ಎಜ್ರ 10:8 - ಕನ್ನಡ ಸಮಕಾಲಿಕ ಅನುವಾದ8 ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ, ಅವನ ಆಸ್ತಿಯೆಲ್ಲಾ ದಂಡವಾಗಿ ತೆಗೆದುಕೊಳ್ಳಲಾಗುವುದೆಂದೂ, ಅವನು ಸೆರೆಯಿಂದ ಬಂದವರ ಕೂಟದಿಂದ ಬಹಿಷ್ಕೃತನಾಗುವನು ಎಂದೂ ಪ್ರಕಟಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಎಲ್ಲಾ ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿನಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು” ಎಂದು ಪ್ರಕಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸಗಳೊಳಗೆ ಬರಬೇಕು; ಬಾರದವನು ತನ್ನ ಎಲ್ಲ ಆಸ್ತಿಪಾಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು,” ಎಂದು ತಿಳಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪ್ರಭುಗಳ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು ಎಂದು ಪ್ರಕಟಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಮೂರು ದಿನಗಳೊಳಗೆ ಯಾರಾದರೂ ಬಾರದೆ ಹೋದಲ್ಲಿ ಅವರು ತಮ್ಮ ಆಸ್ತಿಯನ್ನು ಕಳೆದುಕೊಳ್ಳುವರು. ಈ ತೀರ್ಮಾನವನ್ನು ಪ್ರಮುಖರೂ ಅಧಿಕಾರಿಗಳೂ ಮಾಡಿದ್ದಾರೆ; ಆ ಮನುಷ್ಯನು ತಾನು ವಾಸಮಾಡುವ ಜನರ ಅನ್ಯೋನ್ಯತೆಯಿಂದ ತೆಗೆಯಲ್ಪಡುವನು. ಅಧ್ಯಾಯವನ್ನು ನೋಡಿ |