Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:1 - ಕನ್ನಡ ಸಮಕಾಲಿಕ ಅನುವಾದ

1 ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅತ್ತು ದೇವರ ಆಲಯದ ಮುಂದೆ ಅಡ್ಡಬಿದ್ದ ತರುವಾಯ ಇಸ್ರಾಯೇಲರಲ್ಲಿ ಸ್ತ್ರೀಯರೂ, ಪುರುಷರೂ, ಮಕ್ಕಳು ಮಹಾಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡು ಬಂದರು. ಜನರು ಬಹಳವಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎಜ್ರನು ದೇವಾಲಯದ ಮುಂದೆ ಹೀಗೆ ಅಡ್ಡಬಿದ್ದು ಅಳುತ್ತಾ, ವಿಜ್ಞಾಪನೆಯನ್ನೂ ಪಾಪ ನಿವೇದನೆಯನ್ನೂ ಮಾಡುತ್ತಿರುವಾಗ ಇಸ್ರಯೇಲರ ಗಂಡಸರು, ಹೆಂಗಸರು ಹಾಗು ಮಕ್ಕಳು ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಜನರೆಲ್ಲರು ಅಲ್ಲಿ ಬಹಳವಾಗಿ ದುಃಖಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ ಪಾಪನಿವೇದನವನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲ್ಯರ ಗಂಡಸರೂ ಹೆಂಗಸರೂ ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಅಲ್ಲಿನ ಜನರು ಬಹಳವಾಗಿ ಅಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವಾಲಯದೆದುರು ಎಜ್ರನು ರೋಧಿಸುತ್ತಾ, ದೇವರಿಗೆ ಅಡ್ಡಬಿದ್ದು ಪ್ರಾರ್ಥಿಸುತ್ತಾ ಪಾಪದರಿಕೆ ಮಾಡುತ್ತಾ ಇರುವಾಗ ಅವನ ಸುತ್ತಲೂ ಅನೇಕ ಮಂದಿ ಇಸ್ರೇಲರ ಗಂಡಸರು, ಹೆಂಗಸರು, ಮಕ್ಕಳು ಸೇರಿಬಂದರು. ಅವರೂ ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:1
29 ತಿಳಿವುಗಳ ಹೋಲಿಕೆ  

ನಾನು ಮಾತಾಡುತ್ತಾ, ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ, ನನ್ನ ಜನರಾದ ಇಸ್ರಾಯೇಲರ ಪಾಪವನ್ನೂ ಅರಿಕೆಮಾಡುತ್ತಾ, ನನ್ನ ದೇವರಾದ ಯೆಹೋವ ದೇವರ ಮುಂದೆ ಅವರ ಪರಿಶುದ್ಧ ಪರ್ವತಕ್ಕೋಸ್ಕರವಾಗಿ, ವಿಜ್ಞಾಪಿಸುತ್ತಿರಲಾಗಿ,


ನಿಮ್ಮ ನಿಯಮವನ್ನು ಕೈಗೊಳ್ಳದೇ ಇರುವಾಗ ನನ್ನ ಕಣ್ಣಿನಿಂದ ಕಣ್ಣೀರು ಧಾರೆಯಾಗಿ ಹರಿಯುತ್ತಿವೆ.


ನನ್ನ ಹೃದಯದಲ್ಲಿ ಮಹಾದುಖಃವೂ ಎಡೆಬಿಡದ ವೇದನೆಯೂ ತೀರದವೇದನೆಯೂ ಇದೆ.


ನಿಮ್ಮ ಜನರಾದ ಇಸ್ರಾಯೇಲರ ಮತ್ತು ನಿಮ್ಮ ಸೇವಕನ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.


ತರುವಾಯ ಯೇಸು ಯೆರೂಸಲೇಮ ಪಟ್ಟಣವನ್ನೂ ಅದರ ಸ್ಥಿತಿಯನ್ನೂ ಕಂಡು, ಅದರ ಸಲುವಾಗಿ ಅತ್ತು,


ರಾಜಪಾಲನಾದ ನೆಹೆಮೀಯನೂ, ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನೂ, ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಜನರೆಲ್ಲರಿಗೆ: “ಈ ದಿನವು ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಪರಿಶುದ್ಧವಾದುದರಿಂದ ದುಃಖಿಸದೆ, ಅಳದೆ ಇರಿ,” ಎಂದರು. ಏಕೆಂದರೆ ಜನರೆಲ್ಲರು ದೇವರ ನಿಯಮದ ಮಾತುಗಳನ್ನು ಕೇಳಿದಾಗ ಅತ್ತರು.


