ಎಜ್ರ 5:14 - ಕನ್ನಡ ಸಮಕಾಲಿಕ ಅನುವಾದ14 ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ದೇವಾಲಯದಿಂದ ತೆಗೆದುಕೊಂಡು, ಬಾಬಿಲೋನಿನ ಮಂದಿರಕ್ಕೆ ತಂದ ದೇವಸ್ಥಾನದ ಬೆಳ್ಳಿಬಂಗಾರದ ಸಾಮಗ್ರಿಗಳನ್ನು ಅರಸನಾದ ಕೋರೆಷನು ಬಾಬಿಲೋನಿನ ಮಂದಿರದಿಂದ ತೆಗೆದುಕೊಂಡು, ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ತೆಗೆದುಕೊಂಡುಹೋಗಿ, ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇಮಿಸಿದ ಶೆಷ್ಬಚ್ಚರನಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದು ಮಾತ್ರವಲ್ಲ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ತೆಗೆದುಕೊಂಡು ಹೋಗಿ ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗೆಯಿಸಿ, ತಾನು ರಾಜ್ಯಪಾಲನೆಗಾಗಿ ನೇಮಿಸಿದ್ದ ಶೆಷ್ಬಚ್ಚರನೆಂಬವನ ವಶಕ್ಕೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೆಬೂಕದ್ನೆಚ್ಚರನು ಯೆರೂಸಲೇವಿುನ ದೇವಾಲಯದಿಂದ ತೆಗೆದುಕೊಂಡುಹೋಗಿ ಬಾಬೆಲಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇವಿುಸಿದ ಶೆಷ್ಬಚ್ಚರನೆಂಬವನ ವಶಕ್ಕೆ ಕೊಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಹಿಂದಿನ ಕಾಲದಲ್ಲಿ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಬಂದು ಬಾಬಿಲೋನಿನಲ್ಲಿದ್ದ ತನ್ನ ವಿಗ್ರಹಾಲಯದಲ್ಲಿಟ್ಟಿದ್ದನು. ಆಲಯದಿಂದ ತೆಗೆದುಕೊಂಡು ಬಂದಿದ್ದ ಆ ಬೆಳ್ಳಿಬಂಗಾರದ ವಸ್ತುಗಳನ್ನು ಸೈರಸನು ಬಾಬಿಲೋನಿನ ತನ್ನ ವಿಗ್ರಹಾಲಯದಿಂದ ತೆಗೆದು ಶೆಷ್ಬಚ್ಚರನಿಗೆ (ಜೆರುಬ್ಬಾಬೆಲನಿಗೆ) ಕೊಟ್ಟು ಅವನನ್ನು ದೇಶಾಧಿಪತಿಯನ್ನಾಗಿ ನೇಮಿಸಿದನು.” ಅಧ್ಯಾಯವನ್ನು ನೋಡಿ |
ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,