Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:5 - ಕನ್ನಡ ಸಮಕಾಲಿಕ ಅನುವಾದ

5 ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವವರೆಗೂ, ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಉತ್ತರವನ್ನು ಪತ್ರದಲ್ಲಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಯೆಹೂದ್ಯರು ಮತ್ತು ಹಿರಿಯರೊಂದಿಗೆ ದೇವರ ಕೃಪಾಕಟಾಕ್ಷ ಇದ್ದುದರಿಂದ ವಿಚಾರಿಸುವುದಕ್ಕೆ ಬಂದವರು ಅವರಿಗೆ ಅಡ್ಡಿಮಾಡದೆ, ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ವರ್ತಮಾನ ಮುಟ್ಟಿಸಿ, ಉತ್ತರವನ್ನು ಬರೆದು ಕಳುಹಿಸುವೆವೆಂದು ಹೇಳಿ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ದೇವರ ಕೃಪಾಹಸ್ತವು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆದುದರಿಂದ ವಿಚಾರಿಸುವುದಕ್ಕೆ ಬಂದವರು, ಅವರಿಗೆ ಅಡ್ಡಮಾಡದೆ, “ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ಸಮಾಚಾರ ಮುಟ್ಟಿಸಿ ಅನಂತರ ಉತ್ತರವನ್ನು ಬರೆದು ಕಳುಹಿಸುತ್ತೇವೆ,” ಎಂದು ಹೇಳಿ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೂದ್ಯರ ಹಿರಿಯರು ತಮ್ಮ ದೇವರ ಕಟಾಕ್ಷಕ್ಕೆ ಪಾತ್ರರಾಗಿದ್ದದ್ದರಿಂದ ವಿಚಾರಿಸುವದಕ್ಕೆ ಬಂದವರು ಅವರಿಗೆ ಅಡ್ಡಿ ಮಾಡದೆ ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ವರ್ತಮಾನ ಮುಟ್ಟಿಸಿ ಉತ್ತರವನ್ನು ಬರೆದು ಕಳುಹಿಸುವೆವೆಂದು ಹೇಳಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಯೆಹೂದ್ಯರ ನಾಯಕರ ಮೇಲೆ ದೇವರ ಕೃಪಾಕಟಾಕ್ಷವಿತ್ತು. ರಾಜನಾದ ದಾರ್ಯಾವೆಷನಿಗೆ ವರದಿ ತಲುಪಿ ಉತ್ತರವನ್ನು ಕಳುಹಿಸುವ ತನಕ ನಾಯಕರು ಕಟ್ಟಡದ ಕೆಲಸವನ್ನು ಮುಂದುವರಿಸುತ್ತಲೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:5
12 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಕಣ್ಣು ತಮಗೆ ಭಯಪಡುವವರ ಮೇಲಿರುತ್ತದೆ, ಅವರ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರ ಮೇಲೆಯೂ ಇರುತ್ತೆ.


ಅರಸನ ಮುಂದೆಯೂ, ಅವನ ಸಲಹೆಗಾರರ ಮುಂದೆಯೂ, ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆತೋರಿಸಿದ್ದಾರೆ. ಹೀಗೆಯೇ ನನ್ನ ದೇವರಾಗಿರುವ ಯೆಹೋವ ದೇವರ ಹಸ್ತವು ನನ್ನ ಮೇಲೆ ಇದ್ದುದರಿಂದ, ನಾನು ಧೈರ್ಯಗೊಂಡು ಇಸ್ರಾಯೇಲಿನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು,” ಎಂದನು.


ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು.


ಏಕೆಂದರೆ ನೀತಿವಂತರ ಮೇಲೆ ಕರ್ತದೇವರು ದೃಷ್ಟಿ ಇಡುತ್ತಾರೆ. ಅವರ ಪ್ರಾರ್ಥನೆಗಳಿಗೆ ಕರ್ತದೇವರು ಕಿವಿಗೊಡುತ್ತಾರೆ. ಆದರೆ ಕೆಟ್ಟದ್ದನ್ನು ಮಾಡುವವರಿಗೆ ದೇವರು ವಿಮುಖರಾಗಿದ್ದಾರೆ,” ಎಂದು ಪವಿತ್ರ ವೇದದಲ್ಲಿ ಬರೆದಿದೆಯಲ್ಲಾ?


ನೀತಿವಂತರ ಮೇಲೆ ಯೆಹೋವ ದೇವರು ದೃಷ್ಟಿ ಇಡುತ್ತಾರೆ, ಅವರು ಮೊರೆಯಿಡುವಾಗ ದೇವರು ಕಿವಿಗೊಡುತ್ತಾರೆ.


ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿನಗೆ ಬುದ್ಧಿ ಹೇಳಿ, ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಮೆಚ್ಚುಗೆಯಿಂದ ನಿನ್ನನ್ನು ನಡೆಸುವೆನು.


“ನಮ್ಮ ದೇವರ ಕೃಪಾಹಸ್ತವು ಅವರನ್ನು ಹುಡುಕುವವರೆಲ್ಲರ ಮೇಲೆಯೂ ಇದೆ, ಆದರೆ ಅವರ ಕೋಪವು ಅವರನ್ನು ತ್ಯಜಿಸುವ ಎಲ್ಲರ ವಿರುದ್ಧವಾಗಿರುತ್ತದೆ,” ಎಂದು ನಾವು ಅರಸನಿಗೆ ಹೇಳಿದ್ದರಿಂದ, ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಸೈನ್ಯವನ್ನೂ ಅಶ್ವಬಲವನ್ನೂ ಅರಸನಿಂದ ಕೇಳಲು ನಾಚಿಕೆಪಟ್ಟೆವು.


ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಿಯೂ ಅಂಜದೆ ಧೈರ್ಯದಿಂದಿರಿ. ನೀವು ಧೈರ್ಯದಿಂದಿರುವುದು, ಅವರ ವಿನಾಶಕ್ಕೂ, ನಿಮ್ಮ ರಕ್ಷಣೆಗೂ ದೇವರಿಂದಾದ ಸೂಚನೆಯಾಗಿದೆ.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು