Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:3 - ಕನ್ನಡ ಸಮಕಾಲಿಕ ಅನುವಾದ

3 ಆದಕಾರಣ ನಮ್ಮ ಒಡೆಯನಾದ ನಿನ್ನ ಯೋಚನೆಯ ಪ್ರಕಾರವಾಗಿಯೂ, ನಮ್ಮ ದೇವರ ಆಜ್ಞೆಗೆ ಭಯಪಡುವವರ ಯೋಚನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ, ಅವರಿಂದ ಹುಟ್ಟಿದವರನ್ನೂ ಕಳುಹಿಸಿಬಿಡಲು, ಈಗಲೇ ನಮ್ಮ ದೇವರ ಮುಂದೆ ಒಡಂಬಡಿಕೆ ಮಾಡಿಕೊಂಡು, ದೇವರ ನಿಯಮದ ಪ್ರಕಾರ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸ್ವಾಮಿಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವನೂ. ನೀನು ಹೇಳಿಕೊಟ್ಟ ಬುದ್ಧಿವಾದಕ್ಕೆ ಅನುಸಾರವಾಗಿ ಎಲ್ಲಾ ಹೆಂಡತಿಯರನ್ನೂ, ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ ಈಗಲೇ ನಮ್ಮ ದೇವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀನು ಹಾಗು ನಮ್ಮ ದೇವರ ಆಜ್ಞೆಯನ್ನು ಗೌರವಿಸುವವರು ಹೇಳಿಕೊಟ್ಟ ಬುದ್ಧಿವಾದಾನುಸಾರ ಅಂಥ ಎಲ್ಲ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ, ಈಗಲೇ ನಮ್ಮ ದೇವರಿಗೆ ಪ್ರತಿಜ್ಞೆಮಾಡಿ, ಧರ್ಮಶಾಸ್ತ್ರಕ್ಕನುಸಾರ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸ್ವಾವಿುಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವರೂ ಹೇಳಿಕೊಟ್ಟ ಬುದ್ಧಿವಾದಾನುಸಾರ ಇಂಥ ಎಲ್ಲಾ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವದಾಗಿ ಈಗಲೇ ನಮ್ಮ ದೇವರಿಗೆ ಪ್ರತಿಜ್ಞೆಮಾಡಿ ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:3
25 ತಿಳಿವುಗಳ ಹೋಲಿಕೆ  

ಆಗ ಸೆರೆಯಿಂದ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ, ನನ್ನ ಬಳಿಗೆ ಕೂಡಿಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವವರೆಗೆ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು.


ನಿಮ್ಮ ಭಯದಿಂದ ನನ್ನ ಶರೀರವು ನಡುಗುತ್ತದೆ; ನಿಮ್ಮ ನಿಯಮಗಳಿಗೆ ನಾನು ಭಯಭಕ್ತಿಯುಳ್ಳವನಾಗಿದ್ದೇನೆ.


ನಾನು ನನ್ನ ನಡತೆಯನ್ನು ಪರಿಶೋಧಿಸುತ್ತಾ ನನ್ನ ಹೆಜ್ಜೆಗಳನ್ನು ನಿಮ್ಮ ಶಾಸನಗಳ ಕಡೆಗೆ ತಿರುಗಿಸಿದ್ದೇನೆ.


“ಇದೆಲ್ಲದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ. ನಮ್ಮ ಪ್ರಧಾನರೂ, ಲೇವಿಯರೂ, ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ,” ಎಂದು ಪ್ರಾರ್ಥಿಸಿದರು.


“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವ ದೇವರು ಈ ಹೊತ್ತು ನಿಮ್ಮ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯನ್ನು ಸೇರುವುದಕ್ಕೆ ಅವರು ಆಣೆಯಿಟ್ಟು ಮುದ್ರಿಸಿದ್ದಾರೆ.


“ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.


ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ಆಗ ಅವರು ಏಳನೆಯ ತಿಂಗಳ ಹಬ್ಬದಲ್ಲಿ, ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರ ಆಜ್ಞಾಪಿಸಿದ ವಿಷಯ ನಿಯಮದಲ್ಲಿ ಬರೆದದ್ದನ್ನು ಕಂಡರು.


ಇವರೆಲ್ಲರು ಅನ್ಯ ಸ್ತ್ರೀಯರನ್ನು ಮದುವೆಯಾಗಿದ್ದರು. ಇವರಲ್ಲಿ ಕೆಲವರಿಗೆ ಈ ಹೆಂಡತಿಯರಿಂದ ಮಕ್ಕಳಾಗಿದ್ದರು.


ಈ ಸ್ಥಳಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ, ನಿನ್ನನ್ನು ನನ್ನ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ, ನಾನು ನಿನ್ನ ಮೊರೆಯನ್ನು ಕೇಳಿದೆನು,


ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.


ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಉಗ್ರಕೋಪವು ನಮ್ಮನ್ನು ಬಿಟ್ಟುಹೋಗುವ ಹಾಗೆ, ನಾನು ಅವರ ಸಂಗಡ ಒಡಂಬಡಿಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.


ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ಯೆಹೋವ ದೇವರಿಗೂ, ಅರಸನಿಗೂ, ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಹಾಗೆಯೇ ಅರಸನಿಗೂ, ಜನರಿಗೂ ಮಧ್ಯದಲ್ಲಿ ಒಡಂಬಡಿಕೆ ಮಾಡಿಸಿದನು.


ಅನಂತರ ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಸೇರಿ ಯೆಹೋಶುವನ ಬಳಿಗೆ ಬಂದರು. ಅವರು ಅವನಿಗೂ ಇಸ್ರಾಯೇಲರಿಗೂ, “ನಾವು ದೂರದೇಶದಿಂದ ಬಂದೆವು. ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ,” ಎಂದರು.


ಆಗ ಯೆಹೂದ ಮತ್ತು ಬೆನ್ಯಾಮೀನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿದರು. ಅದು ಒಂಬತ್ತನೆಯ ತಿಂಗಳ, ಇಪ್ಪತ್ತನೆಯ ದಿವಸವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೋಸ್ಕರವೂ, ಮಳೆಗೋಸ್ಕರವೂ ನಡುಗಿ ಕುಳಿತುಕೊಂಡಿದ್ದರು.


ಆದ್ದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರ ಮುಂದೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತದ ಪ್ರಕಾರಮಾಡಿ, ಈ ದೇಶದ ಜನರಿಂದಲೂ, ಅನ್ಯ ಸ್ತ್ರೀಯರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ,” ಎಂದನು.


ಮುದ್ರೆ ಹಾಕಿದವರು ಯಾರೆಂದರೆ: ಅಧಿಪತಿಯಾದ ಹಕಲ್ಯನ ಮಗ ನೆಹೆಮೀಯನು. ಚಿದ್ಕೀಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು