Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:14 - ಕನ್ನಡ ಸಮಕಾಲಿಕ ಅನುವಾದ

14 ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗನಾದ ಜೆಕರ್ಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ, ಕೋರೆಷ್, ದಾರ್ಯಾವೆಷ್ ಹಾಗೂ ಅರ್ತಷಸ್ತ ಎಂಬ ಪರ್ಷಿಯದ ರಾಜರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೂದ್ಯರ ಹಿರಿಯರು, ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರವಾದನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪರ್ಷಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೆಹೂದ್ಯರ ಹಿರಿಯರು ಪ್ರವಾದಿ ಹಗ್ಗೈ ಹಾಗು ಇದ್ದೋವಿನ ಮಗ ಜೆಕರೀಯ ಅವರ ಪ್ರಬೋಧನೆಯಿಂದ ಪ್ರೇರಿತರಾಗಿ, ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಯೇಲ್ ದೇವರ ಆಜ್ಞಾನುಸಾರ ಪರ್ಷಿಯದ ರಾಜ ಸೈರಸನ, ದಾರ್ಯಾವೆಷ್ ಹಾಗು ಅರ್ತಷಸ್ತ ಅವರ ಅಪ್ಪಣೆಯ ಆಧಾರದಿಂದ ಕಟ್ಟಡವನ್ನು ಮುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೂದ್ಯರ ಹಿರಿಯರು ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರಬೋಧನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಸಾಗಿಸುತ್ತಾ ಬಂದು ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪಾರಸಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹೀಗೆ ಯೆಹೂದ್ಯರ ಹಿರಿಯರು ದೇವಾಲಯದ ಕಟ್ಟಡ ಕೆಲಸವನ್ನು ಮುಂದುವರಿಸಿದರು. ಪ್ರವಾದಿಯಾದ ಹಗ್ಗೈನಂತೆ ಮತ್ತು ಇದ್ದೋವಿನ ಮಗನಾದ ಜೆಕರೀಯನಂತೆ ಅವರನ್ನು ಪ್ರೋತ್ಸಾಹಿಸುತ್ತಾ ಇದ್ದರು. ಆದ್ದರಿಂದ ಅವರು ಯಶಸ್ವಿಯಾದರು. ದೇವಾಲಯದ ಕೆಲಸ ಮುಗಿಯಿತು. ಇಸ್ರೇಲಿನ ದೇವರ ಆಜ್ಞೆಗೆ ವಿಧೇಯರಾಗಿಯೂ, ಸೈರಸ್, ದಾರ್ಯಾವೆಷ ಮತ್ತು ಅರ್ತಷಸ್ತ ಎಂಬ ಪರ್ಶಿಯ ಅರಸರ ಆಜ್ಞೆಗೆ ವಿಧೇಯರಾಗಿಯೂ ಕಟ್ಟಡದ ಕೆಲಸವನ್ನು ಸಂಪೂರ್ಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:14
25 ತಿಳಿವುಗಳ ಹೋಲಿಕೆ  

ಈ ಕಾರ್ಯಗಳಾದ ತರುವಾಯ ಪಾರಸಿಯ ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಹೊರಟುಹೋದನು. ಇವನು ಸೆರಾಯನ ಮಗನು; ಇವನು ಅಜರ್ಯನ ಮಗನು; ಇವನು ಹಿಲ್ಕೀಯನ ಮಗನು;


“ಆದರೆ ಬಾಬಿಲೋನಿನ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ದೇವರ ಈ ಆಲಯವನ್ನು ಪುನಃ ಕಟ್ಟಲು ಆಜ್ಞೆಯನ್ನು ಕೊಟ್ಟನು.


ಅಂದಿನಿಂದ ಪರ್ಷಿಯ ದೇಶದ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.


“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳೇ ಅದನ್ನು ಪೂರೈಸುವುವು. ಆಗ ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ತಿಳಿಯುವಿರಿ.


ಬೆಟ್ಟಕ್ಕೆ ಹೋಗಿ ಮರವನ್ನು ತಂದು, ಆಲಯವನ್ನು ಕಟ್ಟಿರಿ. ಆಗ ನಾನು ಅದಕ್ಕೆ ಮೆಚ್ಚಿ, ಮಹಿಮೆ ಹೊಂದುವೆನೆಂದು, ಯೆಹೋವ ದೇವರು ಹೇಳುತ್ತಾರೆ.


ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’


ಆದರೆ ಜೆರುಬ್ಬಾಬೆಲನೂ, ಯೇಷೂವನೂ, ಮಿಕ್ಕಾದ ಇಸ್ರಾಯೇಲಿನ ಕುಟುಂಬಗಳ ಮುಖ್ಯಸ್ಥರೂ ಅವರಿಗೆ, “ನಮ್ಮ ದೇವರಿಗೆ ಆಲಯವನ್ನು ಕಟ್ಟುವುದರಲ್ಲಿ ನಿಮಗೆ ಭಾಗವಿಲ್ಲ. ಪಾರಸಿಯ ಅರಸನಾದ ಕೋರೆಷನು ನಮಗೆ ಆಜ್ಞಾಪಿಸಿದ ಹಾಗೆ, ನಾವು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರಿಗೆ ಅದನ್ನು ಕಟ್ಟುವೆವು,” ಎಂದರು.


ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೆಯ ವರ್ಷದ, ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ, ಉಳಿದ ಅವರ ಸಹೋದರರಾದ ಯಾಜಕರೂ, ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ, ಕೆಲಸವನ್ನು ಪ್ರಾರಂಭಿಸಿ ಇಪ್ಪತ್ತು ವರ್ಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಯೆಹೋವ ದೇವರ ಆಲಯದ ಕೆಲಸ ಮಾಡುವವರ ಮೇಲೆ ಮೇಲ್ವಿಚಾರಕರನ್ನಾಗಿ ನೇಮಿಸಿದರು.


ಈಗ ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.


ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಿಸಲು ಪ್ರಾರಂಭಿಸಿದರು. ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.


ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:


ಪರ್ಷಿಯಾದ ಅರಸ ದಾರ್ಯಾವೆಷನ ಎರಡನೆಯ ವರ್ಷ, ಎಂಟನೆಯ ತಿಂಗಳಿನಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು:


“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ. ನನ್ನ ಆಲಯವು ಅದರಲ್ಲಿ ಕಟ್ಟಲಾಗುವುದು. ಯೆರೂಸಲೇಮಿನ ಮೇಲೆ ಅಳತೆಯ ನೂಲು ಚಾಚಲಾಗುವುದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ದೇವಾಲಯವನ್ನು ಕಟ್ಟುವ ಹಾಗೆ ಸೇನಾಧೀಶ್ವರ ಯೆಹೋವ ದೇವರ ಆಲಯದ ಅಸ್ತಿವಾರವು ಹಾಕಲಾದ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.


ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನೆಂದರೆ: ಜನರು ಬಲಿಗಳನ್ನು ಸಮರ್ಪಿಸುವುದಕ್ಕಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಅಸ್ತಿವಾರಗಳನ್ನು ಬಲವಾಗಿ ಹಾಕಬೇಕು. ಅದರ ಎತ್ತರ 27 ಮೀಟರ್, ಅದರ ಅಗಲ 27 ಮೀಟರ್ ಆಗಿರಲಿ.


ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವುದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನೆಂದರೆ: ಅವರು ಅಭ್ಯಂತರ ಮಾಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ತೆರಿಗೆಯಿಂದಲೇ ಈ ಮನುಷ್ಯರಿಗೆ ವೆಚ್ಚವನ್ನು ಕೊಡಬೇಕು.


ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸಲು ನಮಗೆ ನವಜೀವನ ಕೊಟ್ಟು, ಯೆಹೂದ ಮತ್ತು ಯೆರೂಸಲೇಮಿನಲ್ಲಿ ನಮಗೆ ಸಂರಕ್ಷಣೆಯ ಗೋಡೆ ಸಿಗುವಂತೆ, ಪಾರಸಿಯ ರಾಜರ ಸಮ್ಮುಖದಲ್ಲಿ ನಮಗೆ ದಯೆಯನ್ನು ದಯಪಾಲಿಸಿದ್ದೀರಿ.


ಹೀಗೆ ಗೋಡೆಯು ಐವತ್ತೆರಡು ದಿವಸಗಳಲ್ಲಿ ಏಲುಲ್ ತಿಂಗಳದ ಇಪ್ಪತ್ತೈದನೆಯ ದಿವಸದಲ್ಲಿ ಮುಗಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು