ಎಜ್ರ 1:8 - ಕನ್ನಡ ಸಮಕಾಲಿಕ ಅನುವಾದ8 ಅವುಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸದವನಾದ ಮಿತ್ರದಾತನ ಕೈಯಿಂದ ತರಿಸಿ, ಯೆಹೂದದ ರಾಜಕುಮಾರನಾದ ಶೆಷ್ಬಚ್ಚರನಿಗೆ ಎಣಿಸಿಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ಅವುಗಳನ್ನು ಖಜಾನೆಯ ಅಧಿಕಾರಿಯಾದ ಮಿತ್ರದಾತನಿಗೆ ಒಪ್ಪಿಸಿದನು. ಇವನು ಅವುಗಳನ್ನು ಯೆಹೂದದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕಮಾಡಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪರ್ಷಿಯಾದ ರಾಜ ಸೈರಸನು, ಸರ್ವೇಶ್ವರನ ಆಲಯಕ್ಕೆ ಸೇರಿದ್ದ ಸಾಮಾನುಗಳನ್ನು ಅಲ್ಲಿಂದ ತೆಗೆಸಿ ಖಜಾಂಚಿಯಾಗಿದ್ದ ಮಿತ್ರದಾತನಿಗೆ ಒಪ್ಪಿಸಿದನು . ಮಿತ್ರದಾತನು ಅವುಗಳನ್ನು ಜುದೇಯದ ರಾಜ್ಯ ಪಾಲನಾದ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅಲ್ಲಿಂದ ತೆಗಿಸಿ ಖಜಾನದಾರನಾದ ವಿುತ್ರದಾತನಿಗೆ ಒಪ್ಪಿಸಿದನು; ಇವನು ಅವುಗಳನ್ನು ಯೆಹೂದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪರ್ಶಿಯಾದ ರಾಜನಾದ ಸೈರಸ್ ತನ್ನ ಖಜಾನೆಯ ಮೇಲ್ವಿಚಾರಕನಾದ ಮಿತ್ರದಾತನಿಗೆ ಆ ವಸ್ತುಗಳನ್ನು ಹೊರತರಲು ಹೇಳಿದನು. ಮಿತ್ರದಾತನು ಯೆಹೂದ ನಾಯಕನಾದ ಶೆಷ್ಬಚ್ಚರನಿಗೆ ಆ ವಸ್ತುಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |
ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,