Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:12 - ಕನ್ನಡ ಸಮಕಾಲಿಕ ಅನುವಾದ

12 ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ, ಪರಲೋಕ ದೇವರ ನಿಯಮದಲ್ಲಿ ಪ್ರವೀಣನೂ ಆದ ಎಜ್ರನಿಗೆ, ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ತಿಳಿಸುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕ ದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ರಾಜಾಧಿರಾಜನಾದ ಅರ್ತಷಸ್ತನು ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ಇತ್ಯಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅರಸನಾದ ಅರ್ತಷಸ್ತನಿಂದ: ಪರಲೋಕದ ದೇವರ ಕಟ್ಟಳೆಗಳ ಬೋಧಕನೂ ಯಾಜಕನೂ ಆಗಿರುವ ಎಜ್ರನಿಗೆ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:12
15 ತಿಳಿವುಗಳ ಹೋಲಿಕೆ  

ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಉತ್ತರದ ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡವೂ ಸವಾರರ ಸಂಗಡವೂ ರಥಗಳ ಸಂಗಡವೂ ಬಹುಜನರ ಸಂಗಡವೂ ಟೈರಿನ ಮೇಲೆ ತರುತ್ತೇನೆ.


ಈ ಪತ್ರಕ್ಕೆ ಅರಸನು ಅವರಿಗೆ ಕೊಟ್ಟ ಉತ್ತರ: ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರಿಗೂ, ಸಮಾರ್ಯದಲ್ಲಿರುವವರಿಗೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಇತರರಿಗೂ, ಕ್ಷೇಮಾಭಿಲಾಶೆಗಳು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ರಾಜಾಧಿರಾಜನೂ ಕರ್ತರ ಕರ್ತನೂ ಭಾಗ್ಯವಂತರಾದ ಏಕಾಧಿಪತಿಯು ತಮ್ಮ ಸಮಯಗಳಲ್ಲೆ ಕ್ರಿಸ್ತ ಯೇಸುವನ್ನು ಪ್ರತ್ಯಕ್ಷಪಡಿಸುವರು.


ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.


ಏಕೆಂದರೆ ಅವನು, ‘ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?


ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸರಿದ್ದರು. ಅವನು ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ, ಅದರ ಮೇಲೆ ಯುದ್ಧಮಾಡಿದನು.


ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗೂ, ನದಿಯ ಈಚೆಯಲ್ಲಿರುವ ಸಮಸ್ತ ಅರಸರ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಅವನಿಗೆ ಸುತ್ತಲಿರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಿತ್ತು.


ಈ ಕಾರ್ಯಗಳಾದ ತರುವಾಯ ಪಾರಸಿಯ ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಹೊರಟುಹೋದನು. ಇವನು ಸೆರಾಯನ ಮಗನು; ಇವನು ಅಜರ್ಯನ ಮಗನು; ಇವನು ಹಿಲ್ಕೀಯನ ಮಗನು;


ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು.


ಯಾಜಕನು, ನಿಯಮಶಾಸ್ತ್ರಿಯು ಹಾಗೂ ಇಸ್ರಾಯೇಲರಿಗೆ ಕೊಡಲಾದ ಯೆಹೋವ ದೇವರ ಆಜ್ಞಾಸೂತ್ರಗಳಲ್ಲಿ ವಿದ್ವಾಂಸನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು:


“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು