Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:10 - ಕನ್ನಡ ಸಮಕಾಲಿಕ ಅನುವಾದ

10 ಕಟ್ಟುವವರು ಯೆಹೋವ ದೇವರ ಮಂದಿರಕ್ಕೆ ಅಸ್ತಿವಾರ ಹಾಕಿದಾಗ ಇಸ್ರಾಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಯೆಹೋವ ದೇವರನ್ನು ಸ್ತುತಿಸುವುದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವರಾಗಿ ತುತೂರಿಗಳನ್ನೂದುವ ಯಾಜಕರನ್ನೂ, ತಾಳಗಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಸಿದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲರ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಸ್ತುತಿಸಿ ಕೀರ್ತಿಸುವುದಕ್ಕೋಸ್ಕರ ಯಾಜಕರು ತಮ್ಮ ದೀಕ್ಷಾವಸ್ತ್ರಗಳಿಂದ ಭೂಷಿತರಾಗಿ ತುತ್ತೂರಿಗಳೊಡನೆಯೂ, ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕಟ್ಟುವವರು ಸರ್ವೇಶ್ವರನ ಮಂದಿರದ ಅಸ್ತಿವಾರವನ್ನು ಹಾಕಿದಾಗ, ಇಸ್ರಯೇಲರ ಅರಸ ದಾವೀದನು ನೇಮಿಸಿದ ಕ್ರಮಕ್ಕನುಸಾರ, ಸರ್ವೇಶ್ವರನನ್ನು ಸಂಕೀರ್ತಿಸಿದರು. ಇದಕ್ಕಾಗಿ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆ ಹಾಗು ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆ ನಿಂತುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲ್ಯರ ಅರಸನಾದ ದಾವೀದನು ನೇವಿುಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಕೀರ್ತಿಸುವದಕ್ಕೋಸ್ಕರ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆಯೂ ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕಟ್ಟುವವರು ದೇವಾಲಯದ ಅಸ್ತಿವಾರವನ್ನು ಕಟ್ಟಿ ಮುಗಿಸಿದಾಗ ಯಾಜಕರು ತಮ್ಮ ಯಾಜಕ ಬಟ್ಟೆಗಳನ್ನು ಧರಿಸಿ ತುತ್ತೂರಿಗಳನ್ನು ತೆಗೆದುಕೊಂಡರು; ಆಸಾಫನ ಮಕ್ಕಳು ತಾಳಗಳನ್ನು ತೆಗೆದುಕೊಂಡರು; ಅಲ್ಲದೆ ಇಸ್ರೇಲಿನ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡು ಯೆಹೋವನನ್ನು ಸ್ತುತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:10
26 ತಿಳಿವುಗಳ ಹೋಲಿಕೆ  

“ಆ ಏಳು ದೀಪಗಳು ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಯೆಹೋವ ದೇವರ ಕಣ್ಣುಗಳು. ಜನರು ನೂಲುಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುವರು. ಹೀಗಿರುವುದರಿಂದ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?”


ದಾವೀದನೂ, ಆಸಾಫನೂ, ಹೇಮಾನನೂ, ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು. ದ್ವಾರಪಾಲಕರು ಬಾಗಿಲಲ್ಲಿ ಇದ್ದರು. ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು. ಏಕೆಂದರೆ ಅವರ ಸಹೋದರರಾದ ಲೇವಿಯರಿಗೋಸ್ಕರ ಭೋಜನವನ್ನು ಸಿದ್ಧಮಾಡುತ್ತಿದ್ದರು.


ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು. ನಾಲ್ಕು ಸಾವಿರ ಮಂದಿ ಸ್ತುತಿಸುವುದಕ್ಕೆ ತಾನು ಸಿದ್ಧಮಾಡಿದ ವಾದ್ಯಗಳಿಂದ ಯೆಹೋವ ದೇವರನ್ನು ಸ್ತುತಿಸಿದರು.”


ಅದರ ಸಂಗಡ ತುತೂರಿ ಊದಲು, ತಾಳ ಬಾರಿಸಲು, ದೇವರ ಗೀತವಾದ್ಯಗಳೂ ಸಹಿತವಾಗಿ ಹೇಮಾನನೂ, ಯೆದುತೂನನೂ ಮೇಲ್ವಿಚಾರಕರಾಗಿದ್ದರು. ಯೆದುತೂನನ ಪುತ್ರರು ದ್ವಾರಪಾಲಕರಾಗಿದ್ದರು.


ಪ್ರತಿದಿನದ ಅವಶ್ಯಕತೆಗಳಿಗೆ ಅನುಗುಣವಾಗಿ ನಿಯಮಿತವಾಗಿ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಸೇವೆ ಸಲ್ಲಿಸಲು ದಾವೀದನು ಆಸಾಫ್ ಮತ್ತು ಅವನ ಸಹಚರರನ್ನು ನೇಮಿಸಿದನು.


