Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಿಸಲು ಪ್ರಾರಂಭಿಸಿದರು. ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದನ್ನು ಕೇಳಿದ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್ ಯೋಚಾದಾಕನ ಮಗ ಯೇಷೂವ ಇವರು ಜೆರುಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನೆ ಇದ್ದು ಅವರಿಗೆ ಸಹಾಯಮಾಡುತ್ತ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇವಿುನ ದೇವಾಲಯವನ್ನು ಕಟ್ಟಿಸುವದಕ್ಕೆ ಪ್ರಾರಂಭಿಸಿದರು; ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೇಲ್ ಮತ್ತು ಯೋಚಾದಾಕನ ಮಗನಾದ ಯೇಷೂವನೂ ಜೆರುಸಲೇಮಿನಲ್ಲಿ ದೇವಾಲಯವನ್ನು ಕಟ್ಟುವ ಕಾರ್ಯವನ್ನು ಮತ್ತೆ ಪ್ರಾರಂಭಿಸಿದರು. ದೇವರ ಪ್ರವಾದಿಗಳೆಲ್ಲರೂ ಅವರೊಂದಿಗಿದ್ದು ಅವರನ್ನು ಪ್ರೋತ್ಸಾಹಪಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:2
16 ತಿಳಿವುಗಳ ಹೋಲಿಕೆ  

ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.


ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗನಾದ ಜೆಕರ್ಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ, ಕೋರೆಷ್, ದಾರ್ಯಾವೆಷ್ ಹಾಗೂ ಅರ್ತಷಸ್ತ ಎಂಬ ಪರ್ಷಿಯದ ರಾಜರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.


ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತೇವೆಂದು ತಿಳಿಯಬೇಡಿರಿ. ಆದರೆ ನಿಮ್ಮ ಆನಂದಕ್ಕಾಗಿ ಕೆಲಸಮಾಡಿ, ನಾವೂ ಭಾಗಿಗಳಾಗಿರಲು ಬಯಸುತ್ತೇವೆ. ಏಕೆಂದರೆ, ನೀವು ವಿಶ್ವಾಸದಲ್ಲಿ ದೃಢವಾಗಿ ನಿಂತಿದ್ದೀರಲ್ಲ.


ಅಲ್ಲಿ ಬೆಳ್ಳಿ, ಬಂಗಾರವನ್ನು ತೆಗೆದುಕೊಂಡು, ಕಿರೀಟಗಳನ್ನು ಮಾಡಿ, ಅವುಗಳನ್ನು ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನ ತಲೆಯ ಮೇಲೆ ಇಟ್ಟು,


ಯಾಜಕರ ವಂಶಜರಲ್ಲಿ ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು ಯಾರೆಂದರೆ: ಯೋಚಾದಾಕನ ಮಗ ಯೇಷೂವನು ಮತ್ತು ಅವನ ಸಹೋದರರಲ್ಲಿ: ಮಾಸೇಯನು, ಎಲೀಯೆಜೆರನು, ಯಾರೀಬನು, ಗೆದಲ್ಯನು.


ಚೆನ್ನಾಗಿ ನೆನಪಿಗೆ ತಂದುಕೊಳ್ಳಿರಿ. ಇಂದಿನಿಂದ ಇದಕ್ಕೆ ಮುಂಚೆ ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ, ಯೆಹೋವ ದೇವರ ಮಂದಿರದ ಅಸ್ತಿವಾರವು ಹಾಕಲಾದ ದಿನದಿಂದ ಸೂಕ್ಷ್ಮವಾಗಿ ಯೋಚಿಸಿಕೊಳ್ಳಿರಿ.


ಅವುಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸದವನಾದ ಮಿತ್ರದಾತನ ಕೈಯಿಂದ ತರಿಸಿ, ಯೆಹೂದದ ರಾಜಕುಮಾರನಾದ ಶೆಷ್ಬಚ್ಚರನಿಗೆ ಎಣಿಸಿಕೊಟ್ಟನು.


ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೆಯ ವರ್ಷದ, ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ, ಉಳಿದ ಅವರ ಸಹೋದರರಾದ ಯಾಜಕರೂ, ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ, ಕೆಲಸವನ್ನು ಪ್ರಾರಂಭಿಸಿ ಇಪ್ಪತ್ತು ವರ್ಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಯೆಹೋವ ದೇವರ ಆಲಯದ ಕೆಲಸ ಮಾಡುವವರ ಮೇಲೆ ಮೇಲ್ವಿಚಾರಕರನ್ನಾಗಿ ನೇಮಿಸಿದರು.


ಹೀಗೆ ನಾನು ಉತ್ತರಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ, “ನನ್ನ ಒಡೆಯನೇ, ಇವೇನು?” ಎಂದೆನು.


ಆಗ ಅವನು, “ಇವು ಸಮಸ್ತ ಭೂಮಿಯ ಕರ್ತ ಆಗಿರುವವರ ಸನ್ನಿಧಿಸೇವೆ ಮಾಡಲು ಅಭಿಷೇಕ ಹೊಂದಿರುವ ಇಬ್ಬರು ಸೇವಕರನ್ನು ಸೂಚಿಸುತ್ತದೆ,” ಎಂದನು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ದೇವಾಲಯವನ್ನು ಕಟ್ಟುವ ಹಾಗೆ ಸೇನಾಧೀಶ್ವರ ಯೆಹೋವ ದೇವರ ಆಲಯದ ಅಸ್ತಿವಾರವು ಹಾಕಲಾದ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು