ಎಜ್ರ 10:9 - ಕನ್ನಡ ಸಮಕಾಲಿಕ ಅನುವಾದ9 ಆಗ ಯೆಹೂದ ಮತ್ತು ಬೆನ್ಯಾಮೀನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿದರು. ಅದು ಒಂಬತ್ತನೆಯ ತಿಂಗಳ, ಇಪ್ಪತ್ತನೆಯ ದಿವಸವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೋಸ್ಕರವೂ, ಮಳೆಗೋಸ್ಕರವೂ ನಡುಗಿ ಕುಳಿತುಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತವಾಗಿಯೂ, ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಅಂಗಳದಲ್ಲಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ಮೂರನೆಯ ದಿನದಲ್ಲಿ ಅಂದರೆ, ಒಂಬತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ, ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲ ಪುರುಷರೂ ಜೆರುಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತ ಹಾಗು ದೊಡ್ಡ ಮಳೆಯ ದೆಸೆಯಿಂದ ನಡುಗುತ್ತಾ ಬಂದು ದೇವಾಲಯದ ಬಯಲಿನಲ್ಲಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇವಿುನಲ್ಲಿ ಬಂದು ಕೂಡಿ ಆ ಸಂಗತಿಯ ನಿವಿುತ್ತವಾಗಿಯೂ ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಬೈಲಿನಲ್ಲಿ ಕೂತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮೂರು ದಿನಗಳೊಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಿಂದ ಎಲ್ಲಾ ಗಂಡಸರು ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಜೆರುಸಲೇಮಿನ ದೇವಾಲಯದ ಅಂಗಳಕ್ಕೆ ಬಂದು ಸೇರಿದರು. ನಡೆಯಲಿಕ್ಕಿರುವ ಕೂಟದ ಉದ್ದೇಶದಿಂದಲೂ ಆ ದಿವಸ ಬಂದಿದ್ದ ಮಳೆಯ ದೆಸೆಯಿಂದಲೂ ನೆರೆದಿದ್ದ ಜನರು ನಡುಗುತ್ತಿದ್ದರು. ಅಧ್ಯಾಯವನ್ನು ನೋಡಿ |