ದಾವೀದನೂ, ಮಂಜೂಷವನ್ನು ಹೊರುವ ಲೇವಿಯರೂ, ಹಾಡುಗಾರರೂ, ಸಂಗೀತಗಾರರ ನಾಯಕನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದಲ್ಲದೆ ದಾವೀದನು ನಾರಿನ ಏಫೋದನ್ನು ಧರಿಸಿಕೊಂಡಿದ್ದನು.


ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೆಯೇಲ್, ಅಮಾಸೈಯೂ, ಜೆಕರ್ಯನೂ, ಬೆನಾಯನೂ, ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು. ಓಬೇದ್ ಏದೋಮನೂ, ಯೆಹೀಯನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.


ಆಗ ಅರಸನು ದೋಯೇಗನಿಗೆ, “ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು,” ಎಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು, ನಾರುಬಟ್ಟೆಯ ಏಫೋದನ್ನು ಧರಿಸಿಕೊಳ್ಳುವವರಾದ ಎಂಬತ್ತೈದು ಯಾಜಕರನ್ನು ಆ ದಿನದಲ್ಲಿ ಕೊಂದನು.


“ಆಗ ಶೆಷ್ಬಚ್ಚರನು ಬಂದು, ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ, ಇನ್ನೂ ಮುಗಿಯಲಿಲ್ಲ,” ಎಂದರು.


ತಾಳಗಳಿಂದ ದೇವರನ್ನು ಸ್ತುತಿಸಿರಿ; ಪ್ರತಿಧ್ವನಿಸುವ ಝಲ್ಲರಿಗಳಿಂದಲೂ ಅವರನ್ನು ಸ್ತುತಿಸಿರಿ.


“ಈಗ ಚೆನ್ನಾಗಿ ಯೋಚಿಸಿಕೊಳ್ಳಿರಿ. ಯೆಹೋವ ದೇವರ ಆಲಯ ನಿವೇಶನದಲ್ಲಿ, ಕಲ್ಲಿನ ಮೇಲೆ ಕಲ್ಲು ಇಡುವ, ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.


ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


“ಪರಾಕ್ರಮದ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬಯಲಾಗುವೆ. ಅವನು ಕಲಶದ ಕಲ್ಲನ್ನು ಸ್ಥಾಪಿಸಿ, ‘ದೇವರು ಇದನ್ನು ಆಶೀರ್ವದಿಸಲಿ! ದೇವರು ಇದನ್ನು ಆಶೀರ್ವದಿಸಲಿ!’ ಎಂದು ಘೋಷಿಸುವನು.”


ಅವನಿಗೆ ಹೇಳತಕ್ಕದ್ದೇನೆಂದರೆ: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ರೆಂಬೆ,’ ಎಂದು ಹೆಸರುಳ್ಳ ಮನುಷ್ಯನು, ತನ್ನ ಸ್ಥಳದೊಳಗಿಂದ ರೆಂಬೆಯನ್ನು ತೆಗೆದುಹಾಕಿ, ಯೆಹೋವ ದೇವರ ಆಲಯವನ್ನು ಕಟ್ಟುವನು.


ಆಗ ಸರ್ವಶಕ್ತರಾದ ಯೆಹೋವ ದೇವರ ಆಲಯದಲ್ಲಿದ್ದ ಯಾಜಕರ ಸಂಗಡ ಮತ್ತು ಪ್ರವಾದಿಗಳ ಸಂಗಡ ನಾನು ಮಾತನಾಡಿ, “ಇಷ್ಟು ವರ್ಷ ಮಾಡಿದ ಪ್ರಕಾರ, ಐದನೆಯ ತಿಂಗಳಿನಲ್ಲಿ ಉಪವಾಸವಿದ್ದು, ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.


ಹದಿನೆಂಟನೆಯದು ಹನಾನೀಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.


ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದ ಯಾಜಕರು ಪರಿಶುದ್ಧ ಸ್ಥಳದಿಂದ ಹೊರಟಾಗ, ನಯವಾದ ನಾರು ಬಟ್ಟೆಗಳನ್ನು ಧರಿಸಿಕೊಂಡಿದ್ದ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನ್ ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.


ತರುವಾಯ ತಮಗೋಸ್ಕರ, ಯಾಜಕರಿಗೋಸ್ಕರ ಭೋಜನವನ್ನು ಸಿದ್ಧಮಾಡಿದರು. ಏಕೆಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನಬಲಿಗಳನ್ನೂ, ಕೊಬ್ಬನ್ನೂ ಅರ್ಪಿಸುವುದರಲ್ಲಿದ್ದರು. ಆದ್ದರಿಂದ ಲೇವಿಯರು ತಮಗೋಸ್ಕರವೂ, ಆರೋನನ ಮಕ್ಕಳಾದ ಯಾಜಕರಿಗೋಸ್ಕರವೂ ಭೋಜನವನ್ನು ಸಿದ್ಧಮಾಡಿದರು.


ಹಾಡುಗಾರರು: ಆಸಾಫನ ವಂಶಜರು 128.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು