Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:1 - ಕನ್ನಡ ಸಮಕಾಲಿಕ ಅನುವಾದ

1 ಸೆರೆಯಿಂದ ಬಂದವರು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗಾಗಿ ಆಲಯವನ್ನು ಕಟ್ಟುತ್ತಾರೆಂಬುದಾಗಿ ಯೆಹೂದದ ಮತ್ತು ಬೆನ್ಯಾಮೀನನ ಶತ್ರುಗಳು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೆರೆಯಿಂದ ಮರಳಿ ಬಂದವರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಮಂದಿರವನ್ನು ಕಟ್ಟುತ್ತಿದ್ದಾರೆಂಬ ಸಮಾಚಾರ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೆರೆಯಿಂದ ತಿರಿಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿರುತ್ತಾರೆಂಬದನ್ನು ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1-2 ಆ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದ ಬೇರೆ ಜನರು ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರಿಗೆ ವಿರುದ್ಧವಾಗಿದ್ದರು. ಸೆರೆಯಿಂದ ಬಂದ ಜನರು ಇಸ್ರೇಲರ ದೇವರಾದ ಯೆಹೋವನ ದೇವಾಲಯವನ್ನು ಕಟ್ಟುತ್ತಿದ್ದಾರೆಂಬ ವರ್ತಮಾನವನ್ನು ವೈರಿಗಳು ಕೇಳಿ ಜೆರುಬ್ಬಾಬೆಲನ ಬಳಿಗೂ ಮತ್ತು ಕುಲಪ್ರಧಾನರ ಬಳಿಗೂ ಬಂದು, “ಕಟ್ಟುವ ಕಾರ್ಯದಲ್ಲಿ ನಿಮಗೆ ಸಹಾಯ ಮಾಡಲು ಬಂದಿದ್ದೇವೆ. ನಾವು ಸಹ ನಿಮ್ಮಂತೆಯೇ ದೇವರನ್ನು ಪ್ರಾರ್ಥಿಸುತ್ತೇವೆ. ಅಶ್ಶೂರದ ರಾಜನಾದ ಏಸರ್ಹದ್ದೋನನು ನಮ್ಮನ್ನು ಇಲ್ಲಿಗೆ ತಂದು ಬಿಟ್ಟಂದಿನಿಂದ ನಾವು ನಿಮ್ಮ ದೇವರನ್ನೇ ಆರಾಧಿಸುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:1
14 ತಿಳಿವುಗಳ ಹೋಲಿಕೆ  

ಒಟ್ಟು 5,400 ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳು. ಇವುಗಳನ್ನೆಲ್ಲಾ ಬಾಬಿಲೋನಿನಿಂದ ಯೆರೂಸಲೇಮಿಗೆ ಪ್ರಯಾಣಮಾಡಿದವರ ಸಂಗಡ ಶೆಷ್ಬಚ್ಚರನು ತೆಗೆದುಕೊಂಡು ಹೋದನು.


ಏಕೆಂದರೆ, ಪರಿಣಾಮಕಾರಿಯಾದ ಸೇವೆಗೆ ದೊಡ್ಡದಾಗಿ ಬಾಗಿಲು ನನಗೆ ತೆರೆದಿದೆ, ಬಹಳ ಜನ ವಿರೋಧಿಗಳೂ ಇದ್ದಾರೆ.


“ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.


ಆಗ ದಾನಿಯೇಲನನ್ನು ಅರಸನ ಮುಂದೆ ತಂದರು. ಅರಸನು ದಾನಿಯೇಲನಿಗೆ, “ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?


ಸೆರೆಯಿಂದ ಬಂದವರು ಇದೇ ಪ್ರಕಾರ ಮಾಡಿದರು. ಆದ್ದರಿಂದ ಯಾಜಕ ಎಜ್ರನು, ಕುಟುಂಬಗಳ ಮುಖ್ಯಸ್ಥರನ್ನಾಗಿ ಕುಟುಂಬಕ್ಕೆ ಒಬ್ಬೊಬ್ಬರನ್ನು ಆಯ್ದುಕೊಂಡನು. ಅವರನ್ನು ಹೆಸರು ಹಿಡಿದು ನೇಮಿಸಿದನು. ಈ ಕಾರ್ಯವನ್ನು ಶೋಧಿಸಲು ಹತ್ತನೆಯ ತಿಂಗಳ, ಮೊದಲನೆಯ ದಿವಸದಲ್ಲಿ ಕುಳಿತುಕೊಂಡರು.


ತರುವಾಯ ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿಗೆ ಕೂಡಿಬರಬೇಕೆಂದು ಸಮಸ್ತ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಸಾರಲಾಗಿತ್ತು.


ಅವನು ಮೊದಲನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಬಾಬಿಲೋನಿನಿಂದ ಹೊರಟು, ಐದನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು. ಏಕೆಂದರೆ ಅವನ ದೇವರಾದ ಯೆಹೋವ ದೇವರ ಹಸ್ತವು ಅವನ ಮೇಲಿತ್ತು.


ಆಗ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಸೆರೆಯಿಂದ ಬಂದ ಮಿಕ್ಕಾದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠಾಪಿಸಿದರು.


ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ, ಹರ್ಷಧ್ವನಿ ಯಾವುದು, ಅಳುವವರ ಧ್ವನಿ ಯಾವುದು ಎಂದು ಗುರುತಿಸಲಾಗಲಿಲ್ಲ. ಗದ್ದಲವು ಬಹು ದೂರದವರೆಗೂ ಕೇಳಿಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು