ಎಜ್ರ 1:2 - ಕನ್ನಡ ಸಮಕಾಲಿಕ ಅನುವಾದ2 “ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ - ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು ತನಗೋಸ್ಕರ ಯೆಹೂದ ದೇಶದ ಯೆರೂಸಲೇವಿುನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಪರ್ಶಿಯಾದ ರಾಜನಾದ ಸೈರಸನ ಪ್ರಕಟನೆ: “ಪರಲೋಕದ ದೇವರಾದ ಯೆಹೋವನು ಭೂಲೋಕದಲ್ಲಿರುವ ಎಲ್ಲಾ ದೇಶಗಳನ್ನು ನನ್ನ ವಶಕ್ಕೆ ಕೊಟ್ಟಿದ್ದಾನೆ. ಯೆಹೂದ ದೇಶದ ಜೆರುಸಲೇಮ್‌ನಲ್ಲಿ ತನಗೊಂದು ಆಲಯವನ್ನು ಕಟ್ಟಲು ಆತನು ನನ್ನನ್ನು ಆರಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.