Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:7 - ಕನ್ನಡ ಸಮಕಾಲಿಕ ಅನುವಾದ

7 ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಪರ್ಷಿಯ ರಾಜನಾದ ಸೈರಸನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಜನರು ಕಲ್ಲುಕುಟಿಗನಿಗೆ ಹಾಗು ಬಡಗಿಗೆ ಹಣವನ್ನು ಕೊಟ್ಟಿದ್ದರು. ಅಂತೆಯೇ ಲೆಬನೋನಿನಿಂದ ಸಮುದ್ರ ಮಾರ್ಗವಾಗಿ, ಜೊಪ್ಪಕ್ಕೆ ದೇವದಾರು ಮರಗಳನ್ನು ತರತಕ್ಕ ಸಿದೋನ್ಯರಿಗೆ ಹಾಗು ಟೈರಿನವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಪಾರಸಿಯ ರಾಜನಾದ ಕೋರೆಷನಿಂದ ಪಡಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗ ಬಡಗಿ ಇವರಿಗೆ ಹಣವನ್ನೂ ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರುಮರಗಳನ್ನು ತರತಕ್ಕ ಚೀದೋನ್ಯರು, ತೂರ್ಯರು ಇವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:7
20 ತಿಳಿವುಗಳ ಹೋಲಿಕೆ  

“ಆದ್ದರಿಂದ ನೀನು ನನಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ, ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಪ್ರಕಾರ, ನಿನ್ನ ಸೇವಕರ ಕೂಲಿಯನ್ನು ಕೊಡುತ್ತೇನೆ. ಏಕೆಂದರೆ ನಮ್ಮಲ್ಲಿ ಸೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲ ಎಂದು ನೀನು ಬಲ್ಲೆ,” ಎಂದು ಹೇಳಿದನು.


ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು.


ಯೊಪ್ಪ ಎಂಬಲ್ಲಿ ತಬಿಥಾ ಎಂಬ ಹೆಸರಿನ ದೇವಭಕ್ತೆ ಇದ್ದಳು. ಈ ಹೆಸರಿನ ಗ್ರೀಕ್ ಭಾಷಾಂತರ “ದೊರ್ಕ” ಎಂದಾಗುತ್ತದೆ. ಆಕೆ ಬಡವರಿಗೆ ಸಹಾಯ ಮಾಡುತ್ತಾ ಯಾವಾಗಲೂ ಒಳ್ಳೆಯದನ್ನೇ ಮಾಡುತ್ತಿದ್ದಳು.


ಆದರೆ ಯೋನನು ಯೆಹೋವ ದೇವರ ಸಮ್ಮುಖದಿಂದ ತಾರ್ಷೀಷಿಗೆ ಓಡಿಹೋಗುವುದಕ್ಕೆ ಎದ್ದು, ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು, ಪ್ರಯಾಣದ ದರವನ್ನು ಕೊಟ್ಟು, ಯೆಹೋವ ದೇವರ ಸಮ್ಮುಖದಿಂದ ತಪ್ಪಿಸಿಕೊಂಡು ಹೋಗಲು, ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ತಾರ್ಷೀಷಿಗೆ ಹೋಗುವುದಕ್ಕೆ ಅದನ್ನು ಹತ್ತಿದನು.


“ ‘ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಮಿಠಾಯಿ, ಜೇನು, ಎಣ್ಣೆ ಮತ್ತು ಸುಗಂಧ ತೈಲದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.


ಲುದ್ದ ಊರು ಯೊಪ್ಪ ಊರಿಗೆ ಸಮೀಪದಲ್ಲಿತ್ತು. ಪೇತ್ರನು ಲುದ್ದದಲ್ಲಿರುವುದು ದೇವ ಭಕ್ತರಿಗೆ ತಿಳಿಯಲು ಅವರು, “ಕೂಡಲೇ ಬರಬೇಕು,” ಎಂದು ಹೇಳಿ ಅವನನ್ನು ಕರೆದುಕೊಂಡು ಬರಲು ಇಬ್ಬರನ್ನು ಕಳುಹಿಸಿದರು.


ಪೇತ್ರನು ಯೊಪ್ಪದಲ್ಲಿ ಸೀಮೋನ ಎಂಬ ಹೆಸರಿನ ಚರ್ಮಕಾರನೊಂದಿಗೆ ಕೆಲವು ದಿನ ಇದ್ದನು.


ಆಗ ಟೈರಿನ ಅರಸನಾದ ಹೀರಾಮನು ದಾವೀದನ ಬಳಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು, ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.


ಏಳನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಯೆಹೋವ ದೇವರ ಮಂದಿರದ ಅಸ್ತಿವಾರವನ್ನು ಇನ್ನೂ ಹಾಕಿರಲಿಲ್ಲ.


ಪೆಟ್ಟಿಗೆಯಲ್ಲಿ ಬಹಳ ಹಣ ಉಂಟೆಂದು ಅವರು ಕಂಡಾಗಲೆಲ್ಲಾ ಅರಸನ ಲೇಖಕನೂ, ಮಹಾಯಾಜಕನೂ ಬಂದು, ಯೆಹೋವ ದೇವರ ಆಲಯದಲ್ಲಿ ತಂದಿದ್ದ ಹಣವನ್ನು ಎಣಿಸಿ, ಚೀಲಗಳಲ್ಲಿ ಹಾಕಿದರು.


ಯೆಹೋವ ದೇವರ ಆಲಯದೊಳಗೆ ತಂದ ಹಣದಿಂದ ಬೆಳ್ಳಿ ಬಟ್ಟಲು, ಕತ್ತರಿ, ಪಾತ್ರೆ, ತುತೂರಿ, ಬೆಳ್ಳಿಬಂಗಾರದ ಸಾಮಾನುಗಳು, ಇವೆಲ್ಲವುಗಳನ್ನು ಮಾಡಿಸದೆ,


ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಯೆಹೋವ ದೇವರ ಆಲಯವನ್ನು ಭದ್ರಮಾಡಿ, ದುರಸ್ತಿ ಮಾಡುವವರಿಗೆ ಅದನ್ನು ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು