Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 1:1 - ಕನ್ನಡ ಸಮಕಾಲಿಕ ಅನುವಾದ

1 ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 1:1
23 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.


ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.


ಆಗ ಎಜ್ರನು, “ನಮ್ಮ ತಂದೆಗಳ ದೇವರಾಗಿರುವ ಯೆಹೋವ ದೇವರು ಸ್ತುತಿಹೊಂದಲಿ! ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಮಹಿಮೆಯನ್ನು ತರುವಂತೆ, ಅರಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟಿದ್ದಾರೆ.


ಅವರನ್ನು ಸೆರೆಹಿಡಿದವರ ಕರುಣೆ ತೋರುವಂತೆ ಮಾಡಿದರು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. ಏಕೆಂದರೆ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವುದಕ್ಕೆ ಅಸ್ಸೀರಿಯ ದೇಶದ ಅರಸನ ಹೃದಯವನ್ನು, ಅವರ ಕಡೆಗೆ ಮನಪರಿವರ್ತಿಸಿದ್ದರಿಂದ ಯೆಹೋವ ದೇವರು ಅವರನ್ನು ಸಂತೋಷಪಡಿಸಿದರು.


ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರ್ಷದಲ್ಲಿ ನೆಬೂಕದ್ನೆಚ್ಚರನು ಕನಸುಗಳನ್ನು ಕಂಡನು. ಅವನ ಆತ್ಮವು ಕಳವಳಗೊಂಡಿತು. ಅವನಿಗೆ ನಿದ್ರೆಯೇ ಬರಲಿಲ್ಲ.


ಅದಕ್ಕೆ ಯೋಹಾನನು, “ಪ್ರವಾದಿ ಯೆಶಾಯನು ಹೇಳಿದಂತೆ, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವೇ ನಾನು,” ಎಂದು ಹೇಳಿದನು.


ಆಗ ಯೆಹೂದ ಹಾಗೂ ಬೆನ್ಯಾಮೀನ್ ಕುಟುಂಬಗಳ ಮುಖ್ಯಸ್ಥರೂ, ಯಾಜಕರೂ, ಲೇವಿಯರೂ, ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಹೋಗಲು ಯೆಹೋವ ದೇವರಿಂದ ಪ್ರೇರಿತರಾದವರೆಲ್ಲರೂ ಎದ್ದರು.


ಆದರೆ ಜೆರುಬ್ಬಾಬೆಲನೂ, ಯೇಷೂವನೂ, ಮಿಕ್ಕಾದ ಇಸ್ರಾಯೇಲಿನ ಕುಟುಂಬಗಳ ಮುಖ್ಯಸ್ಥರೂ ಅವರಿಗೆ, “ನಮ್ಮ ದೇವರಿಗೆ ಆಲಯವನ್ನು ಕಟ್ಟುವುದರಲ್ಲಿ ನಿಮಗೆ ಭಾಗವಿಲ್ಲ. ಪಾರಸಿಯ ಅರಸನಾದ ಕೋರೆಷನು ನಮಗೆ ಆಜ್ಞಾಪಿಸಿದ ಹಾಗೆ, ನಾವು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರಿಗೆ ಅದನ್ನು ಕಟ್ಟುವೆವು,” ಎಂದರು.


ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನೆಂದರೆ: ಜನರು ಬಲಿಗಳನ್ನು ಸಮರ್ಪಿಸುವುದಕ್ಕಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಅಸ್ತಿವಾರಗಳನ್ನು ಬಲವಾಗಿ ಹಾಕಬೇಕು. ಅದರ ಎತ್ತರ 27 ಮೀಟರ್, ಅದರ ಅಗಲ 27 ಮೀಟರ್ ಆಗಿರಲಿ.


ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗನಾದ ಜೆಕರ್ಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ, ಕೋರೆಷ್, ದಾರ್ಯಾವೆಷ್ ಹಾಗೂ ಅರ್ತಷಸ್ತ ಎಂಬ ಪರ್ಷಿಯದ ರಾಜರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.


ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’


ಬೆನ್ಯಾಮೀನ್ ಸೀಮೆಗೆ ಸೇರಿ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.


ಅವರೊಂದಿಗೆ ಪಾರಸಿಯರೂ ಕೂಷ್ಯರೂ ಮತ್ತು ಪೂಟ್ಯರೂ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.


ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ.


ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು.


“ಯೆಹೋವ ದೇವರು ತಾವೇ ಅಭಿಷೇಕಿಸಿದ ಕೋರೆಷನಿಗೆ ಹೇಳುವುದೇನೆಂದರೆ: ರಾಷ್ಟ್ರಗಳನ್ನು ನೀನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯಲು ನಾನು ನಿನ್ನ ಬಲಗೈಯನ್ನು ಹಿಡಿದು ನಡೆಸುವೆನು.


ದಾನಿಯೇಲನು ರಾಜ ಕೋರೆಷನ ಆಳಿಕೆಯ ಮೊದಲನೆಯ ವರ್ಷದ ತನಕ ಅಲ್ಲಿಯೇ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು