ಎಜ್ರ 10:6 - ಕನ್ನಡ ಸಮಕಾಲಿಕ ಅನುವಾದ6 ಆಮೇಲೆ ಎಜ್ರನು ಎದ್ದು ದೇವರ ಆಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು. ಏಕೆಂದರೆ ಸೆರೆಯಿಂದ ಯೆರೂಸಲೇಮಿಗೆ ಬಂದಿದ್ದ ಯೆಹೂದ್ಯರ ಅಪನಂಬಿಗಸ್ತಿಕೆಯ ಬಗ್ಗೆ ತುಂಬಾ ದುಃಖಿತನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಮೇಲೆ ಎಜ್ರನು ಎದ್ದು, ದೇವಾಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ಅಲ್ಲಿ ಸೆರೆ ಇಂದ ಬಂದವರಿಗಾಗಿ ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿವಿುತ್ತ ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಎಜ್ರನು ಅಲ್ಲಿಂದೆದ್ದು ಎಲ್ಯಾಷೀಬನ ಮಗನಾದ ಯೆಹೋಹಾನನ ಕೋಣೆಗೆ ಹೋಗಿ ಅಲ್ಲಿ ಅನ್ನನೀರಿಲ್ಲದೆ ದುಃಖತಪ್ತನಾಗಿದ್ದನು. ಯಾಕೆಂದರೆ ಸೆರೆಯಿಂದ ಜೆರುಸಲೇಮಿಗೆ ಬಂದಿದ್ದ ಯೆಹೂದ್ಯರ ದ್ರೋಹದ ಬಗ್ಗೆ ಅವನು ತುಂಬಾ ದುಃಖಿತನಾಗಿದ್ದನು. ಅಧ್ಯಾಯವನ್ನು ನೋಡಿ |