ಎಜ್ರ 7:21 - ಕನ್ನಡ ಸಮಕಾಲಿಕ ಅನುವಾದ21 “ಅರ್ತಷಸ್ತ ರಾಜನಾದ ನಾನು, ಯೂಫ್ರೇಟೀಸ್ ನದಿ ಆಚೆಯ ಪ್ರಾಂತಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ ಯಾಜಕನೂ, ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಅರ್ತಷಸ್ತ ರಾಜನಾದ ನಾನು ಹೊಳೆಯಾಚೆಯ ಪ್ರಾಂತ್ಯಗಳ ಭಂಡಾರಗಳ ಮುಖ್ಯಸ್ಥರಿಗೆ ಆಜ್ಞಾಪಿಸುವುದು ಏನೆಂದರೆ, ‘ಯಾಜಕರೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 :ಅರ್ತಷಸ್ತರಾಹನಾದ ನಾನು ನದಿ ಆಚೆಯ ಪ್ರಾಂತ್ಯಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ - ಯಾಜಕನೂ ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅರ್ತಷಸ್ತರಾಜನಾದ ನಾನು ಹೊಳೆಯಾಚೆಯ ಪ್ರಾಂತಗಳ ಭಂಡಾರಮುಖ್ಯಸ್ಥರಿಗೆ ಆಜ್ಞಾಪಿಸುವದು - ಯಾಜಕನೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವದನ್ನೆಲ್ಲಾ ನೀವು ತಪ್ಪದೆ ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅರಸನಾದ ಅರ್ತಷಸ್ತನೆಂಬ ನಾನು ಈ ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಈ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು. ಅಧ್ಯಾಯವನ್ನು ನೋಡಿ |