Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:4 - ಕನ್ನಡ ಸಮಕಾಲಿಕ ಅನುವಾದ

4 ನೀನು ಏಳು, ಏಕೆಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ನಿಲ್ಲುತ್ತೇವೆ. ಧೈರ್ಯದಿಂದ ಅದನ್ನು ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎದ್ದೇಳು, ಈ ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು. ಧೈರ್ಯದಿಂದ ಕೈಹಾಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಎದ್ದೇಳು, ಈ ಕಾರ್ಯ ನಿನ್ನಿಂದಾಗಬೇಕು. ನಾವು ನಿನಗೆ ಸಹಾಯಕರಾಗಿ ನಿಲ್ಲುತ್ತೇವೆ. ಧೈರ್ಯದಿಂದ ಮುನ್ನುಗ್ಗು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಏಳು ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು, ಧೈರ್ಯದಿಂದ ಕೈಹಾಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಜ್ರನೇ, ಎದ್ದೇಳು, ಇದು ನಿನ್ನ ಜವಾಬ್ದಾರಿಕೆ. ನಾವು ನಿನ್ನನ್ನು ಬೆಂಬಲಿಸುತ್ತೇವೆ; ಧೈರ್ಯದಿಂದ ಈ ಕೆಲಸವನ್ನು ಪ್ರಾರಂಭಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:4
14 ತಿಳಿವುಗಳ ಹೋಲಿಕೆ  

ಆದ್ದರಿಂದ ಜಾಗ್ರತೆಯಾಗಿರು. ಏಕೆಂದರೆ, ಯೆಹೋವ ದೇವರು ಪರಿಶುದ್ಧ ಆಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ. ನೀನು ಧೈರ್ಯದಿಂದ ಕೆಲಸಕ್ಕೆ ಕೈ ಹಚ್ಚು,” ಎಂದನು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ನಾವು ಒಬ್ಬರನ್ನೊಬ್ಬರು ಪ್ರೀತಿಸುವುದಕ್ಕಾಗಿಯೂ ಸತ್ಕಾರ್ಯ ಮಾಡುವುದಕ್ಕಾಗಿಯೂ ಹೇಗೆ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಬೇಕೆಂದು ಯೋಚಿಸೋಣ.


ನಿಮ್ಮ ದೇವರಾದ ಯೆಹೋವ ದೇವರನ್ನು ಹುಡುಕಲು ನಿಮ್ಮ ಹೃದಯವನ್ನೂ, ನಿಮ್ಮ ಪ್ರಾಣವನ್ನೂ ಒಪ್ಪಿಸಿ, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ದೇವರ ಪರಿಶುದ್ಧ ಪಾತ್ರೆಗಳನ್ನು ಯೆಹೋವ ದೇವರ ನಾಮಕ್ಕಾಗಿ ಕಟ್ಟಲಾಗುವ ಆಲಯದೊಳಗೆ ತರುವ ಹಾಗೆ, ಎದ್ದು ಯೆಹೋವ ದೇವರಾದ ದೇವರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ,” ಎಂದನು.


ಚಿನ್ನ, ಬೆಳ್ಳಿ, ಕಂಚು, ಕಬ್ಬಿಣ, ಮುಂತಾದವುಗಳಲ್ಲಿ ನಿಪುಣರು ಲೆಕ್ಕವಿಲ್ಲದಷ್ಟು ಇದ್ದಾರೆ. ಎದ್ದು ಕೆಲಸ ಮಾಡು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.


ಅದು ಒಬ್ಬ ಮನುಷ್ಯನು ದೂರ ಪ್ರಯಾಣಕ್ಕಾಗಿ ತನ್ನ ಮನೆಯನ್ನು ಬಿಟ್ಟು, ತನ್ನ ಸೇವಕರಿಗೆ ಅಧಿಕಾರವನ್ನೂ ಪ್ರತಿಯೊಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಿಲು ಕಾಯುವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ.


ಇಗೋ, ಯೆಹೋವ ದೇವರ ಆಲಯದ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲಸಕ್ಕೂ, ಎಲ್ಲಾ ವಿಧವಾದ ಸೇವೆಗೂ, ಸಿದ್ಧ ಮನಸ್ಸುಳ್ಳಂಥ ಜಾಣತನದಿಂದ ಕೆಲಸ ಮಾಡುವವರು ನಿನ್ನ ಸಂಗಡ ಇದ್ದಾರೆ. ಇದಲ್ಲದೆ ಪ್ರಧಾನರೂ, ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ವಿಧೇಯರಾಗಿರುವರು.”


ಆಗ ಎಜ್ರನು ಎದ್ದು, ಮಹಾಯಾಜಕರೂ ಲೇವಿಯರೂ ಸಮಸ್ತ ಇಸ್ರಾಯೇಲರೂ ಈ ಮಾತಿನ ಪ್ರಕಾರವಾಗಿ ಮಾಡಲು, ಅವರು ಆಣೆಯಿಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.


ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು