Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:19 - ಕನ್ನಡ ಸಮಕಾಲಿಕ ಅನುವಾದ

19 ಇವರು ತಮ್ಮ ಹೆಂಡತಿಯರನ್ನು ಹೊರಡಿಸಿಬಿಡುವೆವೆಂದು ಪ್ರತಿಜ್ಞೆ ಮಾಡಿ, ತಾವು ಅಪರಾಧಸ್ಥರಾದ್ದರಿಂದ ಅಪರಾಧ ಕಳೆಯುವುದಕ್ಕೆ ಮಂದೆಯಿಂದ ತಂದ ಒಂದು ಟಗರನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿಕೊಂಡು ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈಮುಟ್ಟಿ ಪ್ರಮಾಣಮಾಡಿದರು; ತಾವು ಅಪರಾಧಿಗಳೆಂದು ಒಪ್ಪಿ ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿ ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇವರೆಲ್ಲಾ ತಮ್ಮ ಹೆಂಡತಿಯರನ್ನು ಬಿಟ್ಟುಬಿಡಬೇಕೆಂದು ತೀರ್ಮಾನಿಸಿದರು. ಇವರಲ್ಲಿ ಪ್ರತಿಯೊಬ್ಬರು ದೋಷಪರಿಹಾರಕ್ಕಾಗಿ ಹಿಂಡಿನ ಟಗರನ್ನು ಯಜ್ಞ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:19
9 ತಿಳಿವುಗಳ ಹೋಲಿಕೆ  

ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಕಳಂಕರಹಿತವಾದ ಒಂದು ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವ ದೇವರಿಗೆಂದು ಯಾಜಕನ ಬಳಿಗೆ ತರಬೇಕು.


ಯೇಹುವು ಅಲ್ಲಿಂದ ಹೋಗಿ, ತನ್ನನ್ನು ಎದುರುಗೊಳ್ಳಲು ಬಂದ ರೇಕಾಬನ ಮಗ ಯೆಹೋನಾದಾಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ, “ನನ್ನ ಹೃದಯವು ನಿನ್ನ ಹೃದಯದ ಸಂಗಡ ಇರುವ ಹಾಗೆ ನಿನ್ನ ಹೃದಯವು ಯಥಾರ್ಥವಾಗಿ ಇದೆಯೋ?” ಎಂದನು. ಯೆಹೋನಾದಾಬನು, “ಇದೆ,” ಎಂದನು. “ಹಾಗಾದರೆ ನಿನ್ನ ಕೈ ಕೊಡು,” ಎಂದನು. ಇವನು ತನ್ನ ಕೈ ಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಹತ್ತಿಸಿಕೊಂಡು ಅವನಿಗೆ,


ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.


ಸಾಕಷ್ಟು ರೊಟ್ಟಿಯನ್ನು ಪಡೆಯಲು ನಾವು ಈಜಿಪ್ಟ್ ಮತ್ತು ಅಸ್ಸೀರಿಯಕ್ಕೆ ಅಧೀನರಾಗಿದ್ದೇವೆ.


ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.


ಎಲ್ಲಾ ಪ್ರಧಾನರೂ, ಪರಾಕ್ರಮಶಾಲಿಗಳೂ, ಅರಸನಾದ ದಾವೀದನ ಸಮಸ್ತ ಪುತ್ರರೂ ಅರಸನಾದ ಸೊಲೊಮೋನನಿಗೆ ಅಧೀನರಾದರು.


ಅವನು ಪಾಪಮಾಡಿ, ಅಪರಾಧಿಯಾಗಿರುವುದರಿಂದ ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಇಲ್ಲವೆ ಅವನು ಮೋಸದಿಂದ ಪಡೆದ ವಸ್ತುವನ್ನೂ ಇಲ್ಲವೆ ಅವನ ವಶಕ್ಕೆ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ತಂದುಕೊಡಬೇಕು.


ಇಮ್ಮೇರನ ವಂಶಜರಲ್ಲಿ: ಹನಾನೀ, ಜೆಬದ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು