Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:14 - ಕನ್ನಡ ಸಮಕಾಲಿಕ ಅನುವಾದ

14 ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು, ಅರಸರಿಗೆ ಅಪಮಾನವಾಗುವುದನ್ನು ಕಂಡು ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು, ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು; ಅರಸರಿಗೆ ಅಪಮಾನವಾಗುವುದನ್ನು ನೋಡಿ ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವಂತು ಅರಮನೆಯ ಉಪ್ಪನ್ನು ಉಣ್ಣುವವರಾದದರಿಂದ ಅರಸರಿಗೆ ಅಪಮಾನವುಂಟಾಗುವದನ್ನು ನೋಡಿ ಸುಮ್ಮನಿರುವದು ಉಚಿತವಲ್ಲವೆಂದು ತಿಳಿದು ಅರಸರಿಗೆ ಈ ಪತ್ರಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ರಾಜನ ಮೇಲೆ ನಮಗೆ ಜವಾಬ್ದಾರಿ ಇದೆ. ಅಂಥಾ ಸಂಗತಿಗಳು ನಡೆಯಲು ನಾವು ಇಷ್ಟಪಡುವುದಿಲ್ಲ. ಆದ್ದರಿಂದಲೇ ರಾಜರಿಗೆ ಈ ಪತ್ರವನ್ನು ಕಳುಹಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:14
5 ತಿಳಿವುಗಳ ಹೋಲಿಕೆ  

ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.


ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಕಟ್ಟುವುದು ಮುಗಿದರೆ, ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ. ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.


ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರ ಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ, ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದೇಶದ್ರೋಹ ಮಾಡುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು