ಎಜ್ರ 3:12 - ಕನ್ನಡ ಸಮಕಾಲಿಕ ಅನುವಾದ12 ಮೊದಲಿನ ಮಂದಿರವನ್ನು ಕಂಡಿದ್ದ ವೃದ್ಧರಾದ ಯಾಜಕರೂ ಲೇವಿಯ ಅನೇಕ ಕುಟುಂಬಗಳ ಪ್ರಮುಖರೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ಮುಂದೆ ಹಾಕುತ್ತಿರುವಾಗ ದೊಡ್ಡ ಶಬ್ದದಿಂದ ಅತ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೆ ಯಾಜಕರಲ್ಲಿಯೂ, ಲೇವಿಯರಲ್ಲಿಯೂ, ಗೋತ್ರಪ್ರಧಾನರಲ್ಲಿಯೂ ಅನೇಕರು ಅಂದರೆ ಮೊದಲಿನ ದೇವಾಲಯವನ್ನು ನೋಡಿದ್ದ ಹಿರಿಯರು ತಮ್ಮ ಕಣ್ಣ ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಟ್ಟಿದ್ದನ್ನು ನೋಡಿದಾಗ ಬಹಳವಾಗಿ ಅತ್ತರು. ಬೇರೆ ಹಲವರು ಹರ್ಷಧ್ವನಿಯಿಂದ ಜಯಘೋಷ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯಾಜಕರಲ್ಲೂ ಲೇವಿಯರಲ್ಲೂ ಗೋತ್ರಪ್ರಧಾನರಲ್ಲೂ ಅನೇಕರು ಅಂದರೆ, ಹಿಂದಿನ ದೇವಾಲಯವನ್ನು ನೋಡಿದ್ದ ಮುದುಕರು, ತಮ್ಮ ಕಣ್ಣು ಮುಂದೆ ದೇವಾಲಯದ ಅಸ್ತಿವಾರ ಹಾಕಲಾದುದನ್ನು ನೋಡಿದಾಗ, ಬಹಳವಾಗಿ ಅತ್ತರು; ಬೇರೆ ಹಲವರು ಹರ್ಷಧ್ವನಿಯಿಂದ ಆರ್ಭಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದರೆ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಗೋತ್ರ ಪ್ರಧಾನರಲ್ಲಿಯೂ ಅನೇಕರು ಅಂದರೆ ಮುಂಚಿನ ದೇವಾಲಯವನ್ನು ನೋಡಿದ್ದ ಮುದುಕರು ತಮ್ಮ ಕಣ್ಣು ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಡುವದನ್ನು ನೋಡುವಾಗ ಬಹಳವಾಗಿ ಅತ್ತರು; ಬೇರೆ ಹಲವರು ಹರ್ಷಧ್ವನಿಯಿಂದ ಆರ್ಭಟಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ಮೊದಲಿನ ದೇವಾಲಯವನ್ನೂ ಅದರ ವೈಭವವನ್ನೂ ನೋಡಿದ್ದ ಕುಲಪ್ರಧಾನರು, ಯಾಜಕರು ಮತ್ತು ಲೇವಿಯರು ಗಟ್ಟಿಯಾಗಿ ಅತ್ತರು. ಇತರರು ಗಟ್ಟಿಯಾಗಿ ಹರ್ಷಧ್ವನಿ ಮಾಡಿದರು. ಅಧ್ಯಾಯವನ್ನು ನೋಡಿ |