ಎಜ್ರ 3:13 - ಕನ್ನಡ ಸಮಕಾಲಿಕ ಅನುವಾದ13 ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ, ಹರ್ಷಧ್ವನಿ ಯಾವುದು, ಅಳುವವರ ಧ್ವನಿ ಯಾವುದು ಎಂದು ಗುರುತಿಸಲಾಗಲಿಲ್ಲ. ಗದ್ದಲವು ಬಹು ದೂರದವರೆಗೂ ಕೇಳಿಸುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಜನರು ಮಹಾಧ್ವನಿಯಿಂದ ಅರ್ಭಟಿಸುತ್ತಿದ್ದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಗೊತ್ತಾಗಲಿಲ್ಲ. ಗದ್ದಲವು ಬಹುದೂರದ ವರೆಗೂ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ಹೇಳಲಾಗಲಿಲ್ಲ. ಗದ್ದಲವು ಬಹುದೂರದವರೆಗೂ ಕೇಳಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಜನರು ಮಹಾಧ್ವನಿಯಿಂದ ಆರ್ಭಟಿಸುತ್ತಿದ್ದದರಿಂದ ಹರ್ಷಧ್ವನಿ ಯಾವದೋ ಅಳುವವರ ಧ್ವನಿ ಯಾವದೋ ಗೊತ್ತಾಗಲಿಲ್ಲ. ಗದ್ದಲವು ಬಹುದೂರದವರೆಗೂ ಕೇಳಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವರ ಉತ್ಸಾಹಧ್ವನಿಯಲ್ಲಿ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ತಿಳಿಯುತ್ತಿರಲಿಲ್ಲ. ಆದರೆ ಆ ಧ್ವನಿಯು ಬಹುದೂರದವರೆಗೂ ಕೇಳಿಸಿತು. ಅಧ್ಯಾಯವನ್ನು ನೋಡಿ |
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.