ಎಜ್ರ 6:17 - ಕನ್ನಡ ಸಮಕಾಲಿಕ ಅನುವಾದ17 ದೇವರ ಆಲಯದ ಪ್ರತಿಷ್ಠಾಪನೆಗೋಸ್ಕರ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ, ನಾನೂರು ಕುರಿಮರಿಗಳನ್ನೂ, ಇಸ್ರಾಯೇಲ್ ಕುಲ ಗೋತ್ರಗಳ ಲೆಕ್ಕದ ಪ್ರಕಾರ, ಸಮಸ್ತ ಇಸ್ರಾಯೇಲರ ದೋಷಪರಿಹಾರ ಬಲಿಗಾಗಿ ಹನ್ನೆರಡು ಮೇಕೆಯ ಹೋತಗಳನ್ನೂ ಅರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ, ಇಸ್ರಾಯೇಲರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರು ಆ ದೇವಾಲಯದ ಪ್ರತಿಷ್ಠೆಗಾಗಿ ನೂರು ಹೋರಿ, ಇನ್ನೂರು ಟಗರು ಹಾಗು ನಾನೂರು ಕುರಿಮರಿಗಳನ್ನು ಅರ್ಪಿಸಿದರು. ಅಲ್ಲದೆ ಇಸ್ರಯೇಲರ ದೋಷಪರಿಹಾರಾರ್ಥವಾಗಿ, ಅವರ ಕುಲಗಳ ಸಂಖ್ಯಾನುಸಾರ, ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರು ಆ ದೇವಾಲಯದ ಪ್ರತಿಷ್ಠೆಗೋಸ್ಕರ ನೂರು ಹೋರಿ, ಇನ್ನೂರು ಟಗರು, ನಾನೂರು ಕುರಿಮರಿ ಇವುಗಳನ್ನೂ ಇಸ್ರಾಯೇಲ್ಯರ ದೋಷಪರಿಹಾರಾರ್ಥವಾಗಿ ಅವರ ಕುಲಗಳ ಸಂಖ್ಯಾನುಸಾರ ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷ ಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು. ಅಧ್ಯಾಯವನ್ನು ನೋಡಿ |