ಎಜ್ರ 6:20 - ಕನ್ನಡ ಸಮಕಾಲಿಕ ಅನುವಾದ20 ಯಾಜಕರೂ ಲೇವಿಯರೂ ಕೂಡ ಶುದ್ಧ ಮಾಡಿಕೊಂಡಿದ್ದರು. ಅವರೆಲ್ಲರು ಶುದ್ಧರಾದ ನಂತರ, ಲೇವಿಯರು ಸೆರೆಯಿಂದ ಬಂದವರೆಲ್ಲರಿಗೋಸ್ಕರವೂ, ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಯನ್ನು ವಧಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯಾಜಕರೂ ಮತ್ತು ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧವಾದನಂತರ ಲೇವಿಯರು ದೇಶಾಂತರದಿಂದ ಹಿಂದಿರುಗಿ ಬಂದವರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಗಳನ್ನು ವಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯಾಜಕರು ಹಾಗು ಲೇವಿಯರು ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧರಾದ ನಂತರ ಲೇವಿಯರು ಸೆರೆಯಿಂದ ಬಂದವರಿಗಾಗಿ, ತಮ್ಮ ಬಂಧುಗಳಾದ ಯಾಜಕರಿಗಾಗಿ ಹಾಗು ತಮಗಾಗಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಪಡಿಸಿಕೊಂಡರು. ಎಲ್ಲರೂ ಶುದ್ಧವಾದನಂತರ [ಲೇವಿಯರು] ಸೆರೆಯಿಂದ ಬಂದವರಿಗೋಸ್ಕರವೂ ತಮ್ಮ ಬಂಧುಗಳಾದ ಯಾಜಕರಿಗೋಸ್ಕರವೂ ತಮಗೋಸ್ಕರವೂ ಪಸ್ಕದ ಕುರಿಮರಿಗಳನ್ನು ವಧಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಮಾಡಿಕೊಂಡು ಹಬ್ಬವನ್ನು ಆಚರಿಸಲು ಸಿದ್ಧರಾದರು. ಪಸ್ಕದ ಕುರಿಮರಿಯನ್ನು ಎಲ್ಲಾ ಇಸ್ರೇಲರಿಗಾಗಿಯೂ ತಮಗಾಗಿಯೂ ಯಾಜಕರಿಗಾಗಿಯೂ ಲೇವಿಯರು ವಧಿಸಿದರು. ಅಧ್ಯಾಯವನ್ನು ನೋಡಿ |