Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:6 - ಕನ್ನಡ ಸಮಕಾಲಿಕ ಅನುವಾದ

6 ಏಳನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಯೆಹೋವ ದೇವರ ಮಂದಿರದ ಅಸ್ತಿವಾರವನ್ನು ಇನ್ನೂ ಹಾಕಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸತೊಡಗಿದರು. ಆಗ ಯೆಹೋವನ ಆಲಯದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಹೀಗೆ ಸರ್ವೇಶ್ವರನಿಗೆ ದಹನಬಲಿಗಳನ್ನು ಅರ್ಪಿಸತೊಡಗಿದರು. ಆಗ ಸರ್ವೇಶ್ವರನ ಆಲಯದ ಅಸ್ತಿವಾರವನ್ನು ಇನ್ನೂ ಹಾಕಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಯೆಹೋವನಿಗೆ ಸರ್ವಾಂಗಹೋಮಗಳನ್ನರ್ಪಿಸತೊಡಗಿದರು. ಆಗ ಯೆಹೋವನ ಆಲಯದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವಾಲಯವು ತಿರಿಗಿ ಕಟ್ಟಲ್ಪಡದಿದ್ದರೂ ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಇಸ್ರೇಲರು ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:6
6 ತಿಳಿವುಗಳ ಹೋಲಿಕೆ  

ಅದರ ತರುವಾಯ ಅವರು ನಿತ್ಯ ದಹನಬಲಿ, ಅಮಾವಾಸ್ಯೆ ಬಲಿ, ಯೆಹೋವ ದೇವರ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಜನರು ಅರ್ಪಿಸುವ ಸ್ವಂತ ಇಚ್ಛೆಯಿಂದ ತಂದ ಬಲಿದಾನಗಳ ಬಲಿಯನ್ನೂ ಸಮರ್ಪಿಸಿದರು.


ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು.


“ಇಸ್ರಾಯೇಲರೊಂದಿಗೆ ಮಾತನಾಡಿ: ‘ಏಳನೆಯ ತಿಂಗಳಿನಲ್ಲಿ ಮೊದಲನೆಯ ದಿನದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥವಾದ ಸಬ್ಬತ್ ದಿನವಾಗಿರಬೇಕು. ಆ ದಿನ ಪರಿಶುದ್ಧ ಸಭೆಯ ಕೂಟವೂ ಇರಬೇಕು.


ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ದಹನಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು,’ ” ಎಂದು ಹೇಳಿದರು.


“ ‘ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ನೀವು ಮಾಡಬಾರದು. ಅದು ನಿಮಗೆ ತುತೂರಿಗಳನ್ನು ಊದುವ ದಿವಸವಾಗಿರುವುದು.


ನೀವು ಯೆಹೋವ ದೇವರಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೆಯ ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ ದಹನಬಲಿಯಾಗಿ ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು