ಎಜ್ರ 10:2 - ಕನ್ನಡ ಸಮಕಾಲಿಕ ಅನುವಾದ2 ಆಗ ಏಲಾಮನ ವಂಶಜರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ನಾವು ಅನ್ಯದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡದ್ದರಿಂದ, ನಮ್ಮ ದೇವರಿಗೆ ವಿರೋಧವಾಗಿ ದ್ರೋಹಮಾಡಿದ್ದೇವೆ. ಆದರೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲರಲ್ಲಿ ನಿರೀಕ್ಷೆ ಉಂಟು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ಇಸ್ರಾಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಏಲಾಮ್ ಸಂತಾನದ ಯೆಹೀಯೇಲನ ಮಗ ಶೆಕನ್ಯನು ಎಜ್ರನಿಗೆ, “ಇಸ್ರಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧ ದ್ರೋಹಮಾಡಿದ್ದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆ ಇನ್ನೂ ಉಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ - ಇಸ್ರಾಯೇಲ್ಯರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ [ನಮ್ಮನ್ನು ನಾವು ತಿದ್ದಿಕೊಳ್ಳುವ] ನಿರೀಕ್ಷೆಯು ಇನ್ನೂ ಉಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಏಲಾಮನ ಸಂತತಿಯವನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ ಹೀಗೆಂದನು: “ನಾವು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾವು ಅನ್ಯಜನರೊಂದಿಗೆ ಮದುವೆಯಾಗಿದ್ದೇವೆ. ಹಾಗಿದ್ದರೂ ಇಸ್ರೇಲರಿಗೆ ಒಂದು ನಿರೀಕ್ಷೆ ಇದೆ. ಅಧ್ಯಾಯವನ್ನು ನೋಡಿ |