ತನಗೋಸ್ಕರವಾಗಿಯೂ ಜನರು ತಿಳಿಯದೆ ಮಾಡಿದ ಪಾಪಗಳಿಗಾಗಿಯೂ ಅವನು ಆ ರಕ್ತವನ್ನು ದೇವರಿಗೆ ಅರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಮೊಟೊ ಯಾಜಕ್ ತವ್ಡೆಚ್ ಭುತ್ತುರ್‍ಲ್ಯಾ ಖೊಲಿಕ್ ಜಾಯ್ ಸಾರ್ಕೆ ಹೊತ್ತೆ, ತೆಬಿ ವರ್ಸಾಕ್ ಎಗ್ದಾಚ್ ಅನಿ ತೆಬಿ ಜಾಯ್ನಸಿ ತೆ ರಗಾತ್ ಅಪ್ನಾ ಸಾಟ್ನಿ ಅನಿ ಲೊಕಾಕ್ನಿ ಕಳುಕ್ ದಿ ನಸ್ತಾನಾ ಅಪ್ನಿ ಕರಲ್ಲ್ಯಾ ಪಾಪಾಕ್ನಿ ಮನುನ್ ಮಾಗುನ್ ದೆವಾಕ್ ತೆ ರಗಾತ್ ದಿತಲೆ ಹೊಲ್ಲೆ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:7
23 ತಿಳಿವುಗಳ ಹೋಲಿಕೆ  

“ಹೀಗೆ ಇಸ್ರಾಯೇಲರ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತ ಮಾಡುವುದು, ನಿಮಗೆ ನಿರಂತರವಾದ ನಿಯಮವಾಗಿರುವುದು,” ಎಂದು ಹೇಳಿದರು. ಯೆಹೋವ ದೇವರು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.


ಅಲ್ಲದೆ ಅವನು ಹಿಂಡಿನೊಳಗಿಂದ ಕಳಂಕರಹಿತವಾದ ಒಂದು ಟಗರನ್ನು ನಿನ್ನ ಅಂದಾಜಿಗನುಸಾರ ಪ್ರಾಯಶ್ಚಿತ್ತ ಬಲಿಗಾಗಿ, ಯಾಜಕನ ಬಳಿಗೆ ತರಬೇಕು. ಯಾಜಕನು, ಅಜ್ಞಾನದಿಂದ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ, ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನಿಗೆ ಕ್ಷಮೆ ದೊರಕುವುದು.


ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು.


ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೆ ಒಂದು ಸಾರಿ ಪಾಪ ಪರಿಹಾರದ ಬಲಿಯ ರಕ್ತದಿಂದ ಅದರ ಕೊಂಬುಗಳಿಗೆ ಹಚ್ಚಿ ಪ್ರಾಯಶ್ಚಿತ್ತ ಮಾಡಬೇಕು. ಅದು ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.”


ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.


ಇವರು ಸಹ ದ್ರಾಕ್ಷಾರಸದಿಂದ ಮತ್ತರಾಗಿದ್ದಾರೆ. ಮದ್ಯದಿಂದಲೂ ಓಲಾಡುತ್ತಿದ್ದಾರೆ. ಯಾಜಕನೂ ಪ್ರವಾದಿಯೂ ಮದ್ಯದಿಂದ ಮತ್ತರಾಗಿದ್ದಾರೆ. ದ್ರಾಕ್ಷಾರಸದಿಂದ ತೂರಾಡುತ್ತಿದ್ದಾರೆ. ಮದ್ಯದಿಂದ ಓಲಾಡುತ್ತಿದ್ದಾರೆ. ದರ್ಶನವಾಗುತ್ತಿರುವಾಗಲೂ ಅವರು ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.


ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ, ಅವರನ್ನು ಹಿಂಬಾಲಿಸುವವರು ನಾಶವಾಗುವರು.


ನನ್ನ ಪ್ರಜೆಗಳನ್ನು ಹುಡುಗರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ನೀವು ನಡೆಯುವ ದಾರಿಯನ್ನು ಹಾಳು ಮಾಡಿದ್ದಾರೆ.


ಆ ಯಜ್ಞಗಳು ಪ್ರತಿವರ್ಷವೂ ಪಾಪಗಳ ಜ್ಞಾಪಕವನ್ನು ಉಂಟುಮಾಡುತ್ತಿತ್ತು.


ಆದ್ದರಿಂದ ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.


ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನೂ ಮಾಡುವೆನು. ಅವರ ಜ್ಞಾನಿಗಳ ಜ್ಞಾನವು ಅಳಿಯುವುದು. ಅವರ ವಿವೇಕಿಗಳ ವಿವೇಕವು ಅಡಗಿಕೊಳ್ಳುವುದು.”


ನಾಲ್ವತ್ತು ವರ್ಷ ಆ ಸಂತತಿಗೆ ಬೇಸರಗೊಂಡು, ‘ಇವರು ತಮ್ಮ ಹೃದಯದಲ್ಲಿ ತಪ್ಪಿಹೋಗುವ ಜನರಾಗಿದ್ದಾರೆ, ನನ್ನ ಮಾರ್ಗಗಳನ್ನು ಇವರು ಅರಿಯರು,’ ಎಂದೆನು.


ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.


ಆದರೆ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.


ಆಗ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು, ಅಂಥ ಅಗೌರವಕ್ಕಾಗಿ ದೇವರು ಅವನನ್ನು ಶಿಕ್ಷಿಸಿದರು; ಅವನು ಅಲ್ಲಿಯೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.


ಯಾಜಕನು ಇಸ್ರಾಯೇಲರ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತ ಮಾಡಬೇಕು. ಏಕೆಂದರೆ ಅದು ತಿಳಿಯದೆ ಮಾಡಲಾಗಿತ್ತು. ಆದರೂ ಅವರು ಯೆಹೋವ ದೇವರಿಗೆ ದಹನಬಲಿಯಾಗಿ ತಮ್ಮ ಸಮರ್ಪಣೆಯನ್ನೂ, ತಮ್ಮ ತಪ್ಪಿಗೋಸ್ಕರ ಪಾಪ ಪರಿಹಾರಕ ಬಲಿಯನ್ನೂ ಯೆಹೋವ ದೇವರ ಮುಂದೆ ತರಬೇಕು.


ಅವರು ತಮ್ಮ ಹೃದಯ ಕಠಿಣತ್ವದ ಅಜ್ಞಾನದಿಂದ ತಮ್ಮ ಕತ್ತಲು ಕವಿದ ತಿಳುವಳಿಕೆಯಲ್ಲಿ, ದೇವರ ಜೀವದಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರಾಗಿದ್ದಾರೆ.


ಈ ನಿರೀಕ್ಷೆಯು ನಮ್ಮ ಆತ್ಮಕ್ಕೆ ನಿಶ್ಚಯವಾದದ್ದೂ ಸ್ಥಿರವಾದದ್ದೂ ಆಗಿರುವ ಲಂಗರದ ಹಾಗಿದೆ. ಅದು ಅತಿ ಪರಿಶುದ್ಧಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದೂ ಆಗಿದೆ.


ಎರಡನೆಯ ತೆರೆಯ ಆಚೆ ಅತಿ ಪವಿತ್ರ ಸ್ಥಳ ಎಂದು ಕರೆಯಲಾದ ಗುಡಾರವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು