ಎಜ್ರ 6:18 - ಕನ್ನಡ ಸಮಕಾಲಿಕ ಅನುವಾದ18 ಮೋಶೆಯ ಗ್ರಂಥದಲ್ಲಿ ಬರೆದ ಹಾಗೆ ಯೆರೂಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆಗೋಸ್ಕರ ಯಾಜಕರನ್ನು ಮತ್ತು ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು ಮೋಶೆಯ ಧರ್ಮಶಾಸ್ತ್ರನಿಯಮದ ಪ್ರಕಾರ, ಜೆರುಸಲೇಮಿನ ದೇವರ ಸೇವೆಗೆ ನೇಮಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು ಮೋಶೆಯ ಧರ್ಮಶಾಸ್ತ್ರನಿಯಮದ ಪ್ರಕಾರ ಯೆರೂಸಲೇವಿುನ ದೇವರ ಸೇವೆಗೆ ನೇವಿುಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅನಂತರ ಯಾಜಕರನ್ನು ಮತ್ತು ಲೇವಿಯರನ್ನು ಅವರವರ ವರ್ಗಗಳಿಗನುಸಾರವಾಗಿ, ಮೋಶೆಯ ವಿಧಿಯಂತೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಆರಿಸಿದರು. ಅಧ್ಯಾಯವನ್ನು ನೋಡಿ |
ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.