ಎಜ್ರ 4:5 - ಕನ್ನಡ ಸಮಕಾಲಿಕ ಅನುವಾದ5 ಪಾರಸಿಯ ಅರಸನಾದ ಕೋರೆಷನ ದಿನಗಳಿಂದ ಹಿಡಿದು, ಪಾರಸಿಯ ಅರಸನಾದ ದಾರ್ಯಾವೆಷನ ಆಳ್ವಿಕೆಯವರೆಗೂ, ಅವರ ಯೋಚನೆಯನ್ನು ವ್ಯರ್ಥಮಾಡುವುದಕ್ಕೆ ಅವರ ವಿರೋಧವಾಗಿ ವಕೀಲರನ್ನು ಹಣಕೊಟ್ಟು ಇಟ್ಟುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರ ಉದ್ದೇಶವನ್ನು ತಡೆಗಟ್ಟಲು ಹಣಕೊಟ್ಟು ವಕೀಲರನ್ನು ಇಟ್ಟರು. ಈ ಪ್ರಕರಣ ಪರ್ಷಿಯರಾಜ ಸೈರಸನ ಕಾಲದಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯವರೆಗೂ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರ ಉದ್ದೇಶವನ್ನು ಕೆಡಿಸುವದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ಇಟ್ಟುಕೊಂಡರು. ಪಾರಸಿಯ ರಾಜನಾದ ಕೋರೆಷನ ಕಾಲ ಮೊದಲುಗೊಂಡು ಪಾರಸಿಯ ರಾಜನಾದ ದಾರ್ಯಾವೆಷನ ಆಳಿಕೆಯವರೆಗೂ ಈ ಪ್ರಕಾರ ನಡೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೂದ ಜನರ ವಿರುದ್ಧವಾಗಿರಲು ಸರಕಾರದ ಅಧಿಕಾರಿಗಳಿಗೆ ಲಂಚಕೊಟ್ಟು ಪ್ರೋತ್ಸಾಹಿಸಿದರು. ಯೆಹೂದ್ಯರು ದೇವಾಲಯ ಕಟ್ಟುವ ಕಾರ್ಯವನ್ನು ನಿಲ್ಲಿಸಲು ಈ ಅಧಿಕಾರಿಗಳು ಪದೇಪದೇ ತೊಂದರೆಪಡಿಸಿದರು. ಪರ್ಶಿಯಾದ ಅರಸನಾದ ಸೈರಸನ ರಾಜ್ಯಭಾರದ ಆಳ್ವಿಕೆಯಲ್ಲಿಯೂ ಅವನ ನಂತರ ಪಟ್ಟಕ್ಕೆ ಬಂದ ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಇದೇ ರೀತಿ ಮುಂದುವರಿಯಿತು. ಅಧ್ಯಾಯವನ್ನು ನೋಡಿ |