Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:14 - ಕನ್ನಡ ಸಮಕಾಲಿಕ ಅನುವಾದ

14 ಆದಕಾರಣ ದಯಮಾಡಿ ಸಭೆಯ ಎಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಈ ಕಾರ್ಯದ ನಿಮಿತ್ತ ನಮ್ಮ ದೇವರ ಕಠಿಣ ಕೋಪವು ನಮ್ಮನ್ನು ಬಿಟ್ಟು ಹೋಗುವವರೆಗೆ, ನಮ್ಮ ಪಟ್ಟಣಗಳಲ್ಲಿ ಯಹೂದ್ಯರಲ್ಲದ ಸ್ತ್ರೀಯರನ್ನು ತೆಗೆದುಕೊಂಡವರು, ನೇಮಿಸಿದ ಕಾಲದಲ್ಲಿ ಬಂದು, ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ, ಅದರ ನ್ಯಾಯಾಧಿಪತಿಗಳೂ ಇರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದುದರಿಂದ ನಮ್ಮ ಮುಂದಾಳುಗಳು ಸರ್ವಸಮೂಹದ ಪರವಾಗಿ ಈ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರು, ನೇಮಿತ ದಿನದಲ್ಲಿ, ತಮ್ಮ ಊರಿನ ಹಿರಿಯರೊಡನೆ ಹಾಗು ನ್ಯಾಯಾಧಿಪತಿಗಳೊಡನೆ ಇಲ್ಲಿಗೆ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಬಗ್ಗೆ ತಾಳಿರುವ ಉಗ್ರಕೋಪ ಹೀಗೆ ಪರಿಹಾರವಾಗಲಿ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದದರಿಂದ ನಮ್ಮ ಪ್ರಭುಗಳು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆ ಮಾಡಿಕೊಂಡವರೆಲ್ಲರೂ ನೇವಿುತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಕೂಟದಲ್ಲಿ ನಮ್ಮ ಹಿರಿಯರು, ಪ್ರಧಾನರು ಒಂದು ತೀರ್ಮಾನಕ್ಕೆ ಬರಲಿ. ಆಮೇಲೆ ನಮ್ಮನಮ್ಮ ಊರಿನಲ್ಲಿ ಅನ್ಯಸ್ತ್ರೀಯರನ್ನು ಮದುವೆ ಆದವರು ತಮ್ಮ ಪ್ರಧಾನರೊಂದಿಗೆ ಒಂದು ನೇಮಿತ ಸಮಯದಲ್ಲಿ ಇಲ್ಲಿಗೆ ಬರಲಿ. ಆಗ ದೇವರು ನಮ್ಮ ಮೇಲಿರುವ ತನ್ನ ಕೋಪವನ್ನು ನಿವಾರಿಸುವನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:14
14 ತಿಳಿವುಗಳ ಹೋಲಿಕೆ  

ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.


ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಉಗ್ರಕೋಪವು ನಮ್ಮನ್ನು ಬಿಟ್ಟುಹೋಗುವ ಹಾಗೆ, ನಾನು ಅವರ ಸಂಗಡ ಒಡಂಬಡಿಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.


ಆಗ ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೋಪಾಗ್ನಿಯು ಇಸ್ರಾಯೇಲಿನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥರೆಲ್ಲರನ್ನು ತೆಗೆದುಕೊಂಡು, ಅವರನ್ನು ಹಗಲು ಹೊತ್ತಿನಲ್ಲಿ ಯೆಹೋವ ದೇವರ ಮುಂದೆ ಕೊಂದುಹಾಕು.”


ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?


ಆದಾಗ್ಯೂ ದೇವರು ಅವರನ್ನು ಕರುಣಿಸಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಬಿಟ್ಟುಬಿಟ್ಟರು. ಹೌದು, ಅನೇಕ ಸಾರಿ ದೇವರು ಕೋಪಿಸಿಕೊಳ್ಳದಿದ್ದರು, ತಮ್ಮ ಬೇಸರವನ್ನು ದೇವರು ಪ್ರಯೋಗಿಸಲಿಲ್ಲ.


ಅವರ ಮೇಲೆ ಕಲ್ಲುಕುಪ್ಪೆ ಕೂಡಿಸಿದರು. ಅದು ಈ ದಿನದವರೆಗೂ ಇದೆ. ಆಗ ಯೆಹೋವ ದೇವರು ತಮ್ಮ ಕೋಪದ ಉರಿಯನ್ನು ಬಿಟ್ಟು ತಿರುಗಿದರು. ಆದ್ದರಿಂದ ಆ ಸ್ಥಳವು ಈವರೆಗೂ ಆಕೋರಿನ ಕಣಿವೆ ಎಂದು ಕರೆಯಲಾಗುತ್ತದೆ.


ನೀವು ಯಾಜಕರಾದ ಲೇವಿಯರ ಬಳಿಗೂ, ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು. ಅವರು ನಿಮಗೆ ಆ ತೀರ್ಪನ್ನು ತಿಳಿಸುವರು.


ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕಾಪಾಡಿ,


ಆದರೂ ಮನಸ್ಸೆಯು ಮಾಡಿದ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲೆ ಯೆಹೋವ ದೇವರ ಕೋಪವು ಇನ್ನೂ ನೆಲೆಯಾಗಿತ್ತು.


ಆದ್ದರಿಂದ ನೀವು ನನ್ನ ಮಾತು ಕೇಳಿ ನಿಮ್ಮ ನಿಮ್ಮ ಸಹೋದರರಲ್ಲಿ ನೀವು ಸೆರೆಯಾಗಿ ತೆಗೆದುಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಏಕೆಂದರೆ ಯೆಹೋವ ದೇವರ ಕೋಪಾಗ್ನಿಯು ನಿಮ್ಮ ಮೇಲೆ ಇರುವುದು,” ಎಂದನು.


ಆದರೆ ಜನರು ಅನೇಕರು. ಇದು ಮಳೆಗಾಲವಾಗಿರುವುದರಿಂದ ಹೊರಗೆ ಇರಲಾರೆವು. ಇದಲ್ಲದೆ ಇದು ಒಂದೆರಡು ದಿನಗಳ ಕೆಲಸವಲ್ಲ. ಏಕೆಂದರೆ ಈ ಕಾರ್ಯದಲ್ಲಿ ನಮ್ಮ ಅಪರಾಧವು ದೊಡ್ಡದು.


ಆದರೆ ಅಸಾಯೇಲನ ಮಗ ಯೋನಾತಾನ್ ಹಾಗು, ತಿಕ್ವನ ಮಗ ಯಹ್ಜೆಯ ಇದನ್ನು ವಿರೋಧಿಸಿದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈನೂ ಅವರನ್ನು ಬೆಂಬಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು