Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:15 - ಕನ್ನಡ ಸಮಕಾಲಿಕ ಅನುವಾದ

15 ಅರಸನು ಮತ್ತು ಅವನ ಮಂತ್ರಿಗಳು ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರವನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೊಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅರಸನು ಮತ್ತು ಅವನ ಮಂತ್ರಿಗಳು ಜೆರುಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರವನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇವಿುನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೋಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿ ಬಂಗಾರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನೂ ನನ್ನ ಸಲಹೆಗಾರರೂ ಜೆರುಸಲೇಮಿನಲ್ಲಿರುವ ಇಸ್ರೇಲಿನ ದೇವರಿಗೆ ಬೆಳ್ಳಿಬಂಗಾರಗಳನ್ನು ಅರ್ಪಿಸುತ್ತೇವೆ. ನೀನು ಹೋಗುವಾಗ ಅವುಗಳನ್ನು ತೆಗೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:15
20 ತಿಳಿವುಗಳ ಹೋಲಿಕೆ  

ಯೆರೂಸಲೇಮಿನಲ್ಲಿ ವಾಸಿಸುವವ ಯೆಹೋವ ದೇವರನ್ನು ಕೊಂಡಾಡಿ ಸ್ತುತಿಸಿರಿ; ಅವರ ಕೀರ್ತಿಯು ಚೀಯೋನಿನಿಂದ ಹೊರಗೂ ಹಬ್ಬಲಿ. ಯೆಹೋವ ದೇವರಿಗೆ ಸ್ತೋತ್ರ.


ಆದರೆ ನಾನು ನಿಮಗೋಸ್ಕರ ಭವ್ಯವಾದ ಮಂದಿರವನ್ನು ಕಟ್ಟಿಸಿದ್ದೇನೆ, ಅದು ನಿಮಗೆ ಶಾಶ್ವತವಾದ ವಾಸಸ್ಥಳವಾಗಿರಲಿ,” ಎಂದನು.


ಇದಲ್ಲದೆ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡಿರಲು, ಯೆರೂಸಲೇಮಿನ ಈ ದೇವಾಲಯವನ್ನು ಕಟ್ಟಬೇಕೆಂಬ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ದೇವಾಲಯವನ್ನು ನಾಶಮಾಡುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ, ಜನರನ್ನೂ ದೇವರು ನಾಶಮಾಡಲಿ. ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಪಾಲಿಸಬೇಕು, ಎಂಬುದು.


ನಿಮ್ಮ ದೇವರಾದ ಯೆಹೋವ ದೇವರಿಗೆ ಹರಕೆಮಾಡಿ ಸಲ್ಲಿಸಿರಿ. ದೇವರ ಸುತ್ತಲಿರುವವರೆಲ್ಲರು ಭಯಭಕ್ತಿಗೆ ಪಾತ್ರರಾದವರಿಗೆ ಕಾಣಿಕೆಗಳನ್ನು ತರಲಿ.


ಸಾಲೇಮಿನಲ್ಲಿ ದೇವರ ಗುಡಾರವೂ ಚೀಯೋನಿನಲ್ಲಿ ಅವರ ವಾಸಸ್ಥಾನವೂ ಉಂಟು.


ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ಅರಸನಿಗೆ ಸಲ್ಲಿಸಲಿ. ಶೆಬ ಮತ್ತು ಸೆಬದ ಅರಸರು ದಾನಗಳನ್ನು ತಂದೊಪ್ಪಿಸಲಿ.


ಯೆಹೋವ ದೇವರೇ, ನೀವು ವಾಸಿಸುವ ಆಲಯವನ್ನೂ, ನಿಮ್ಮ ಮಹಿಮೆಯ ನಿವಾಸವನ್ನೂ ಪ್ರೀತಿಸುತ್ತೇನೆ.


ಚೀಯೋನಿನಲ್ಲಿ ವಾಸಿಸುವ ಯೆಹೋವ ದೇವರಿಗೆ ಸ್ತುತಿಹಾಡಿರಿ; ಅವರ ಕ್ರಿಯೆಗಳನ್ನು ರಾಷ್ಟ್ರಗಳಲ್ಲಿ ಸಾರಿ ಹೇಳಿರಿ.


ದೊಡ್ಡ ಕಲ್ಲುಗಳ ಮೂರು ಸಾಲುಗಳೂ, ಹೊಸ ತೊಲೆಗಳ ಒಂದು ಸಾಲೂ ಇರಲಿ. ಅದರ ಖರ್ಚು ಅರಮನೆಯ ಬೊಕ್ಕಸದಿಂದ ಕೊಡಲಾಗುವುದು.


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


ಆದರೆ ಅವರಿಗೋಸ್ಕರ ಆಲಯವನ್ನು ಕಟ್ಟಿಸಲು ಸಮರ್ಥನಾದವನು ಯಾರು? ಆಕಾಶವೂ ಉನ್ನತೋನ್ನತ ಆಕಾಶವೂ ಅವರಿಗೆ ಸಾಲದು. ಅವರ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಅವರಿಗೆ ಆಲಯವನ್ನು ಕಟ್ಟಿಸಲು ನಾನು ಎಷ್ಟರವನು?


ಆಗ ಪಿತೃಗಳ ಪ್ರಧಾನರೂ, ಇಸ್ರಾಯೇಲ್ ಗೋತ್ರಗಳ ಪ್ರಧಾನರೂ, ಸಹಸ್ರಾಧಿಪತಿಗಳೂ ಶತಾಧಿಪತಿಗಳೂ, ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು,


ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ನಿಯಮ ಗ್ರಂಥಕ್ಕೆ ಅನುಗುಣವಾಗಿ ಇದೆಯೋ, ಇಲ್ಲವೋ ವಿಮರ್ಶೆ ಮಾಡಬೇಕು.


ಅರಸನೂ, ಅವನ ಸಲಹೆಗಾರರೂ, ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ, ಬಂಗಾರವನ್ನೂ, ಸಲಕರಣೆಗಳನ್ನೂ ಅವರಿಗೆ ತೂಕಮಾಡಿ ಕೊಟ್ಟೆನು.


ಅನೇಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರಿಗೆ ಅರ್ಪಣೆಗಳನ್ನೂ, ಯೆಹೂದದ ಅರಸನಾದ ಹಿಜ್ಕೀಯನಿಗೆ ಕಾಣಿಕೆಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಮುಂದೆ ಉನ್ನತವಾಗಿದ್ದನು.


ಅವರ ನೆರೆಯವರೆಲ್ಲರು ಎಲ್ಲಾ ಕಾಣಿಕೆಗಳಲ್ಲದೇ, ಬೆಳ್ಳಿ ಹಾಗೂ ಬಂಗಾರದಿಂದ ಮಾಡಿದ ವಸ್ತುಗಳಿಂದಲೂ, ಪಶುಗಳಿಂದಲೂ, ಬೆಲೆಯುಳ್ಳವುಗಳಿಂದಲೂ ಅವರಿಗೆ ಧಾರಾಳವಾಗಿ ಸಹಾಯ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು