ಎಜ್ರ 1:5 - ಕನ್ನಡ ಸಮಕಾಲಿಕ ಅನುವಾದ5 ಆಗ ಯೆಹೂದ ಹಾಗೂ ಬೆನ್ಯಾಮೀನ್ ಕುಟುಂಬಗಳ ಮುಖ್ಯಸ್ಥರೂ, ಯಾಜಕರೂ, ಲೇವಿಯರೂ, ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಹೋಗಲು ಯೆಹೋವ ದೇವರಿಂದ ಪ್ರೇರಿತರಾದವರೆಲ್ಲರೂ ಎದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಈ ಪ್ರಕಟನೆಯನ್ನು ಕೇಳಿ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಕ್ಕೆ ಸೇರಿದ ಮುಖ್ಯಸ್ಥರು, ಯಾಜಕರು, ಲೇವಿಯರು ಹಾಗು ದೈವಪ್ರೇರಿತರಾದ ಎಲ್ಲರು ಜೆರುಸಲೇಮಿನಲ್ಲಿ ಸರ್ವೇಶ್ವರನಿಗೆ ಪುನಃ ಆಲಯಕಟ್ಟುವುದಕ್ಕಾಗಿ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಪ್ರಧಾನರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇವಿುನಲ್ಲಿ ಯೆಹೋವನಿಗೋಸ್ಕರ ಆಲಯಕಟ್ಟುವದಕ್ಕಾಗಿ ಹೊರಟುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೆರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೆರುಸಲೇಮಿಗೆ ಹೊರಟರು. ಅಧ್ಯಾಯವನ್ನು ನೋಡಿ |
ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,