ಎಜ್ರ 4:6 - ಕನ್ನಡ ಸಮಕಾಲಿಕ ಅನುವಾದ6 ಆದರೆ ಅಹಷ್ವೇರೋಷನು ಆಳುವಾಗ, ಅವನ ಆಳ್ವಿಕೆಯ ಪ್ರಾರಂಭದಲ್ಲಿ, ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಸಲ್ಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ, ಅಹಷ್ಟೇರೋಷನ ಆಳ್ವಿಕೆಯ ಆರಂಭದಲ್ಲಿ ಅವರು ಜುದೇಯ ಹಾಗು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದವರಿಗೆ ವಿರುದ್ಧ ಆಪಾದನ ಪತ್ರವನ್ನು ಬರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಹಷ್ವೇರೋಷನ ಆಳಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ವಾಸಿಸುವವರಿಗೆ ವಿರೋಧವಾಗಿ ಆಪಾದನ ಪತ್ರವನ್ನು ಬರೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಶತ್ರುಗಳು ಪರ್ಶಿಯ ರಾಜನಿಗೆ ಪತ್ರವನ್ನು ಬರೆದು ದೇವಾಲಯವನ್ನು ಕಟ್ಟುವ ಕಾರ್ಯವನ್ನು ನಿಲ್ಲಿಸಬೇಕೆಂದು ಬೇಡಿಕೊಂಡರು. ಅಹಷ್ವೇರೋಷನು ಪರ್ಶಿಯ ದೇಶದ ಅರಸನಾದಾಗ ಅವನಿಗೆ ಪತ್ರ ಬರೆದರು. ಅಧ್ಯಾಯವನ್ನು ನೋಡಿ |
ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.