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


ಜನರಲ್ಲಿ ಉಳಿದವರಾದ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ, ದೇವರ ನಿಯಮದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರೆಲ್ಲರೂ, ಅವರ ಹೆಂಡತಿಯರೂ, ಅವರ ಪುತ್ರರೂ, ಅವರ ಪುತ್ರಿಯರೂ, ತಿಳುವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ,


‘ನಿಮ್ಮ ಹೆಸರು ಈ ಆಲಯದಲ್ಲಿರುವುದರಿಂದ ಖಡ್ಗವೂ ನ್ಯಾಯತೀರಿಸುವ ಶಿಕ್ಷೆಯೂ, ಘೋರವ್ಯಾಧಿಯೂ ಬರವೇನಾದರೂ ನಮ್ಮ ಮೇಲೆ ಬಂದರೆ, ನಾವು ಈ ಆಲಯದ ಮುಂದೆಯೂ, ನಿಮ್ಮ ಸಮ್ಮುಖದಲ್ಲಿಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿಮ್ಮನ್ನು ಕೂಗುವಾಗ, ನೀವು ಕೇಳಿ ರಕ್ಷಿಸುವಿರಿ,’ ಎಂದು ಹೇಳಲಿಲ್ಲವೇ?


ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.


ನೀವು ಕೇಳದಿದ್ದರೆ, ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು, ಯೆಹೋವ ದೇವರ ಮಂದೆಯು ಸೆರೆಯಾಗಿ ಹೋದದ್ದರಿಂದ ಬಹಳವಾಗಿ ಅಳುವೆನು. ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.


ನನ್ನ ಪಾಪವನ್ನು ನಿಮಗೆ ತಿಳಿಸಿ, ನನ್ನ ಅನ್ಯಾಯವನ್ನು ಮರೆಮಾಡದೆ, “ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ ಅರಿಕೆ ಮಾಡುವೆನು,” ಎಂದು ಹೇಳಿದೆನು; ಆಗ, ನೀವು ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.


ಯೆಹೋವ ದೇವರು ಅವನಿಗೆ, “ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆಯನ್ನೂ ನಿನ್ನ ವಿಜ್ಞಾಪನೆಯನ್ನೂ ಕೇಳಿ ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಆಲಯವನ್ನು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


ಆದರೆ ನಮ್ಮ ಸಮಯ ಮುಗಿದಾಗ, ನಮ್ಮ ಪ್ರಯಾಣವನ್ನು ಮುಂದುವರಿಸಬೇಕೆಂದಿದ್ದೆವು. ಶಿಷ್ಯರೆಲ್ಲರೂ ಅವರ ಮಡದಿ ಮಕ್ಕಳೂ ಪಟ್ಟಣದ ಹೊರಗಿನವರೆಗೆ ನಮ್ಮೊಂದಿಗೆ ಬಂದರು. ಸಮುದ್ರ ತೀರದಲ್ಲಿ ನಾವು ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ಆಗ ಕೊರ್ನೇಲ್ಯನು, “ನಾಲ್ಕು ದಿನಗಳ ಹಿಂದೆ ಈ ಸಮಯದಲ್ಲಿ ಅಂದರೆ, ಮಧ್ಯಾಹ್ನ ಮೂರು ಗಂಟೆಯ ಸಮಯದಲ್ಲಿ ನಾನು ನನ್ನ ಮನೆಯಲ್ಲಿದ್ದುಕೊಂಡು ಪ್ರಾರ್ಥನೆ ಮಾಡುತ್ತಿದ್ದೆನು. ಆಗ ಫಕ್ಕನೆ ಹೊಳೆಯುತ್ತಿರುವ ವಸ್ತ್ರ ಧರಿಸಿದ್ದ ಒಬ್ಬನು ನನ್ನೆದುರು ಬಂದು ನಿಂತುಕೊಂಡನು.


ಹೀಗೆ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಯೆಹೋವ ದೇವರ ಮುಂದೆ ನಿಂತರು.


ಜನರನ್ನು ಅಂದರೆ, ಪುರುಷರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಪರದೇಶಿಯರನ್ನೂ ಕೂಡಿಸಬೇಕು. ಅವರು ಕೇಳಿ ಕಲಿತು, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಈ ನಿಯಮದ ವಾಕ್ಯಗಳನ್ನೆಲ್ಲಾ ಕೈಗೊಂಡು ನಡೆಯುವ ಹಾಗೆ, ಅವರೆಲ್ಲರನ್ನು ಒಂದು ಕಡೆ ಕೂಡಿಸಬೇಕು.


ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಆಮೇಲೆ ಎಜ್ರನು ಎದ್ದು ದೇವರ ಆಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು. ಏಕೆಂದರೆ ಸೆರೆಯಿಂದ ಯೆರೂಸಲೇಮಿಗೆ ಬಂದಿದ್ದ ಯೆಹೂದ್ಯರ ಅಪನಂಬಿಗಸ್ತಿಕೆಯ ಬಗ್ಗೆ ತುಂಬಾ ದುಃಖಿತನಾಗಿದ್ದನು.


ನಾನು ಈ ಸಮಾಚಾರವನ್ನು ಕೇಳಿದಾಗ, ನೆಲದ ಮೇಲೆ ಕೂತುಕೊಂಡು ಅತ್ತೆನು. ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.


ಕೃಪೆಮಾಡಿ ನನಗೆ ಕಿವಿಗೊಡಿರಿ, ಕಟಾಕ್ಷಿಸಿ ನೋಡಿರಿ, ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿರಿ. ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಾಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ. ಅವರು ನಿಮಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ. ನಾನೂ, ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.


ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.


ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ, ಮಕ್ಕಳಿಗೂ, ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು