Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:63 - ಕನ್ನಡ ಸಮಕಾಲಿಕ ಅನುವಾದ

63 ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ತೀರ್ಪುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

63 ಊರಿಮ್ ತುಮ್ಮಿಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ, ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲನು ತೀರ್ಪುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು. ಊರೀಮ್ ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬದಾಗಿ ದೇಶಾಧಿಪತಿಯು ತೀರ್ಪುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63 ಊರೀಮ್ ತುಮ್ಮೀಮ್‌ಗಳ ಮೂಲಕ ದೇವರ ಚಿತ್ತವನ್ನು ತಿಳಿಯಲು ಶಕ್ತನಾದ ಯಾಜಕನು ದೊರಕುವ ತನಕ ಇವರು ದೇವರಿಗೆ ಅರ್ಪಿಸಿದ್ದ ಪರಿಶುದ್ಧ ಆಹಾರವನ್ನು ತಿನ್ನಬಾರದೆಂದು ದೇಶಾಧಿಪತಿಯು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:63
23 ತಿಳಿವುಗಳ ಹೋಲಿಕೆ  

ನಿರ್ಣಯವನ್ನು ತಿಳಿಸುವ ಎದೆಪದಕದಲ್ಲಿ ಊರೀಮ್ ಮತ್ತು ತುಮ್ಮೀಮ್‌ಗಳನ್ನು ಇಡಬೇಕು. ಆರೋನನು ಯೆಹೋವ ದೇವರ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಯೆಹೋವ ದೇವರ ಮುಂದೆ ಯಾವಾಗಲೂ ಇಸ್ರಾಯೇಲರ ನಿರ್ಣಯಗಳನ್ನು ತನ್ನ ಹೃದಯದ ಮೇಲೆ ಹೊರಬೇಕು.


ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ರಾಜಪಾಲನಾದ ನೆಹೆಮೀಯನೂ, ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನೂ, ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಜನರೆಲ್ಲರಿಗೆ: “ಈ ದಿನವು ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಪರಿಶುದ್ಧವಾದುದರಿಂದ ದುಃಖಿಸದೆ, ಅಳದೆ ಇರಿ,” ಎಂದರು. ಏಕೆಂದರೆ ಜನರೆಲ್ಲರು ದೇವರ ನಿಯಮದ ಮಾತುಗಳನ್ನು ಕೇಳಿದಾಗ ಅತ್ತರು.


“ ‘ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಅತಿಥಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.


ಮುದ್ರೆ ಹಾಕಿದವರು ಯಾರೆಂದರೆ: ಅಧಿಪತಿಯಾದ ಹಕಲ್ಯನ ಮಗ ನೆಹೆಮೀಯನು. ಚಿದ್ಕೀಯ,


ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.


ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ.


ಲೇವಿ ಕುಲದ ವಿಷಯದಲ್ಲಿ ಹೇಳಿದ್ದೇನೆಂದರೆ: “ನಿಮ್ಮ ನಿರ್ಣಯವನ್ನು ತಿಳಿಸುವ ಊರೀಮ್, ತುಮ್ಮೀಮ್ ಎಂಬ ವಸ್ತುಗಳು ನಿಮ್ಮ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀವು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿರಿ. ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿರಿ.


ಆದಕಾರಣ ನೀವು ಅದರಲ್ಲಿ ಉತ್ತಮವಾದದ್ದನ್ನು ಅರ್ಪಿಸಿದಾಗ, ಅದರ ದೆಸೆಯಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ನೀವು ಸಾಯುವುದಿಲ್ಲ,’ ” ಎಂದರು.


ಇಸ್ರಾಯೇಲರು ಯೆಹೋವ ದೇವರಿಗೆ ನೈವೇದ್ಯ ಮಾಡುವ ಪರಿಶುದ್ಧವಾದ ಬಲಿಗಳನ್ನೆಲ್ಲಾ ನಿನಗೂ ನಿನ್ನ ಪುತ್ರಪುತ್ರಿಯರಿಗೂ ಕ್ರಮ ಪ್ರಕಾರವಾದ ಭಾಗವಾಗಿ ಕೊಟ್ಟಿದ್ದೇನೆ. ಇದು ಯೆಹೋವ ದೇವರ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು,” ಎಂದರು.


ಅವನ ಮೇಲೆ ಎದೆಪದಕವನ್ನು ಹಾಕಿ, ಆ ಎದೆಪದಕದಲ್ಲಿ ಊರೀಮ್ ಮತ್ತು ತುಮ್ಮೀಮ್ ಇವುಗಳನ್ನೂ ಸಹ ಹಾಕಿದನು.


“ ‘ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಯಿಚ್ಛೆಯಾದ ಸಮರ್ಪಣೆಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ಅದನ್ನು ತಿನ್ನಬೇಕು. ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬಹುದು.


ಯಾಜಕರ ಕುಟುಂಬದಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.


ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ಅವರು ನನಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆಗಳಲ್ಲಿ ಅವರ ಪಾಲನ್ನು ಅವರಿಗೆ ನಾನು ಕೊಟ್ಟಿದ್ದೇನೆ. ಅದು ದೋಷಪರಿಹಾರದ ಬಲಿಯ ಹಾಗೆಯೂ ಮಹಾಪರಿಶುದ್ಧವಾದದ್ದು.


ಹೀಗೆ ಹಿಂದಿರುಗಿ ಬಂದು, ಸಭೆ ಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360.


ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಗಂಡಬಿಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ, ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ. ಆದರೆ ಯಾಜಕರಲ್ಲದ ಕುಟುಂಬದವರು ಅದರಲ್ಲಿ ತಿನ್ನಬಾರದು.


ಸೆರಾಯ, ಅಜರ್ಯ, ಯೆರೆಮೀಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು