Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:13 - ಕನ್ನಡ ಸಮಕಾಲಿಕ ಅನುವಾದ

13 ನನ್ನ ರಾಜ್ಯದಲ್ಲಿರುವ ಇಸ್ರಾಯೇಲರಲ್ಲಿ, ಯಾಜಕರಲ್ಲಿ ಹಾಗು ಲೇವಿಯರಲ್ಲಿ ಯಾರಿಗೆ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸಿದೆಯೋ, ಅವರೆಲ್ಲರು ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ರಾಜ್ಯದಲ್ಲಿರುವ ಇಸ್ರಾಯೇಲರು ತಮ್ಮ ಯಾಜಕರು ಮತ್ತು ಲೇವಿಯರು ಹಾಗು ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸುಳ್ಳವರೆಲ್ಲರೂ ನಿನ್ನ ಸಂಗಡ ಹೋಗಬಹುದೆಂದು ಅಪ್ಪಣೆ ಕೊಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನನ್ನ ರಾಜ್ಯದಲ್ಲಿರುವ ಇಸ್ರಯೇಲರಲ್ಲಿ, ಯಾಜಕರಲ್ಲಿ ಹಾಗು ಲೇವಿಯರಲ್ಲಿ ಯಾರು ಯಾರಿಗೆ ಜೆರುಸಲೇಮಿಗೆ ಹೋಗುವುದಕ್ಕೆ ಮನಸ್ಸಿದೆಯೋ ಅವರೆಲ್ಲರು ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ರಾಜ್ಯದಲ್ಲಿರುವ ಇಸ್ರಾಯೇಲ್ಯರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸುಳ್ಳವರೆಲ್ಲರೂ ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಆಜ್ಞೆಯನ್ನು ಕೊಡುವ ನಾನು ತಿಳಿಸುವುದೇನೆಂದರೆ, ನನ್ನ ಸಾಮ್ರಾಜ್ಯದಲ್ಲಿರುವ ಇಸ್ರೇಲರ ಯಾಜಕರು, ಲೇವಿಯರು, ಜನರೆಲ್ಲರೂ ಎಜ್ರನೊಂದಿಗೆ ಜೆರುಸಲೇಮಿಗೆ ಹೋಗಲು ಇಚ್ಛಿಸುವುದಾದರೆ ಅವರು ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:13
11 ತಿಳಿವುಗಳ ಹೋಲಿಕೆ  

ಆಗ ಅರಸನಾದ ದಾರ್ಯಾವೆಷನ ಅಪ್ಪಣೆಯ ಪ್ರಕಾರ ಅವರು ಬಾಬಿಲೋನಿನ ಭಂಡಾರದಲ್ಲಿದ್ದ ಗ್ರಂಥಾಲಯದಲ್ಲಿ ಹುಡುಕಿದರು.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.


ಅವುಗಳನ್ನು ಯುಗ ಯುಗಗಳಿಗೂ ಸ್ಥಾಪಿಸಿದ್ದಾರೆ; ದೇವರು ತೀರ್ಪನ್ನು ಕೊಟ್ಟಿದ್ದಾರೆ, ಅದು ಮೀರಿ ಹೋಗುವುದಿಲ್ಲ.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಜಾರಿಗೆಬಂದಾಗ ಅವರು ಹಾಮಾನನ ಹತ್ತು ಮಂದಿ ಪುತ್ರರ ಶವವನ್ನು ಗಲ್ಲಿಗೆ ಹಾಕಿದರು.


ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನಿನ ಅರಮನೆಯಲ್ಲಿಂದ ಆ ಆಜ್ಞೆಯು ಹೊರಡಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವೋ ತಳಮಳಗೊಂಡಿತ್ತು.


“ಆದರೆ ಬಾಬಿಲೋನಿನ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ದೇವರ ಈ ಆಲಯವನ್ನು ಪುನಃ ಕಟ್ಟಲು ಆಜ್ಞೆಯನ್ನು ಕೊಟ್ಟನು.


ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಯೆಹೂದ, ಯೆರೂಸಲೇಮಿಗೆ ಹೋಗಿ, ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಒಂದು ದೇವಾಲಯವನ್ನು ಕಟ್ಟಲಿ, ಅವರ ಸಂಗಡ ಅವರ ದೇವರು ಇರಲಿ!


ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.


“ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ. “ಅವರೇ ಜೀವವುಳ್ಳ ದೇವರಾಗಿದ್ದು, ಎಂದೆಂದಿಗೂ ಸ್ಥಿರವಾಗಿರುವವರಾಗಿದ್ದಾರೆ. ಅವರ ರಾಜ್ಯವು ನಾಶವಾಗದೆ, ಅವರ ಆಳ್ವಿಕೆ ಶಾಶ್ವತವಾಗಿ ನಿಲ್ಲುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು