ಎಜ್ರ 1:4 - ಕನ್ನಡ ಸಮಕಾಲಿಕ ಅನುವಾದ4 ಯೆಹೂದ್ಯರಲ್ಲಿ ಬದುಕುಳಿದವರು ಈಗ ವಾಸಿಸುತ್ತಿರುವ ಯಾವುದೇ ಪ್ರದೇಶದಲ್ಲಿ, ಜನರು ಅವರಿಗೆ ಬೆಳ್ಳಿ ಮತ್ತು ಬಂಗಾರ, ಸರಕುಗಳು ಮತ್ತು ಪ್ರಾಣಿಪಶುಗಳನ್ನು ಮತ್ತು ಯೆರೂಸಲೇಮಿನ ದೇವಾಲಯಕ್ಕೆ ಉಚಿತ ಕಾಣಿಕೆಗಳನ್ನು ಒದಗಿಸಬೇಕು.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸೆರೆಯಾಳುಗಳಾಗಿ ಅಳಿದುಳಿದವರು ಯಾವ ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರಿನ ಜನರು ಜೆರುಸಲೇಮಿನ ದೇವಾಲಯಕ್ಕಾಗಿ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕುಸಾಮಗ್ರಿ, ಪ್ರಾಣಿಪಶು, ಇವುಗಳನ್ನು ಕೊಟ್ಟು ಅವರಿಗೆ ಸಹಾಯ ಮಾಡಲಿ,” ಎಂದು ಪ್ರಚುರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇವಿುನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯಮಾಡಲಿ ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ಯಾವ ಸ್ಥಳದಲ್ಲಿಯಾದರೂ ಇಸ್ರೇಲರಲ್ಲಿ ಉಳಿದವರು ಇದ್ದಲ್ಲಿ ಅಂಥವರಿಗೆ ಆ ಸ್ಥಳದವರು ಸಹಾಯ ಮಾಡಬೇಕು. ಅವರಿಗೆ ಬೆಳ್ಳಿ, ಬಂಗಾರ, ಪಶುಗಳನ್ನು ಮತ್ತು ಇತರ ವಸ್ತುಗಳನ್ನು ಕೊಡಲಿ. ಜೆರುಸಲೇಮಿನಲ್ಲಿನ ದೇವಾಲಯಕ್ಕೆ ಕಾಣಿಕೆಗಳನ್ನು ಕೊಡಲಿ.” ಅಧ್ಯಾಯವನ್ನು ನೋಡಿ |